ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು
ಲಭ್ಯ ದಿನಪತ್ರಿಕೆ-ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡಿದ್ದರು.
Team Udayavani, Nov 7, 2024, 1:50 PM IST
ಉದಯವಾಣಿ ಸಮಾಚಾರ
ದೋಟಿಹಾಳ: ರಾಜ್ಯದ ತಾಂಡಾಗಳ ಅಭಿವೃದ್ಧಿ ನಿಗಮದಲ್ಲಿ ಅನುದಾನದ ಕೊರತೆ ಕಾರಣ ನಿಗಮದಿಂದ ಸ್ಥಾಪಿಸಿದ
ಸುಮಾರು 500 ಗ್ರಂಥಾಲಯಗಳು ಕಳೆದ ಹತ್ತು ತಿಂಗಳಿನಿಂದ ಸಿಬ್ಬಂದಿ ವೇತನ ಹಾಗೂ ನಿರ್ವಹಣೆ ವೆಚ್ಚಕ್ಕೆ ಹಣವಿಲ್ಲದೇ
ಮುಚ್ಚುವ ಸ್ಥಿತಿಗೆ ಬಂದಿವೆ.
ಕಳೆದ ಎರಡು ವರ್ಷಗಳ ಹಿಂದೆ ಆರಂಭವಾದ ಈ ಗ್ರಂಥಾಲಯಗಳು ಯಾವುದೇ ಸಮಸ್ಯೆಯಿಲ್ಲದೆ ಚೆನ್ನಾಗಿ ನಡೆಯುತ್ತಿದ್ದವು. ಕುಷ್ಟಗಿ ತಾಲೂಕಿನ ಕೆ.ಬೋದೂರ, ಕಳಮಳ್ಳಿ, ತೋನಸಿಹಾಳ, ಮೆಣಸಗೇರಿ ಮತ್ತು ನಡವಲಕೊಪ್ಪ ತಾಂಡಾಗಳಲ್ಲಿ ಆರಂಭವಾಗಿದ್ದ ಈ ಗ್ರಂಥಾಲಯಗಳಲ್ಲಿ ಶಾಲಾ ಮಕ್ಕಳು, ಯುವಕರು ಬೆಳಗ್ಗೆ ಮತ್ತು ಸಾಯಂಕಾಲ ಕುಳಿತು ಪಾಠ ಅಭ್ಯಾಸ ಮಾಡುತ್ತಿದ್ದರು.
ಲಭ್ಯ ದಿನಪತ್ರಿಕೆ-ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡಿದ್ದರು. ಆದರೆ ಈಗ ಅನುದಾನವಿಲ್ಲದೆ ಗ್ರಂಥಾಲಯಗಳು
ಸಂಕಷ್ಟಕ್ಕೆ ಸಿಲುಕಿವೆ. ಈ ಐದು ಗ್ರಂಥಾಲಯಗಳಿಗೆ ಆರಂಭದಲ್ಲಿ ದಿನಪತ್ರಿಕೆ, ವಾರಪತ್ರಿಕೆಯ ಬಿಲ್ ಮತ್ತು ಸಿಬ್ಬಂದಿಗಳ ವೇತನ ನೀಡಲಾಗಿತ್ತು.
ಆದರೆ ಕಳೆದ 10 ತಿಂಗಳಿನಿಂದ ಅನುದಾನವೇ ಬರುತ್ತಿಲ್ಲ. ಹೀಗಾಗಿ ಪೇಪರ್ ಬಿಲ್ ಕಟ್ಟುವ ಜೊತೆಗೆ ಜೀವನ ನಡೆಸುವುದೇ ಕಷ್ಟಕರವಾಗಿದೆ ಎನ್ನುತ್ತಿದ್ದಾರೆ ಸಿಬ್ಬಂದಿ. ಇನ್ನೊಂದೆಡೆ ನಿಗಮದ 500 ಗ್ರಂಥಾಲಯಗಳ ಪೈಕಿ 350-400 ಗ್ರಂಥಾಲಯಗಳಷ್ಟೇ ನಡೆಯುತ್ತಿವೆ ಎಂಬ ದೂರುಗಳು ಬಂದ ಕಾರಣ ಅಧ್ಯಕ್ಷರು ಅನುದಾನ ತಡೆಹಿಡಿದ್ದಾರೆ. ಈ ಬಗ್ಗೆ ಜಿಲ್ಲಾ ಅಧಿಕಾರಿಗಳಿಂದ ವರದಿ
ಕೇಳಿದ್ದೇವೆ. ವರದಿ ಪರಿಶೀಲಿಸಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜು
ಅವರು ಸ್ಪಷ್ಟಪಡಿಸಿದ್ದಾರೆ.
ವಾಲ್ಮೀಕಿ ನಿಗಮದ ಹಗರಣ ಬೆಳಕಿಗೆ ಬಂದ ಮೇಲೆ ಸರಕಾರ ಎಲ್ಲ ನಿಗಮಗಳ ಅನುದಾನವನ್ನು ಹಿಂಪಡೆದುಕೊಂಡಿದೆ. ಹೀಗಾಗಿ ಅನುದಾನದ ಕೊರತೆ ಕಾಡುತ್ತಿದೆ. ಅಲ್ಲದೇ ಹಲವೆಡೆ ಗ್ರಂಥಾಲಯಗಳು ಸರಿಯಾಗಿ ನಡೆಯುತ್ತಿಲ್ಲ ಎಂಬ ದೂರುಗಳು ಬಂದಿವೆ. ಈ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿ ಬಂದ ಕೂಡಲೇ ಸಿಬ್ಬಂದಿ ವೇತನ ಹಾಗೂ ದಿನಪತ್ರಿಕೆ ಬಿಲ್
ಪಾವತಿಗೆ ಅನುದಾನ ಮಂಜೂರು ಮಾಡುತ್ತೇವೆ.
ಜಯದೇವ ನಾಯ್ಕ,
ಅಧ್ಯಕ್ಷ ಕರ್ನಾಟಕ ತಾಂಡಾ, ಅಭಿವೃದ್ಧಿ ನಿಗಮ
*ಮಲ್ಲಿಕಾರ್ಜುನ ಮೆದಿಕೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.