ರಸ್ತೆ ದುರಸ್ತಿ ಮಾಡದಿದ್ರೆ ಮತ ಬಹಿಷ್ಕಾರ

Team Udayavani, Apr 16, 2019, 5:38 PM IST

kop-1
ದೋಟಿಹಾಳ: ಸಮೀಪದ ಗೋತಗಿ ಗ್ರಾಮದ ರಸ್ತೆ ಹಲವು ವರ್ಷಗಳು ಕಳೆದರೂ ದುರಸ್ತಿಯಾಗದ ಕಾರಣ ಸಂಚಾರಕ್ಕೆ ತೊಂದರೆಯಾಗಿದೆ. ಗ್ರಾಮಸ್ಥರು ಹಾಗೂ ಪ್ರಯಾಣಿಕರು ಪ್ರತಿ ದಿನ ಸಂಚರಿಸುವಾಗ ನರಕಯಾತನೆ ಅನುಭವಿಸುತ್ತಿದ್ದಾರೆ. ಇದರಿಂದ ಬೇಸತ್ತು ಲೋಕಸಭೆ ಚುನಾವಣೆ ಬಹಿಷ್ಕರಿಸುವುದಾಗಿ ಗೊತ್ತಗಿ ಗ್ರಾಮಸ್ಥರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.
ರಾಜ್ಯ ಹೆದ್ದಾರಿಯಿಂದ ಸುಮಾರು 5 ಕಿ.ಮೀ. ದೂರದ ತೋನಸಿಹಾಳ, ಗೋತಗಿ ಗ್ರಾಮಗಳನ್ನು ಸಂಪರ್ಕಿಸುವ ಈ ರಸ್ತೆಯಲ್ಲಿ ಅಲ್ಲಲ್ಲಿ ಕಲ್ಲುಗಳು ಎದ್ದು ಸಂಚಾರಕ್ಕೆ ಅಪಾಯಕಾರಿಯಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲೂ ರಸ್ತೆ ದುರಸ್ತಿಯ ಭರವಸೆ ನೀಡಿದ್ದರು.
ಆದರೆ ಇದುವರೆಗೂ ರಸ್ತೆ ದುರಸ್ತಿಯಾಗಿಲ್ಲ. ಕಕ್ಕಿಹಾಳ ಕ್ರಾಸ್‌ಯಿಂದ ಗೋತಗಿ ಗ್ರಾಮಕ್ಕೆ ಹೋಗಬೇಕಾದರೆ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಪ್ರಯಾಣಿಕರು ಸಾಗುವಂತ್ತಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ಜನಪ್ರತಿನಿಧಿಗಳಿಗೆ ಮತ್ತು ಸರಕಾರಕ್ಕೆ ಹಿಡಿ ಶಾಪ ಹಾಕಿ ಹೋಗುವುದು ಸಾಮಾನ್ಯವಾಗಿ ಬಿಟ್ಟಿದೆ. ವರ್ಷದ ಹಿಂದೆ ಗರ್ಭಿಣಿ ಹೆಚ್ಚಿನ ಚಿಕಿತ್ಸೆಗಾಗಿ ಹೋಗುವಾಗ ದಾರಿಯ ಮಧ್ಯೆದಲ್ಲಿ ಮೃತಪಟ್ಟಿದ್ದಾಳೆ.
ಗ್ರಾಮದ ಸರಕಾರಿ ಶಾಲೆಗೆ ಬೈಕ್‌ನಲ್ಲಿ ಆಗಮಿಸುತ್ತಿದ್ದ ಶಿಕ್ಷಕನ ಬೆನ್ನುಮೂಳೆ ಮುರಿದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ರೀತಿ ಗ್ರಾಮದ ಅನೇಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಗೋತಗಿ ಗ್ರಾಮಸ್ಥರು ಹೇಳಿದರು.
ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮೂಖ ಪ್ರೇಕ್ಷಕರಾಗಿದ್ದಾರೆ. ಇದರಿಂದ ಬೇಸತ್ತು ಲೋಕಸಭೆ ಚುನಾವಣೆಯನ್ನು ಬಹಿಷ್ಕಾರ ಮಾಡುತ್ತೇವೆ ಎಂದು ತಹಶೀಲ್ದಾರ್‌ರಿಗೆ ಮನವಿಯಲ್ಲಿ ತಿಳಿಸಿದ್ದಾರೆ.
ಗೋತಗಿ ಗ್ರಾಮಸ್ಥರು ಸೋಮವಾರ ಲೋಕಸಭಾ ಚುನವಾಣೆ ಬಹಿಷ್ಕಾರ ಮಾಡುವ ಬಗ್ಗೆ ಮನವಿ ಪತ್ರ ನೀಡಿದ್ದಾರೆ. ಗ್ರಾಮಕ್ಕೆ ಭೇಟಿ ನೀಡಿ ಚುನವಾಣೆ ಬಹಿಷ್ಕಾರ ಮಾಡಬೇಡಿ ಎಂದು ಗ್ರಾಮಸ್ಥರಲ್ಲಿ ಮನವಿ ಮಾಡುತ್ತೇವೆ. ಚುನಾವಣೆ ಯಶಸ್ವಿಯಾಗಿ ನಡೆಯಲು ಸೂಕ್ತ ಕ್ರಮ ಕೈಗೋಳ್ಳುತ್ತೇವೆ.
 ಕೆ.ಎಂ. ಗುರುಬಸವರಾಜ್‌, ತಹಶೀಲ್ದಾರ್‌ 

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.