ಕೆಲಸದೊಂದಿಗೆ ಆರೋಗ್ಯ ಕಾಳಜಿ ವಹಿಸಿ: ತಾ.ಪಂ. ಇಒ ರಾಮಣ್ಣ ದೊಡ್ಡಮನಿ
ಆರೋಗ್ಯ ಜಾಗೃತಿಗೆ ನರೇಗಾ ಕಾಮಗಾರಿ ಸ್ಥಳದಲ್ಲೇ ಶಿಬಿರ
Team Udayavani, Jun 9, 2022, 2:44 PM IST
ಕುಕನೂರು: ತಾಲೂಕಿನ ಮಂಗಳೂರು ಗ್ರಾಪಂನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರಿಯ ಉದ್ಯೋಗ ಖಾತ್ರಿ ಯೋಜನೆ ನಾಲಾ ಸುಧಾರಣ ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರ ಆರೋಗ್ಯ ತಪಾಸಣೆ ಶಿಬಿರ ನಡೆಯಿತು.
ಈ ಸಂದರ್ಭದಲ್ಲಿ ತಾಪಂ ಇಒ ರಾಮಣ್ಣ ದೊಡ್ಡಮನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮನುಷ್ಯನ ಆರೋಗ್ಯ ಉತ್ತಮವಾಗಿದ್ದರೆ ದುಡಿಯಲು ಸಮರ್ಥನಾಗಿರುತ್ತಾನೆ. ಆ ನಿಟ್ಟಿನಲ್ಲಿ ಕಾರ್ಮಿಕನ ಆರೋಗ್ಯವು ಉಣಮಟ್ಟದ್ದಾಗಿರಲಿ ಎನ್ನುವ ಉದ್ದೇಶದಿಂದ ಸರಕಾರ ನರೇಗಾದಡಿ ದುಡಿಯುವ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಿದೆ. ಇದರ ಸದ್ಬಳಕೆ ಹೊಣೆ ಕಾರ್ಮಿಕರ ಮೇಲಿದೆ. ದುಡಿಯುವ ಕಾರ್ಮಿಕರು ಕೆಲಸಕ್ಕೆ ಮಾತ್ರವಲ್ಲ ಅವರ ಆರೋಗ್ಯದ ಸ್ಥಿತಿಯನ್ನು ಗ್ರಾಪಂ ಗಮನಿಸಿ ಕಾಮಗಾರಿ ಸ್ಥಳದಲ್ಲೆ ಚಿಕಿತ್ಸೆ ನೀಡಲಿದೆ. ಕಾಯಕ ಬಂಧುಗಳು ಈ ಬಗ್ಗೆ ತಮ್ಮ ಗ್ರಾಮಗಳ ವ್ಯಾಪ್ತಿಯ ಜನರಲ್ಲಿ ಜಾಗೃತಿ ಮೂಡಿಸಬೇಕು. ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ, ವಿಮೆ ಯೋಜನೆಗಳ ಬಗ್ಗೆ ತಿಳಿಸಬೇಕು ಎಂದರು.
ಸಹಾಯಕ ನಿರ್ದೇಶಕ ವೆಂಕಟೇಶ ವಂದಾಲ್ ಮಾತನಾಡಿ, ನರೇಗದಡಿ ರೈತ ಕೂಲಿ ಕಾರ್ಮಿಕರು ನುಗ್ಗೆ, ಪೇರಲ, ಲಿಂಬು, ಹುಣಸೆ, ಮಾವು, ಬಾಳೆ ಸೇರಿದಂತೆ ಇನ್ನಿತರ ಸಸಿಗಳನ್ನು ನಾಟಿ ಮಾಡಬೇಕು ಎಂದರು. ಗ್ರಾಪಂ ಮೂಲಕ ನೀಡುವ 319 ರೂ. ಕೂಲಿ ಹಣ ಪಡೆದು ಆರ್ಥಿಕ ಸುಧಾರಣೆ ಜತೆಗೆ ವೈಯಕ್ತಿಕ ಅಭಿವೃದ್ಧಿಗೆ ಒತ್ತುಕೊಡಬೇಕು. ಅರ್ಹ ಫಲಾನುಭವಿಗಳು ಎಬಿಎಆರ್‌ಕೆ ಕಾರ್ಡ್ ಮಾಡಿಸಿ ಸರಕಾರಿ ಆಸ್ಪತ್ರೆಯಲ್ಲಿ ಸಿಗುವ 5 ಲಕ್ಷ ರೂ. ವರೆಗೂ ಸೌಲಭ್ಯ ಪಡೆಯಿರಿ, ಪಿಎಂಎಸ್‌ಬಿವೈ, ಪಿಎಂಜೆಜೆಬಿವೈ, ಅಟಲ್ ಪೆನ್ಸಿನ್ ಯೋಜನೆಯ ಲಾಭ ಪಡೆಯಿರಿ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಎಬಿಎಆರ್‌ಕೆ, ಅಂಗವಿಕಲರಿಗೆ ವಿಶೇಷ ಜಾಬ್ ಕಾರ್ಡ್ ವಿತರಿಸಿದರು. ಕಾರ್ಯಕ್ರಮದಲ್ಲಿ ಗ್ರಾಪಂ ಉಪಾಧ್ಯಕ್ಷ ಗ್ರಾಪಂ ಸದಸ್ಯರು, ಪಿಡಿಒ ವೀರೇಶ, ಆರೋಗ್ಯ ಇಲಾಖೆಯವರು, ತಾಂತ್ರಿ ಸಿಬ್ಬಂದಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.