ತಾವರಗೇರಾ ಆಸ್ಪತ್ರೆ ಒಳಾಂಗಣದಲ್ಲಿ ಔಷಧೀಯ ಸಸ್ಯವನ

ವಿವಿಧ ಜಾತಿಯ 60 ಔಷಧಿ ಸಸಿಗಳ ನಾಟಿ

Team Udayavani, Jan 30, 2020, 4:41 PM IST

30-January-22

ತಾವರಗೇರಾ: ಇಲ್ಲಿಯ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಆಸ್ಪತ್ರೆ ಕಟ್ಟಡದ ಒಳಾಂಗಣದಲ್ಲಿ ಆರ್ಯುವೇದ ಔಷಧೀಯ ಸಸ್ಯಗಳನ್ನು ನೆಟ್ಟು ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಿಗೆ ಮಾದರಿಯಾಗಿದೆ.

ಸರ್ಕಾರಿ ಆಸ್ಪತ್ರೆಯ ಕಟ್ಟಡ ನಿರ್ಮಾಣವಾಗಿ ಸುಮಾರು 25-30 ವರ್ಷಗಳು ಗತಿಸಿದ್ದರೂ ಇಲ್ಲಿವರೆಗೆ ಯಾವುದೇ ವೈದ್ಯಾ ಧಿಕಾರಿಗಳು ಒಳಾಂಗಣದ ಅಂಗಳದಲ್ಲಿ ಕಸ ಕಡ್ಡಿ, ತ್ಯಾಜ್ಯ ಚೆಲ್ಲಿ ಅದರಲ್ಲಿ ತಿರುಗಾಡಲು ಸಹ ಆಗುತ್ತಿರಲಿಲ್ಲ. ಇದೀಗ ಆಸ್ಪತ್ರೆಯಲ್ಲಿಯೇ ಕೊಳವೆ ಬಾವಿ ಕೊರೆಸಿದ್ದು, ಆಸ್ಪತ್ರೆಗೆ ಬೇಕಾಗುವಷ್ಟು ನೀರು ಲಭ್ಯವಿದೆ. ಈ ಆಸ್ಪತ್ರೆಯ ಮಹಿಳಾ ವೈದ್ಯಾಧಿಕಾರಿ ಡಾ| ಕಾವೇರಿ ಶ್ಯಾವಿ ಅವರು ವೈಯಕ್ತಿಕ ಆಸಕ್ತಿ ವಹಿಸಿ, ಒಳಾಂಗಣದ ಸ್ಥಳವನ್ನು ಸ್ವಚ್ಛ ಗೊಳಿಸುವುದರ ಜೊತೆಗೆ ಕೆಂಪು ಮಣ್ಣನ್ನು ಹಾಕಿಸಿ ಹದಗೊಳಿಸಿದರು.

ಅದರಲ್ಲಿ ಬಹಳಷ್ಟು ಔಷ ಧೀಯ ಗುಣಧರ್ಮ ಹೊಂದಿರುವ ಸಸಿಗಳನ್ನು ಮುನಿರಾಬಾದ್‌ ತೋಟಗಾರಿಕೆ ಇಲಾಖೆಯಿಂದ ಖರೀದಿಸಿ ತಂದು ಒಳಾಂಗಣದಲ್ಲಿ ನಾಟಿ ಮಾಡಿದ್ದಾರೆ. ಇದಕ್ಕೆ ಸಾಲುಮರದ ತಿಮ್ಮಕ್ಕ ಉದ್ಯಾನವನ ಎಂದು ನಾಮಕರಣ ಮಾಡಿ ನಾಮಫಲಕ ಹಾಕಿದ್ದಾರೆ.
ಉದ್ಯಾನವನದಲ್ಲಿ ಲವಳಸರ ಸಸ್ಯ, ಕಸ್ತೂರಿ, ತುಳಸಿ, ಕಟಾಣಿ ತೊಪ್ಪಲ ಸಸಿ, ಅಮೃತ ಬಳ್ಳಿ, ಬಿಳಿ ಮತ್ತು ಕೆಂಪು ದಾಸವಾಳ, ಪಾರಿಜಾತ, ನೀಲಗಿರಿ ಸೇರಿದಂತೆ ಸುಮಾರು 50ರಿಂದ 60 ವಿವಿಧ ಜಾತಿಯ ಔಷ ಧೀಯ ಸಸಿಗಳನ್ನು ನಾಟಿ ಮಾಡಲಾಗಿದೆ. ಸಸಿಗಳ ನಿರ್ವಹಣೆಗೆ ಪ್ರತಿದಿನ ಬೆಳಗ್ಗೆ ಸ್ವತಃ ತಾವೇ ಬಂದು ನೀರು ಹರಿಸುತ್ತಾರೆ. ಸಸಿಗಳ ರಕ್ಷಣೆಗಾಗಿ ಒಳಾಂಗಣದ ಸುತ್ತ ಜಾಲರಿ ಹಾಕಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಕೂಡ ಉದ್ಯಾನವನ ರಕ್ಷಣೆ ಮಾಡುವಲ್ಲಿ ಮತ್ತು ಬೆಳೆಸುವಲ್ಲಿ ಶ್ರಮ ಪಡುತ್ತಿದ್ದಾರೆ.

ಈ ಮೊದಲು ಆಸ್ಪತ್ರೆಗೆ ನೀರಿನ ಕೊರತೆ ಇತ್ತು. ನಮ್ಮ ಇಲಾಖೆಯವರು ಇತ್ತೀಚಿಗೆ ಕೊಳವೆಬಾವಿ ಹಾಕಿಸಿದಾಗ ಅದರಲ್ಲಿ ಆಸ್ಪತ್ರೆಗೆ ಬೇಕಾಗುವಷ್ಟು ನೀರು ಲಭ್ಯವಾಗಿದೆ. ಇದರಿಂದ ಪ್ರೇರಣೆಗೊಂಡು ಸಸಿಗಳನ್ನು ಹಚ್ಚಿ ಬೆಳೆಸಿದ್ದೇನೆ. ಇದರಿಂದ ತಮಗೆ ಸಂತೃಪ್ತಿಯಾಗಿದೆ.
ಡಾ| ಕಾವೇರಿ ಶ್ಯಾವಿ, ಮುಖ್ಯ ವೈದ್ಯಾಧಿಕಾರಿ
ಸಮುದಾಯ ಆರೋಗ್ಯ ಕೇಂದ್ರ.

ಇಲ್ಲಿವರೆಗೆ ನಿರ್ಲಕ್ಷಿತವಾಗಿ ಬಿದ್ದಿದ್ದ ಆಸ್ಪತ್ರೆಯ ಒಳಾಂಗಣ ಸ್ಥಳವನ್ನು ಸ್ವಚ್ಛಗೊಳಿಸಿ ಸಸಿಗಳನ್ನು ನೆಡಲಾಗಿದೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಆಹ್ಲಾದಕರ ವಾತಾವರಣ ನಿರ್ಮಾಣವಾದಂತಾಗಿದೆ.
ಶಂಕರ್‌ ಈಳಗೇರ
ವ್ಯಾಪಾರಿ ತಾವರಗೇರಾ

„ಎನ್‌. ಶಾಮೀದ್‌

ಟಾಪ್ ನ್ಯೂಸ್

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

1-kushtagi

Kushtagi: ಬಸ್ ಸೇವೆ ಕಲ್ಪಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.