ಅಂಜನಾದ್ರಿಯಲ್ಲಿ ಸರಳ ಹನುಮ ಜಯಂತಿ
ಅರ್ಚಕ ಮಹಾಂತ ವಿದ್ಯಾದಾಸಬಾಬಾ ನೇತೃತ್ವದಲ್ಲಿ ಪೂಜೆ! ತಮ್ಮೂರಲ್ಲೇ ಹನುಮಮಾಲೆ ವಿಸರ್ಜನೆ ಮಾಡಿದ ಭಕ್ತರು
Team Udayavani, Apr 28, 2021, 4:55 PM IST
ಗಂಗಾವತಿ: ತಾಲೂಕಿನ ಕಿಷ್ಕಿಂದಾ ಅಂಜನಾದ್ರಿಯಲ್ಲಿ ಹನುಮಜಯಂತಿಯನ್ನು ಈ ಬಾರಿಯೂ ಸರಳವಾಗಿ ಆಚರಿಸಲಾಯಿತು.
ಕೊರೊನಾ 2ನೇ ಅಲೆ ಹಿಲ್ಲೆಯಲ್ಲಿ ಅಂಜನಾದ್ರಿಯಲ್ಲಿ ಈ ವರ್ಷವೂ ಹನುಮ ಮಾಲಾವಿಸರ್ಜನೆಗೆ ಜಿಲ್ಲಾಡಳಿತ ನಿಷೇಧ ಹೇರಿತ್ತು. ಅಂಜನಾದ್ರಿ ಬೆಟ್ಟ ಹತ್ತಲು ಹನುಮಮಾಲಾಧಾರಿ ಸೇರಿ ಯಾರೊಬ್ಬರಿಗೂ ಗ್ರಾಮೀಣ ಪೊಲೀಸರು ಅವಕಾಶ ನೀಡಲಿಲ್ಲ. ದೇಗುಲಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧವಿದ್ದ ಪರಿಣಾಮ ಅಂಜನಾದ್ರಿ ಪ್ರವೇಶ ಮಾಡದಂತೆ ಎಲ್ಲ ಮಾರ್ಗಗಳಿಗೂ ಪೊಲೀಸ್ ಕಾವಲು ಹಾಕಲಾಗಿತ್ತು.
ತಹಶೀಲ್ದಾರ್ ಅವಕಾಶ ನೀಡಿದ ಕೆಲವರಿಗೆ ಮಾತ್ರ ಬೆಟ್ಟ ಹತ್ತಲು ಅವಕಾಶ ಕಲ್ಪಿಸಲಾಗಿತ್ತು. ಧಾರವಾಡ ಹೈಕೋರ್ಟ್ ಸೂಚನೆಯಂತೆ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ನೇತೃತ್ವದಲ್ಲಿ ಹನುಮಜಯಂತಿ ನಿಮಿತ್ತ ದೇಗುಲದಲ್ಲಿ ಕೊರೊನಾ ಮಾರ್ಗಸೂಚಿಯಂತೆ ಪೂಜೆ, ಹೋಮ-ಹವನ ಜರುಗಿದವು. ತಾಲೂಕಿನ ಸಾಣಾಪುರ ಗ್ರಾಮದ ಬೆಟ್ಟದ ಮೇಲಿರುವ ಬಾಲಾಂಜನೇಯ ಸ್ವಾಮಿ ದೇಗುಲದಲ್ಲಿ ಸುತ್ತಲಿನ ಗ್ರಾಮಗಳ ಹನುಮಮಾಲಾಧಾರಿಗಳು ಬೆಳಗಿನ ಜಾವ ಮಾಲೆ ವಿಸರ್ಜನೆ ಮಾಡಿದರು. ನಗರದ ಕೋಟೆ ಆಂಜನೇಯ ಗುಡಿ ಜಯನಗರದ ಸತ್ಯಾತ್ಮ ಆಂಜನೇಯ, ಲಕ್ಷ್ಮಿ ಕ್ಯಾಂಪಿನ ಮಾರುತೇಶ್ವರ ಗುಡಿ ಹಿರೇಜಂತಗಲ್ ಹನುಮಂತದೇವರ ಗುಡಿಯಲ್ಲಿ ಸರಳವಾಗಿ ಹನುಮಜಯಂತಿ ಆಚರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.