ವಿದ್ಯಾರ್ಥಿಗಳ ಸಾವು: ಎಸಿ ನೇತೃತ್ವದ ತನಿಖೆ
Team Udayavani, Aug 23, 2019, 12:51 PM IST
ಕೊಪ್ಪಳ: ವಿದ್ಯುತ್ ಅವಘಡದಲ್ಲಿ ಮೃತಪಟ್ಟ ವಿದ್ಯಾರ್ಥಿ ಮನೆಗೆ ಪ್ರಗತಿಪರ ಒಕ್ಕೂಟದ ತಂಡ ಭೇಟಿ ನೀಡಿ ಸಾಂತ್ವನ ಹೇಳಿತು.
ಕೊಪ್ಪಳ: ಐವರು ವಿದ್ಯಾರ್ಥಿಗಳಿಗೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಪ್ರಕರಣವನ್ನು ಶೀಘ್ರ ತನಿಖೆ ನಡೆಸಿ ರಾಜ್ಯ ಸರ್ಕಾರಕ್ಕೆ ವರದಿ ನೀಡುವಂತೆ ಮುಖ್ಯಮಂತ್ರಿಗಳ ಕಚೇರಿಯಿಂದ ಆದೇಶ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸುನೀಲ್ ಕುಮಾರ ಅವರು ಎಸಿ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.
ಕೊಪ್ಪಳ ಡಿ. ದೇವರಾಜ ಅರಸು ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಇತ್ತೀಚೆಗೆ ಧ್ವಜಾರೋಹಣ ನೆರವೇರಿಸಿದ ಕಂಬವನ್ನು ತೆರವು ಮಾಡಲು ಐವರು ವಿದ್ಯಾರ್ಥಿಗಳು ಮುಂದಾಗಿ ದ್ದರು. ಧ್ವಜಸ್ತಂಬ ವಿದ್ಯುತ್ ತಂತಿಗೆ ಸ್ಪರ್ಶಿಸಿ ಐವರು ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿದ್ದರು. ವಿದ್ಯಾರ್ಥಿಗಳ ಸಾವು ರಾಜ್ಯ ಸೇರಿದಂತೆ ದೇಶದಲ್ಲಿ ಸದ್ದು ಮಾಡಿತ್ತು. ಹಾಸ್ಟೆಲ್ಗಳ ದುಸ್ಥಿತಿ, ವಿದ್ಯಾರ್ಥಿಗಳಿಗೆ ಭದ್ರತೆ ಇಲ್ಲದೇ ಇರುವ ಕುರಿತು ರಾಜ್ಯವ್ಯಾಪಿ ಚರ್ಚೆಯಾಗಿತ್ತು. ಇದರಿಂದ ರಾಜ್ಯ ಸರ್ಕಾರವು ಎಚ್ಚೆತ್ತು ಪ್ರಕರಣ ತನಿಖೆ ನಡೆಸುವ ಜೊತೆಗೆ ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಹಣವನ್ನು ಜಿಲ್ಲಾಧಿಕಾರಿ ಪಿಡಿ ಖಾತೆಯಿಂದ ಅಂದೇ ಹಸ್ತಾಂತರ ಮಾಡಲಾಯಿತು.
ಅಲ್ಲದೇ, ಮುಖ್ಯಮಂತ್ರಿಗಳ ಕಚೇರಿಯಿಂದ ಜಿಲ್ಲಾಧಿಕಾರಿ ಸುನೀಲ್ ಕುಮಾರ ಅವರಿಗೆ ಸೂಚನೆ ನೀಡಿ, ಕೇವಲ 10 ದಿನದಲ್ಲಿ ಮೃತ ವಿದ್ಯಾರ್ಥಿಗಳ ಸಾವಿನ ಪ್ರಕರಣದ ಸಮಗ್ರ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಆದೇಶ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರು ಎಸಿ ಸಿ.ಡಿ. ಗೀತಾ ನೇತೃತ್ವದ ಸಮಿತಿ ಮಾಡಿ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದಾರೆ. ಎಸಿ ವರದಿ ಹಾಗೂ ಜೆಸ್ಕಾಂನಿಂದ ಬಂದ ವರದಿ ಬಂದ ಬಳಿಕ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.