ಚಿಕಿತ್ಸಾ ಆಂದೋಲನಕ್ಕೆ ಚಾಲನೆ
Team Udayavani, Jul 16, 2019, 3:03 PM IST
ಕೊಪ್ಪಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸೋಮವಾರ ನಡೆದ ಸಕ್ರೀಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನಕ್ಕೆ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಚಾಲನೆ ನೀಡಿದರು.
ಜಿಲ್ಲಾ ಕ್ಷಯ ನಿಯಂತ್ರಣಾಧಿಕಾರಿ ಡಾ| ಎಂ.ಜಿ. ಮಹೇಶ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಸುಮಾರು 1,587 ರೋಗಿಗಳನ್ನು ಪತ್ತೆ ಹಚ್ಚಬೇಕಾಗಿದ್ದು, ಈ ವರೆಗೂ 1,262 ಕ್ಷಯರೋಗಿಗಳು ಸರ್ಕಾರಿ ವಲಯದಲ್ಲಿ ಹಾಗೂ 107 ಕ್ಷಯರೋಗಿಗಳನ್ನು ಖಾಸಗಿ ವಲಯದಲ್ಲಿ ಪತ್ತೆ ಮಾಡಲಾಗಿದೆ. ಸುಮಾರು 218 ಪ್ರಕರಣ ತಪ್ಪಿದ ಕ್ಷಯ ಪ್ರಕರಣಗಳಾಗಿದ್ದು, ಅವುಗಳು ದಾಖಲಾಗದೇ ಉಳಿದಿವೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಖಾಸಗಿ ವಲಯದಲ್ಲಿ ಚಿಕಿತ್ಸೆ ಪಡೆಯು ತ್ತಿರುವುದು ಕಂಡುಬಂದಿವೆ ಎಂದರು. ಕಾರ್ಯಕ್ರಮದಲ್ಲಿ ಡಾ| ಎಂ.ಜಿ ಮಹೇಶ, ಡಾ| ಲಿಂಗರಾಜು, ಡಾ| ಎಸ್.ಕೆ. ದೇಸಾಯಿ, ಡಾ| ಜಂಬಯ್ಯ, ಡಾ| ರಾಮಾಂಜನೇಯ, ಡಾ| ಪ್ರಶಾಂತ ತಟ್ಟಿ, ಡಾ| ಸುಷ್ಮಾ ಸೇರಿದಂತೆ ಆರ್‌ಎನ್‌ಟಿಸಿಪಿ ಸಿಬ್ಬಂದಿ, ಕ್ಷಯರೋಗ ನಿಯಂತ್ರಣ ಕೇಂದ್ರದ ಸಿಬ್ಬಂದಿ ಪಾಲ್ಗೊಂಡಿದ್ದರು. ನಂತರ ಮಾನವ ಸರಪಳಿ ನಿರ್ಮಿಸುವ ಮೂಲಕ ಕ್ಷಯರೋಗ ಕೊನೆಗಾಣಿಸಲು ಸಾರ್ವಜನಿಕರಲ್ಲಿ ಮನವಿ ಮಾಡಲಾಯಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
ರೀಲ್‌ನಿಂದ ರಿಯಲ್ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!
ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.