ಸರ್ವಾಧಿಕಾರಿಗಳ ವಿರುದ್ಧ ವಿದ್ಯಾರ್ಥಿ ಹೋರಾಟ ನಿರಂತರ
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಮಾವೇಶಕ್ಕೆ ಚಾಲನೆ ರ್ಯಾಲಿಯಲ್ಲಿ ಪ್ಲೇ ಕಾರ್ಡ್ ತೋರಿಸದಂತೆ ಪೊಲೀಸರ ಆಕ್ಷೇಪ
Team Udayavani, Jul 26, 2022, 5:51 PM IST
ಗಂಗಾವತಿ: ವಿಶ್ವದ ಇತಿಹಾಸ ಗಮನಿಸಿದರೆ ಸರ್ವಾಧಿಕಾರಿಗಳ ಧೋರಣೆಗಳ ವಿರುದ್ಧ ಮುಂಚೂಣಿಯಲ್ಲಿ ನಿಂತು ವಿದ್ಯಾರ್ಥಿಗಳ ಸಂಘಟನೆಗಳೇ ಹೋರಾಟ ನಡೆಸಿ ನಿರಂಕುಶ ಪ್ರಭುತ್ವಗಳನ್ನು ಕೊನೆಗಾಣಿಸಿವೆ. ಭಾರತದಲ್ಲಿ ಪ್ರಸ್ತುತ ಜನ ವಿರೋಧಿ ಪ್ಯಾಸಿಸ್ಟ್ ಸರಕಾರದ ವಿರುದ್ಧ ವಿದ್ಯಾರ್ಥಿಗಳು ಮತ್ತು ಯುವ ಸಮೂಹ ಹೋರಾಟ ನಡೆಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ರಾಜ್ಯಾಧ್ಯಕ್ಷ ಹತಾವುಲ್ಲಾ ಪುಂಜಲ್ ಕಟ್ಟೆ ಹೇಳಿದರು.
ಅವರು ಕರ್ನೂಲ್ ಬಾಬಾ ದರ್ಗಾ ಆವರಣದಲ್ಲಿ ಆಯೋಜಿಸಿದ್ದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಸದಸ್ಯತ್ವ ಅಭಿಯಾನ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು.
ನಮ್ಮ ದೇಶದ ಇತಿಹಾಸ ಗಮನಿಸಿದರೆ ಪ್ರಭುತ್ವದ ದಮನಕಾರಿ ನೀತಿಗಳ ವಿರುದ್ಧವೂ ವಿದ್ಯಾರ್ಥಿ ಮತ್ತು ಯುವ ಸಮೂಹ ಹೋರಾಟ ನಡೆಸಿ ಯಶಸ್ವಿಯಾಗಿದೆ. 2014ರಿಂದ ಸಂವಿಧಾನ ಆಶಯಗಳಿಗೆ ಮಾರಕವಾಗುವಂತಹ ಆಡಳಿತ ಜಾರಿಯಲ್ಲಿದೆ. ಪ್ರಜಾಪ್ರಭುತ್ವ ಸಂವಿಧಾನ ಬದ್ಧವಾಗಿ ಜನಪರ ಹೋರಾಟ ನಡೆಸುವವರನ್ನು ಜೈಲಿನಲ್ಲಿರಿಸಲಾಗಿದೆ. ಸಂವಿಧಾನದ ಆಶಯಗಳನ್ನು ಉಳಿಸಲು ದೇಶದ ಸಮಗ್ರತೆ ಉಳಿವಿಗಾಗಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದೇಶಾದ್ಯಂತ ವಿದ್ಯಾರ್ಥಿ ಸಂಘಟನೆಯ ಮೂಲಕ ಕಾರ್ಯ ಮಾಡಲಾಗುತ್ತಿದೆ ಎಂದರು.
ರಾಜ್ಯ ಮುಖಂಡ ಸಫìರಾಜ್ ಮಾತನಾಡಿ, ದೇಶದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಶೈಕ್ಷಣಿಕವಾಗಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಇತ್ತೀಚೆಗೆ ಪಿಎಸ್‌ಐ ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಬರೀ ಅಧಿಕಾರಿಗಳು ಬಂಧನವಾಗಿದ್ದು ಇದರಲ್ಲಿ ಪಾಲ್ಗೊಂಡಿರುವ ಜನಪ್ರತಿನಿಧಿ ಗಳನ್ನು ಬಂಧಿಸಬೇಕು. ಎಲ್ಲ ಸಮಸ್ಯೆಗಳ ಕುರಿತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿಗಳನ್ನು ಸಂಘಟಿಸುವ ಕಾರ್ಯ ಮಾಡುತ್ತಿದೆ ಎಂದರು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ರಾಜ್ಯ ಮುಖಂಡರಾದ ಅನೀಸ್ ಕುಂಬ್ರಾ, ಚಾಂದ ಸಲ್ಮಾನ್, ನಾಸೀರಾ, ಅತೀಕುರ್ ರಹೆಮಾನ್ ಸೇರಿ ಅನೇಕರಿದ್ದರು.
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ 2022-23ರ ಸದಸ್ಯತ್ವ ಅಭಿಯಾನದ ನಿಮಿತ್ತ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ರ್ಯಾಲಿ ನಡೆಸುವ ಸಂದರ್ಭದಲ್ಲಿ ಕೇಂದ್ರ-ರಾಜ್ಯ ಸರಕಾರಗಳ ವಿರುದ್ಧ ಭ್ರಷ್ಟಾಚಾರ ನಡೆದಿರುವುದು, ಪಿಎಸ್‌ಐ ಹಗರಣ ಮತ್ತು ಸಂವಿಧಾನ ಪ್ರಜಾಪ್ರಭುತ್ವ ಉಳಿಸಿ ಎಂದು ಬರೆಯಲಾಗಿದ್ದ ಪ್ಲೇ ಕಾರ್ಡ್ ಪ್ರದರ್ಶನಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿದಾಗ ಸಂಘಟಕರು ಮತ್ತು ಪಿಐ ಟಿ. ವೆಂಕಟಸ್ವಾಮಿ ಮಧ್ಯೆ ವಾಗ್ವಾದ ಜರುಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.