ಅಡವಿಭಾವಿ ಗ್ರಾಮದಲ್ಲಿ ತಾಲೂಕು ಅಧಿಕಾರಿಗಳ ಗ್ರಾಮವಾಸ್ತವ್ಯ
Team Udayavani, Aug 20, 2022, 7:24 PM IST
ದೋಟಿಹಾಳ: ಎಲ್ಲಿಯವರೆಗೆ ಗ್ರಾಮೀಣ ಪ್ರದೇಶದ ಜನ ಜಾಗೃತರಾಗುವುದಿಲ್ಲವೋ ಅಲ್ಲಿಯವರೆಗೆ ನಿಮಗೆ ಮೋಸ ತಪ್ಪಿದ್ದಲ್ಲ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರು ಎಚ್ಚರಿಸಿದರು.
ಜುಮಲಾಪೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡವಿಭಾವಿ ಗ್ರಾಮದಲ್ಲಿ ಶನಿವಾರ ತಾಲೂಕು ಆಡಳಿತದಿಂದ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಉಧ್ಗಾಟಿಸಿ ಮಾತನಾಡಿದರು, ಇಮದು ಪ್ರತಿ ಹಳ್ಳಿಗಳ ಯುವಕರು ಪ್ರಜ್ಞಾವಂತರಾಗಿದ್ದಾರೆ. ಹೀಗಾಗಿ ಅಧಿಕಾರಿಗಳು ಕೂಡ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಸಾರ್ವಜನಿಕರಿಗೆ ಮೋಸ ಮಾಡುವುದಾಗಲಿ ಅಥವಾ ಭ್ರಷ್ಟಾಚಾರ ಮಾಡುವುದಾಗಲಿ ಮಾಡಿದರೆ ನಾನು ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಈ ವೇಳೆ ಮಾತನಾಡಿ ಸಾರ್ವಜನಿಕರು ಈ ಭಾಗದಲ್ಲಿ ಸಂಧ್ಯಾಸುರಕ್ಷಾ ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಸುಮಾರು 300ಕ್ಕೂ ಹೆಚ್ಚು ಅಕ್ರಮ ಸಂಧ್ಯಾಸುರಕ್ಷಾ ಯೋಜನೆಯಲ್ಲಿ ಫಲಾನುಭವಿಗಳು ಇದ್ದಾರೆ. ಇವರು ತಮ್ಮ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿ ಸಣ್ಣ ವಯಸ್ಸಿನಲ್ಲಿ ಈ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಈ ಅಕ್ರಮ ದಂದೆಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಶಾಮಿಲಾಗಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದರು.
ಇದಕ್ಕೆ ಉತ್ತರಿಸಿದ ತಹಶೀಲದಾರ ಗುರುರಾಜ ಎಮ್. ಇದರ ಬಗ್ಗೆ ಈಗಾಗಲೇ ತನಿಖೆ ಮಾಡುತ್ತಿದೆ. ಸದ್ಯ ಅಕ್ರಮವಾಗಿದ 30 ಜನರನ್ನು ಫಲಾನುಭವಿಗಳನ್ನು ಯೋಜನೆಯಿಂದ ತೆಗೆದು ಹಾಕಲಾಗಿದೆ ಎಂದು ಹೇಳಿದರು. ಇದಕ್ಕೆ ಸಾರ್ವಜನಿಕರು ಕೇವಲ ಫಲಾನುಭವಿಗಳ ವಿರುದ್ಧ ಕ್ರಮ ಕೈಗೊಂಡರೆ ಸಾಲದು ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ಅಗ್ರಹಿಸಿದರು.
ಜುಮಲಾಪೂರ ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ತಾಂಡವಾಡುತ್ತಿದೆ ಹಾಗೂ ಗ್ರಾಮ ಪಂಚಾಯತಿಯ ಉದೋಗ್ಯ ಖಾತ್ರಿ ಯೋಜನೆಯಲ್ಲಿ ಅಕ್ರಮ ನಡೆದ್ದಿದೆ ಹಾಗೂ ಗ್ರಾಮದ ಆರೋಗ್ಯ ಸಿಬ್ಬಂದಿಯನ್ನು ಬೇಕೆ ಕಡೆಗೆ ನಿಯೋಜನೆ ಮಾಡಿದ ಕಾರಣ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರ ಆರೋಪಿಸಿದರು.
