ನೂತನ ತಾಲೂಕಿನಲ್ಲಿಲ್ಲ ವಿದ್ಯಾರ್ಥಿ ವಸತಿ ನಿಲಯ


Team Udayavani, Jul 15, 2019, 3:13 PM IST

Udayavani Kannada Newspaper

ಕನಕಗಿರಿ: ಹೈದ್ರಬಾದ್‌ ಕರ್ನಾಟಕದ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಶಿಕ್ಷಣಕ್ಕೆ ಪೂರಕ ವಾತವರಣ ಇಲ್ಲದೇ ಇರುವುದರಿಂದ ಶೈಕ್ಷಣಿಕ ಪ್ರಗತಿ ಕುಂಠಿತವಾಗುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಎಂಬಂತೆ ಪಟ್ಟಣದಲ್ಲಿ ಮೆಟ್ರಿಕ್‌ ನಂತರದ ವಸತಿ ನಿಲಯ ಇಲ್ಲದಿರುವುದು. ವಸತಿ ನಿಲಯ ಇಲ್ಲದ ಕಾರಣ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.

ಪಟ್ಟಣದಲ್ಲಿ ಸರ್ಕಾರಿ ಪಪೂ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶ್ರೀ ರುದ್ರಮುನಿ ಪಿಯು ಕಾಲೇಜು, ಬೆಸ್ಟ್‌ ಪಿಯು ಹಾಗೂ ಪದವಿ ಕಾಲೇಜುಗಳಲ್ಲಿ ಗ್ರಾಮೀಣ ಭಾಗದ ಹಲವಾರು ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸರಿಯಾದ ಬಸ್‌ ಸೌಲಭ್ಯವಿಲ್ಲದ ಕಾರಣ ನಿತ್ಯ ಆಟೋ, ಬೈಕ್‌ ಹಾಗೂ ನಡೆದುಕೊಂಡ ಕಾಲೇಜಿಗೆ ಬರುವಂತಹ ಪರಿಸ್ಥಿತಿ ಇದೆ. ಇದರಿಂದಾಗಿ ಕೆಲವೊಮ್ಮೆ ತರಗತಿಗಳಿಂದ ವಂಚಿತರಾಗುತ್ತಿದ್ದಾರೆ.

ನಿರ್ಲಕ್ಷ್ಯ: ಪಟ್ಟಣದಲ್ಲಿ 3 ಪಿಯು ಮತ್ತು 2 ಪದವಿ ಕಾಲೇಜುಗಳಿವೆ. ಕನಕಗಿರಿ ಪಟ್ಟಣಕ್ಕೆ ಸರ್ಕಾರ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯ ಮಂಜೂರು ಮಾಡದೇ ವಿದ್ಯಾರ್ಥಿಗಳ ಭವಿಷ್ಯ ಜೊತೆ ಚೆಲ್ಲಾಟವಾಡುತ್ತಿದೆ. ವಸತಿನಿಲಯಗಳು ಇಲ್ಲದೇ ಇರುವುದರಿಂದ ಕೆಲ ವಿದ್ಯಾರ್ಥಿಗಳು ಮನೆಯನ್ನು ಬಾಡಿಗೆಗೆ ಪಡೆದು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಬಗ್ಗೆ ಕಾಳಜಿ ವಹಿಸಬೇಕಾದ ಜನಪತ್ರಿನಿಧಿಗಳು ನಿರ್ಲಕ್ಷ ವಹಿಸಿದ್ದಾರೆ.

