“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
Team Udayavani, Mar 25, 2024, 11:18 PM IST
ಕಾರಟಗಿ: ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ ದೇಶದ ಪ್ರಧಾನಿ ಮೋದಿ ಅವರು, ಯುವಕರು ಉದ್ಯೋಗ ಕೇಳಿದರೆ ಪಕೋಡ ಮಾರಿ ಉದ್ಯೋಗ ಕಂಡುಕೊಳ್ಳುವಂತೆ ಬಿಟ್ಟಿ ಸಲಹೆ ಕೊಡುತ್ತಾರೆ. “ಮೋದಿ, ಮೋದಿ’ ಎನ್ನುವ ಯುವಕರು ಮತ್ತು ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ ಎಂದು ಸಚಿವ ಶಿವರಾಜ ತಂಗಡಗಿ ಅಸಮಾಧಾನ ಹೇಳಿದ್ದು, ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ.
ರವಿವಾರ ತಮ್ಮ ಗೃಹ ಕಚೇರಿಯಲ್ಲಿ ಲೋಕಸಭಾ ಚುನಾವಣೆ ನಿಮಿತ್ತ ಹಮ್ಮಿಕೊಂಡ ಕನಕಗಿರಿ ಕ್ಷೇತ್ರದ ಪಕ್ಷದ ಮುಖಂಡರು, ಕಾರ್ಯಕರ್ತರು, ಚುನಾಯಿತ ಜನಪ್ರತಿನಿಧಿಗಳ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬಂದು ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಇದರಿಂದ ಕಾಂಗ್ರೆಸ್ ಮತದಾರರ ಮನದಾಳದಲ್ಲಿ ಮೂಡಿಸಿಕೊಂ ಡಿದೆ. ಆದರೆ ಬಿಜೆಪಿ ವಿಶ್ವಾಸ ಕಳೆದುಕೊಂಡು ಬರೀ ಸುಳ್ಳು ಹೇಳುತ್ತಲೇ ಜನರನ್ನು ವಂಚಿಸು ತ್ತಿದ್ದಾರೆ. 18 ಸಾವಿರ ಕೋ. ರೂ. ಬರ ಪರಿಹಾರವನ್ನು ರಾಜ್ಯ ಸರಕಾರ ಕೇಳಿ 6 ತಿಂಗಳು ಕಳೆದರೂ 1 ರೂಪಾಯಿಯನ್ನೂ ನೀಡಿಲ್ಲ. ಹೀಗಾಗಿ ರಾಜ್ಯ ಸರಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಅಲ್ಲಿಯಾದರೂ ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದರು.
ತಂಗಡಗಿ ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು
ಬೆಂಗಳೂರು: ಮೋದಿ ಎಂದು ಕೂಗಿದವರ ಕಪಾಳಕ್ಕೆ ಹೊಡೆಯಬೇಕು ಎಂದಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ವಿರುದ್ಧ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಬಿಜೆಪಿ ನಾಯಕರು ದೂರು ನೀಡಿದ್ದು, ಚುನಾವಣ ಪ್ರಕ್ರಿಯೆ ಮತ್ತು ಕಾಂಗ್ರೆಸ್ ಪರ ಪ್ರಚಾರದಿಂದ ನಿರ್ಬಂಧಿಸುವಂತೆ ಆಗ್ರಹಿಸಿದ್ದಾರೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ನೇತೃತ್ವದ ತಂಡವು, ಬಿಜೆಪಿಯ ಯುವ ಮತದಾರರ ವಿರುದ್ಧ ಸಚಿವರು ಪ್ರಚೋದನಾತ್ಮಕ ಹಾಗೂ ಬೆದರಿಕೆ ಹುಟ್ಟಿಸುವ ರೀತಿಯ ಮಾತುಗಳನ್ನಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
“ನೀವು ನಿಮ್ಮ ಅಪ್ಪನಿಗೇ ಹುಟ್ಟಿದ್ದರೆ ಕಪಾಳಕ್ಕೆ ಹೊಡೆದು ನೋಡಿ ಎಂದು ಕೇಳಬೇಕೆನಿಸುತ್ತಿದೆ’
ಬೆಂಗಳೂರು: ಸಚಿವ ಶಿವರಾಜ ತಂಗಡಗಿಯವರ ಕಪಾಳ ಮೋಕ್ಷ ಹೇಳಿಕೆಗೆ ಮಾಜಿ ಸಚಿವ ಸಿ.ಟಿ.ರವಿ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ತಂಗಡಗಿ ನೀವು ನಿಮ್ಮ ಅಪ್ಪನಿಗೇ ಹುಟ್ಟಿದ್ದರೆ ಕಪಾಳಕ್ಕೆ ಹೊಡೆದು ನೋಡಿ ಅಂತ ಕೇಳಬೇಕು ಎಂದು ಅನ್ನಿಸಿತ್ತು. ಆದರೆ ನಾನು ಈ ಪ್ರಶ್ನೆ ಅವರಿಗೆ ಕೇಳುವುದಿಲ್ಲ. ಯಾಕೆಂದರೆ ನಾನು ಅವರ ಮಟ್ಟಕ್ಕೆ ಇಳಿಯುವುದಿಲ್ಲ’ ಎಂದು ತಿರುಗೇಟು ನೀಡಿದ್ದಾರೆ.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ತಂಗಡಗಿಗೆ ಸಂಸ್ಕೃತಿ ಇಲ್ಲ. ಮಂತ್ರಿ ಆಗುವುದಕ್ಕೆ ಯೋಗ್ಯತೆ ಇಲ್ಲ. ಸಂಸ್ಕೃತಿ ಇಲ್ಲದವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಟ್ಟಿದ್ದೇ ಅಪಚಾರ. ಸಿದ್ದರಾಮಯ್ಯ ಯೋಗ್ಯ ಮುಖ್ಯಮಂತ್ರಿಯಾಗಿದ್ದರೆ ಇಂಥ ಮಂತ್ರಿಯನ್ನು ಸಂಪುಟದಲ್ಲಿ ಇಟ್ಟುಕೊಳ್ಳುತ್ತಿರಲಿಲ್ಲ ಎಂದು ಕಿಡಿಕಾರಿದರು.
ಕಾಂಗ್ರೆಸಿಗರು ಹತಾಶರಾಗಿದ್ದಾರೆ. ತಮ್ಮ ಸ್ಥಾನದ ಅರಿವಿಲ್ಲದೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಬಿಜೆಪಿ ಮನೆ ಹಾಳಾಗಲಿ ಎಂದರು. ಆದರೆ ಮನೆ ಹಾಳು ಮಾಡುವ ಮನಸ್ಥಿತಿ ಇರುವವರು ದೇಶ ಹಾಳು ಮಾಡುತ್ತಾರೆ. 47 ಕೋಟಿ ಜನ ಬಿಜೆಪಿಗೆ ಮತ ಹಾಕಿದ್ದಾರೆ. ಹಾಗಾದರೆ ಅಷ್ಟು ಜನರ ಮನೆ ಹಾಳಾಗಲಿ, ದೇಶ ಹಾಳಾಗಲಿ ಎಂಬುದು ಸಿದ್ದರಾಮಯ್ಯನವರ ಉದ್ದೇಶವೇ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.