ನೌಕರರ ಮಾನಸಿಕ ನೆಮ್ಮದಿಗೆ ಕ್ರೀಡಾಕೂಟ ಸಹಕಾರಿ
ಸುಸಜ್ಜಿತ ಭವನ ನಿರ್ಮಾನಕ್ಕೆ ಶಾಸಕರ ನೆರವು
Team Udayavani, Mar 27, 2022, 4:50 PM IST
ಕಾರಟಗಿ: ದೈಹಿಕ ಮತ್ತು ಮಾನಸಿಕ ವೃದ್ಧಿಯ ಜೊತೆ ಜೊತೆಗೆ ಎಲ್ಲರೊಂದಿಗೆ ವಿಶ್ವಾಸ, ಪ್ರೀತಿ, ಸ್ನೇಹ ವೃದ್ಧಿಗೂ ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ರಾಜ್ಯ ಸರ್ಕಾರಿ ನೌಕರರ ತಾಲೂಕು ಘಟಕದ ತಾಲೂಕಾಧ್ಯಕ್ಷ ಸರ್ದಾರ್ ಅಲಿ ಹೇಳಿದರು.
ಪಟ್ಟಣದ ಸರಕಾರಿ ಪಪೂ ಕಾಲೇಜ್ ಆವರಣದ ಶ್ರೀ ಸಿದ್ದೇಶ್ವರ ರಂಗಮಂದಿರದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೈನಂದಿನ ಕೆಲಸ ಕಾರ್ಯಗಳಲ್ಲಿ ನಿರತರಾಗಿರುವ ಸರಕಾರಿ ನೌಕರರ ಮಾನಸಿಕ ನೆಮ್ಮದಿಗೆ ಕ್ರೀಡಾಕೂಟ ಪ್ರಮುಖ ಪಾತ್ರವಹಿಸುತ್ತವೆ. ಅಲ್ಲದೇ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಸರಕಾರಿ ನೌಕರರ ಕಾರ್ಯಚಟುವಟಿಕೆಗಳನ್ನು ನಡೆಸಲು ಭವನ ಅಗತ್ಯವಾಗಿದ್ದು, ಸುಸಜ್ಜಿತವಾದ ಭವನ ನಿರ್ಮಾಣಕ್ಕೆ ಶಾಸಕರು ಸಕಲ ನೆರವು ನೀಡುವುದಾಗಿ ವಾಗ್ಧಾನ ಮಾಡಿದ್ದಾರೆ. ಆದಷ್ಟು ಬೇಗ ಅದಕ್ಕೊಂದು ಅಂತಿಮ ರೂಪು ನೀಡಲಿದ್ದಾರೆ ಎಂದರು.
ಇದಕ್ಕೂ ಮುನ್ನ ಕಾರ್ಯಕ್ರಮಕ್ಕೆ ಸರ್ಕಾರಿ ನೌಕರರ ಸಂಘದ ಗೌರವ ಸಲಹೆಗಾರರಾದ ಡಾ| ವೆಂಕಟೇಶ ದೇಶಪಾಂಡೆ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ವಿವಿಧ ಸಂಘ-ಸಂಸ್ಥೆಗಳ ಗಣ್ಯರಿಗೆ ನೌಕರರ ಸಂಘದಿಂದ ಗೌರವಿಸಿ, ಸನ್ಮಾನಿಸಲಾಯಿತು. ಕ್ರಿಕೆಟ್, ವಾಲಿಬಾಲ್, ಖೋಖೋ, ಥ್ರೋಬಾಲ್ ಆಟಗಳಿಗೆ ಚಾಲನೆ ದೊರೆಯಿತು.
ಇನ್ನುಳಿದಂತೆ ವೈಯುಕ್ತಿಕ ಆಟಗಳಲ್ಲಿ ಭಾಗವಹಿಸುವವರು ನೇರವಾಗಿ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ನೌಕರರ ಸಂಘದ ತಾಲೂಕು ಕಾರ್ಯದರ್ಶಿ ತಿಮ್ಮಣ್ಣ ನಾಯಕ್ ಹೇಳಿದರು.
ಸಂಘದ ರಾಜ್ಯ ಪರಿಷತ್ ಸದಸ್ಯ ರಮೇಶ ಇಲ್ಲೂರು, ಗೌರವ ಸಲಹೆಗಾರ ಶ್ಯಾಮಸುಂದರ್ ಇಂಜಿನಿ, ಹಿರಿಯ ಉಪಾಧ್ಯಕ್ಷೆ ಶಂಕ್ರಮ್ಮ, ಕ್ರೀಡಾ ಕಾರ್ಯದರ್ಶಿ ಶ್ರೀಕಾಂತ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚನ್ನಬಸಪ್ಪ ವಕ್ಕಳದ, ದೈಹಿಕ ಶಿಕ್ಷಕರ ಸಂಘದ ಯಮನಪ್ಪ, ಕಸಾಪ ತಾಲೂಕಾಧ್ಯಕ್ಷ ಶರಣಪ್ಪ ಕೋಟ್ಯಾಳ, ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಉಮೇಶ ಮರ್ಲಾನಹಳ್ಳಿ, ಅಮರೇಶ ಮೈಲಾಪುರ, ಪರುಶರಾಮ ಗಡ್ಡಿ, ದ್ಯಾಮಣ್ಣ ಬೆನಕಟ್ಟಿ, ಸಿದ್ದು ವಳಕಲದಿನ್ನಿ, ವೀರನಗೌಡ ಹಣವಾಳ, ಪರುಶರಾಮ ಗಡ್ಡಿ, ದ್ಯಾಮಣ್ಣ ಬೆನಕಟ್ಟಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.