ಇದಕ್ಕೆ ಉತ್ತರಿಸಿ ಶಾಸಕರು ಕೂಡಲೇ ಆರೋಗ್ಯ ಸಿಬ್ಬಂದಿಯನ್ನು ಅಲ್ಲಿಗೆ ನಿಯೋಜನೆ ಮಾಡಿ ಮತ್ತು ಗ್ರಾಮದಲ್ಲಿ ಅಕ್ರಮ ಮಧ್ಯ ಮಾರಾಟ ನಡೆಯುತ್ತಿದ್ದರೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಿ. ಇಂದು ನಡೆದ ಈ ಕಾರ್ಯಕ್ರಮದಲ್ಲಿ ಅನೇಕ ಹಳ್ಳಿಗಳ ಸಮಸ್ಯೆಗಳ ಬಗ್ಗೆ ಯುವಕರು ಚರ್ಚೆ ಮಾಡಿರೋದು ಒಂದು ಒಳ್ಳೆಯ ಬೆಳವಣಿಗೆ ಎಂದು ಶಾಸಕರು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ತಹಶೀಲದಾರ ಗುರುರಾಜ ಎಮ್. ಅವರು ಮಾತನಾಡಿ, ರಾಜ್ಯ ಸರಕಾರ ಕಂದಾಯ ಇಲಾಖೆಗಳ ಸವಲತ್ತುಗಳನ್ನು ಗ್ರಾಮೀಣ ಭಾಗದ ಜನರ ಮನೆಯ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಇಂದು ನಮ್ಮ ಜಿಲ್ಲೆಯ ಪ್ರತಿಯೊಂದು ತಾಲೂಕಿನ ಮೂರನೇ ಶನಿವಾರ ಒಂದು ಹಳ್ಳಿಯಲ್ಲಿ ಈ ಕಾರ್ಯಕ್ರಮವನ್ನು ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಶೇಕಡಾ 80ರಷ್ಟು ಭಾಗವನ್ನು ಕಂದಾಯ ಇಲಾಖೆ ಸಂಬಂದಿಸಿದ ಸಮಸ್ಯೆಗಳಿಗೆ ಸ್ಥಳದಲ್ಲಿ ಬಗೆಹರಸಿ ಪರಿಹಾರ ನೀಡಲಾಗುವದು, ಇನ್ನಿತರ ಇಲಾಖೆಗಳ ಸಮಸ್ಯಗೆ ಇಲ್ಲಿ ಪರಿಹಾರ ನೀಡಲಾಗುವದು ಎಂದು ಹೇಳಿದರು.
ಅಹವಾಲು ಅರ್ಜಿಗಳು : ರಸ್ತೆ ಅಭಿವೃದಿ, ಶಾಲೆಗಳ ಶಿಕ್ಷಕರ ನಿಯೋಜನೆ, ಸಾರಿಗೆ ವ್ಯವಸ್ಥೆ, ಸ್ಮಶಾನ ಜಮೀನು, ಗ್ರಾಮದಲ್ಲಿ ಇರುವ ವಿದ್ಯುತ್ ಕಂಬ, ತಂತಿಗಳನ್ನು ಸ್ಥಳಾಂತರಿಸಬೇಕು, ಕುಡಿಯುವ ನೀರಿನ ವ್ಯವಸ್ಥೆ, ಕಿರಿಯ ಶಾಲೆಯನ್ನು ಹಿರಿಯ ಶಾಲೆಗೆ ಬಡ್ತಿ ನೀಡಬೇಕು, ಸೇರಿದಂತೆ ಸುಮಾರು 62 ಅಹವಾಲುಗಳು ಬಂದಿದ್ದು ಇದರಲ್ಲಿ 54 ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರವನ್ನು ಕಂಡುಕೊಳ್ಳಲಾಗಿದೆ ಉಳಿದ 8 ಅರ್ಜಿಗಳನ್ನು ಕೂಡಲೆ ಪರಿಹಾರವನ್ನ ಒದಗಿಸಲಾಗುವದು ಎಂದು ತಹಶೀಲಾದರ ಅವರು ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷೆ ಅಕ್ಕಮ್ಮ ಈರಣ್ಣ ಅವರು ವಹಿಸಿದರು, ತಾಲೂಕಾ ಪಂಚಾಯತಿ ಇಒ ಶಿವಪ್ಪ ಸುಬೇದಾರ, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬ್ಳೆ, ಸಿಡಿಪಿಒ ಅಮರೇಶ ಹಾವಿನ, ಅಕ್ಷರದಾಸೋಹ ಅಧಿಕಾರಿ ಕೆ ಶರಣಪ್ಪ, ತಾಪಂ ಸಹಾಯಕ ನಿದೇಶಕರಾದ ವಿಶ್ವನಾಥ ರಾಠೋಡ್, ಸಮಾಜಕಲ್ಯಾಣ, ಪಿಡಬ್ಲೂಡಿ, ಆರೋಗ್ಯ ಇಲಾಖೆ, ಜೆಸ್ಕಾಂ ಅಧಿಕಾರಿಗಳು, ತಾವರಗೇರ ಪೋಲಿಸ್ ಇಲಾಖೆಯ ಅಧಿಕಾರಿಗಳು ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಹಾಗೂ ಜುಮಲಾಪೂರ ಗ್ರಾಪಂ ಪಿಡಿಓ ದೊಡ್ಡಪ್ಪ, ಗ್ರಾಪಂ ಸದಸ್ಯರು, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಕಂದಾಯ ಇಲಾಖೆ ಸಿಬ್ಬಂದಿಗಳು, ಅಡವಿಭಾವಿ ಗ್ರಾಮಸ್ಥರು ಹಾಗೂ ಸುತ್ತಮುತ್ತಲ್ಲ ಗ್ರಾಮಸ್ಥರು ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.