ಕಾನೂನು ಸಾಕ್ಷರತಾ ರಥ ಯಾತ್ರೆಗೆ ಚಾಲನೆ
Team Udayavani, Nov 12, 2019, 1:21 PM IST
ಕೊಪ್ಪಳ: ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾ ಧಿಕಾರದಿಂದ ತಾಲೂಕಿನಲ್ಲಿ ನಡೆಯಲಿರುವ ಕಾನೂನು ಸಾಕ್ಷರತಾ ರಥ ಸಂಚಾರಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾ ಧೀಶರಾದ ಸಂಜೀವ್ ವಿ. ಕುಲಕರ್ಣಿ ಅವರು ಸೋಮವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಕಾನೂನು ಸಾಕ್ಷರತಾ ವಾಹನದ ಮೂಲಕ ಕಾನೂನು ಬಗ್ಗೆ ಸಾಮಾನ್ಯರಿಗೂ ಅರಿವು ಮೂಡಿಸಲು ಪ್ರತಿ ವರ್ಷ ಈ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ. ಕಾನೂನಿನ ಮೂಲಕ ಪಡೆಯಬಹುದಾದ ಸೇವೆಗಳು, ಹಕ್ಕುಗಳು ಸೇರಿದಂತೆ ಇನ್ನೂ ಅನೇಕ ಕಾನೂನುಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಗ್ರಾಮೀಣ, ನಗರ ಪ್ರದೇಶದಲ್ಲಿ ಕಾನೂನು ರಥ ಸಂಚರಿಸಲಿದೆ.
ಇದರ ಜೊತೆ ನಮ್ಮ ಕಾನೂನು ತಂಡವು ಸಹ ಭಾಗವಹಿಸಿ ಕಾನೂನು ಸೇವೆಗಳ ಬಗ್ಗೆ ತಿಳಿಸಲಿದೆ. ಈ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲಾದ್ಯಂತ ಆರಂಭಿಸಲಾಗಿದ್ದು, ಗಂಗಾವತಿ ಮತ್ತು ಕುಷ್ಟಗಿ ತಾಲೂಕಿನಲ್ಲಿ ಕಾರ್ಯಕ್ರಮ ಈಗಾಗಲೇ ನಡೆದಿದೆ. ಈಗ ಕೊಪ್ಪಳ ತಾಲೂಕಿನಲ್ಲಿ ನಂತರ ಉಳಿದ ಎಲ್ಲ ತಾಲೂಕುಗಳಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಜಿಲ್ಲೆಯಸಾರ್ವಜನಿಕರು ಕಾನೂನು ಸಾಕ್ಷರತಾ ವಾಹನದ ಮೂಲಕ ಕಾನೂನು ಸೇವೆಗಳ ಬಗ್ಗೆ ಮಾಹಿತಿ ಪಡೆದು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಶ್ರೀನಿವಾಸ್, ಹಿರಿಯ ಸಿವಿಲ್ ನ್ಯಾಯಾಧೀಶ ಕುಮಾರ್ ಎಸ್., ಪ್ರಧಾನ ಸಿವಿಲ್ ನ್ಯಾಯಾಧಿಧೀಶರಾದ ಹರೀಶ ಪಾಟೀಲ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮನುಶರ್ಮಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಎಚ್. ಮುರಡಿ, ಜಿಲ್ಲಾ ಸರ್ಕಾರಿ ವಕೀಲ ಆಸೀಫ್ ಅಲಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.