Gangavathi ಎಚ್ ಆರ್ ಜಿ ನಗರದ ಗುಡ್ಡದಲ್ಲಿ ಶಿಲಾಮನೆಗಳು ಪತ್ತೆ: ಜಿಪಂ ಸಿಇಓ ಭೇಟಿ
Team Udayavani, Oct 3, 2023, 8:17 PM IST
ಗಂಗಾವತಿ: ತಾಲೂಕಿನ ಹೇಮಗುಡ್ಡದ ಹತ್ತಿರ ಇರುವ ಎಚ್ ಆರ್ ಜಿ ನಗರದ ಬೆಟ್ಟದಲ್ಲಿ ಶಿಲಾಯುಗದ ಮಾನವರು ನಿರ್ಮಿಸಿದ ಶಿಲಾ ಮನೆಗಳು ಪತ್ತೆಯಾಗಿದ್ದು ಸ್ಥಳಕ್ಕೆ ಜಿ.ಪಂ.ಸಿಇಒ ರಾಹುಲ್ ರತ್ನಂ ಪಾಂಡೆಯ ಅವರು ಭೇಟಿ ನೀಡಿ ಗುಡ್ಡದಲ್ಲಿರುವ ಆದಿ ಮಾನವರ ವಾಸದ ನೆಲೆಯನ್ನು ಮಂಗಳವಾರ ವೀಕ್ಷಣೆ ಮಾಡಿದರು.
ಎಚ್ ಆರ್ ಜಿ ನಗರದ ಭೀಮಮ್ಮ ದೇವಸ್ಥಾನ ಮುಂದಿರುವ ಗುಡ್ಡದಲ್ಲಿ ಈ ಶಿಲಾಯುಗದ ಜನರ ಮನೆಯ ಸ್ಮಾರಕಗಳು ಇವೆ. ಸುಮಾರು ನಾಲ್ಕೈದು ಸಾವಿರ ವರ್ಷಗಳ ಹಿಂದಿನ ಸ್ಮಾರಕಗಳು ಇವಾಗಿವೆ ಎಂದು ಹೇಳಲಾಗುತ್ತದೆ. ಐತಿಹಾಸಿಕ ಪ್ರಸಿದ್ಧಿ ಪಡೆದ ಹಿರೇಬೆಣಕಲ್ ಗ್ರಾಮದ ಮೋರ್ಯರ ಬೆಟ್ಟದಲ್ಲಿ ಇರುವ ಶಿಲಾಸಮಾಧಿ ಮನೆಗಳ ಸ್ಮಾರಕಗಳ ಮಾದರಿಯಂತೆ ಎಚ್ ಆರ್ ಜಿ ನಗರದ ಗುಡ್ಡದಲ್ಲಿ ಶಿಲಾ ಸ್ಮಾರಕಗಳು ಇರುವುದು ಇತ್ತೀಚೆಗೆ ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ ಅವರು ಭೇಟಿ ನೀಡಿ ವೀಕ್ಷಣೆ ಮಾಡಿದರು.
ಈ ವೇಳೆ ಜಿಪಂ ಯೋಜನಾ ನಿರ್ದೇಶಕ ಕೃಷ್ಣಮೂರ್ತಿ, ಜಿಪಂ ಎಡಿಪಿಸಿ ಮಹಾಂತಸ್ವಾಮಿ, ನರೇಗಾ ಅಕೌಂಟ್ ಮ್ಯಾನೆಜರ್ ಪಂಪನಗೌಡ ಹಳೇಮನಿ, ಗ್ರಾಪಂ ಸಿಬ್ಬಂದಿಗಳಾದ ಮಂಜುನಾಥ ರೆಡ್ಡಿ, ಲಕ್ಷ್ಮಣ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.