ಬೇರೆ ಪಟ್ಟಣಗಳತ್ತ ಪಯಣ: ಕನಕಗಿರಿಯಲ್ಲಿ ಮೆಟ್ರಿಕ್‌ ನಂತರ ವಸತಿ ನಿಲಯಗಳು ಇಲ್ಲದೇ ಇರುವುದರಿಂದ ಗ್ರಾಮೀಣ ಭಾಗದ ಅನೇಕ ವಿದ್ಯಾರ್ಥಿಗಳು ದೂರದ ಗಂಗಾವತಿ, ಕೊಪ್ಪಳ ನಗರಗಳತ್ತ ವಿದ್ಯಾಭ್ಯಾಸಕ್ಕೆ ತೆರಳುತ್ತಿದ್ದಾರೆ. ಈ ಭಾಗದಲ್ಲಿ ವಸತಿ ನಿಲಯಗಳನ್ನು ಪ್ರಾರಂಭಿಸುವುದರಿಂದ ವಿದ್ಯಾರ್ಥಿಗಳು ಅನ್ಯ ಪಟ್ಟಣಗಳತ್ತ ಮುಖ ಮಾಡಿದ್ದಾರೆ. ವಸತಿ ನಿಲಯಗಳನ್ನು ಪ್ರಾರಂಭಿಸುವಂತೆ ಹಲವಾರು ಬಾರಿ ಇಲಾಖೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುವುದು ವಿದ್ಯಾರ್ಥಿಗಳ ಅಳಲು.

ಕನಕಗಿರಿಯಲ್ಲಿ ಮೆಟ್ರಿಕ್‌ ನಂತರ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳನ್ನು ಮಂಜೂರು ಮಾಡುವಂತೆ ಇಲಾಖೆಗೆ ಹಲವಾರು ಬಾರಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಕನಕಗಿರಿ ನೂತನ ತಾಲೂಕು ಆಗಿರುವುದರಿಂದ ಸರ್ಕಾರ ಈ ವರ್ಷ ವಸತಿ ನಿಲಯ ಪ್ರಾರಂಭಿಸುವ ನಿರೀಕ್ಷೆ ಇದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳಲಾಗುವುದು.•ಬಿ. ಕಲ್ಲೇಶ, ಉಪ ನಿರ್ದೇಶಕ, ಸಮಾಜ ಕಲ್ಯಾಣ ಇಲಾಖೆ
ಮೆಟ್ರಿಕ್‌ ನಂತರ ವಸತಿ ನಿಲಯಗಳನ್ನು ಪ್ರಾರಂಭಿಸುವಂತೆ ಸಂಘಟನೆಯಿಂದ ಶಾಸಕರಿಗೆ, ಸಚಿವರಿಗೆ ಹಾಗೂ ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಶಾಸಕರ ನಿರ್ಲಕ್ಷ್ಯದಿಂದ ವಸತಿ ನಿಲಯಗಳು ಮಂಜೂರು ಆಗುತ್ತಿಲ್ಲ. ಕನಕಗಿರಿ ನೂತನ ತಾಲೂಕು ಕೇಂದ್ರವಾಗಿದೆ. ಹಳ್ಳಿಗಳಿಗೆ ಸರಿಯಾದ ಬಸ್‌ ಸೌಲಭ್ಯವಿಲ್ಲದ ಕಾರಣ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ವಸತಿ ನಿಲಯಗಳು ಮಂಜೂರು ಆಗದಿದ್ದಲ್ಲಿ ಸಂಘಟನೆಯಿಂದ ಪ್ರತಿಭಟನೆ ಮಾಡಲಾಗುವುದು. •ಅಮರೇಶ ಕಡಗದ, ಎಸ್‌ಎಫ್‌ಐ ಜಿಲ್ಲಾಧ್ಯಕ್ಷ
•ಶರಣಪ್ಪ ಗೋಡಿನಾಳ

ಟಾಪ್ ನ್ಯೂಸ್

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

Priyank-Kharghe

ರಾಷ್ಟ್ರಮಟ್ಟದಲ್ಲೂ ಪ್ರತಿಭಟಿಸಲಿ, ಬಿಜೆಪಿಯವರೇ ಮೂಗು ಕೊಯ್ಯಿಸಿಕೊಳ್ತಾರೆ: ಪ್ರಿಯಾಂಕ್‌

Will Rohit retire after the Sydney Test?

Rohit Sharma; ಸಿಡ್ನಿ ಟೆಸ್ಟ್‌  ಬಳಿಕ ರೋಹಿತ್‌ ವಿದಾಯ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.