ಯೋಗ ದಿನಾಚರಣೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ
ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ವ್ಯವಸ್ಥೆ ಮಾಡಿ ; ಯೋಗದ ಬಗ್ಗೆ ