ರೆಡ್ಡಿ ಬಂಧನದ ಹಿಂದೆ ರಾಜ್ಯ ಸರ್ಕಾರದ ಕೈವಾಡ
Team Udayavani, Nov 18, 2018, 6:45 AM IST
ಯಲಬುರ್ಗಾ: ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಬಂಧಿಸಿರುವುದರಲ್ಲಿ ರಾಜ್ಯ ಸರ್ಕಾರದ ಕೈವಾಡವಿದೆ ಎಂದು ಶಾಸಕ ಶ್ರೀರಾಮುಲು ಆರೋಪಿಸಿದರು.
ತಾಲೂಕಿನ ಚಿಕ್ಕವಂಕಲಕುಂಟಾ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ್ಯಂಬಿಡೆಂಟ್ ಪ್ರಕರಣದಲ್ಲಿ ವಿನಾಕಾರಣ ಜನಾರ್ದನ ರೆಡ್ಡಿ ಅವರನ್ನು ಬಂಧಿ ಸಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜಕೀಯ ಸೇಡು ತೀರಿಸಿಕೊಂಡಿದ್ದಾರೆ. ಯಡಿಯೂರಪ್ಪ, ಜಗದೀಶ ಶೆಟ್ಟರ್ ಸೇರಿ ಹಲವು ಬಿಜೆಪಿ ನಾಯಕರು ರೆಡ್ಡಿಯವರಿಗೆ ಬೆಂಬಲ ನೀಡಿದ್ದಾರೆ.
ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ಗೆ ಇ.ಡಿ. ನೋಟಿಸ್ ನೀಡಿದ್ದು ಬಿಜೆಪಿಗೆ ಸಂಬಂಧವಿಲ್ಲ ಎಂದು ತಿಳಿಸಿದರು. ಯಾವುದೇ ಕಾರಣಕ್ಕೂ ತಾನು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ತನ್ನ ರಾಜಕೀಯ ಏಳ್ಗೆ ಸಹಿಸದ ಕೆಲವರು ಇಂತಹ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ರಾಜ್ಯದ ಜನತೆಯ ಆಶೀರ್ವಾದದಿಂದ ಶ್ರೀರಾಮುಲು ಇಂದು ದೊಡ್ಡ ಶಕ್ತಿ, ವ್ಯಕ್ತಿಯಾಗಿ ಬೆಳೆದು ನಿಲ್ಲಲು ಸಾಧ್ಯವಾಗಿದೆ. ತಾನು ಪ್ರಬಲ ನಾಯಕನಾಗಲು ಬಿಜೆಪಿ ಕಾರಣ, ಯಾವುದೇ ಕಾರಣಕ್ಕೂ ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ ಎಂದರು.
ಇದಕ್ಕೂ ಮುನ್ನ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಸನ್ನಾನಂದಪುರಿ ಸ್ವಾಮೀಜಿ, ಸಿಎಂ ಕುಮಾರಸ್ವಾಮಿ ಅವರು ಪರಿಶಿಷ್ಟ ಪಂಗಡದ ಅಭಿವೃದ್ಧಿ ಬಗ್ಗೆ ನಿರ್ಲಕ್ಷ Â ವಹಿಸಿದ್ದಾರೆ. ಶೋಷಿತ ಸಮುದಾಯಗಳ ಪ್ರಗತಿಗೆ ಆದ್ಯತೆ ನೀಡುತ್ತಿಲ್ಲ. ಮುಂಬರುವ ದಿನಗಳಲ್ಲಿ ಶೋಷಿತ ಸಮುದಾಯಗಳು ತಕ್ಕಪಾಠ ಕಲಿಸಲಿವೆ ಎಂದು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು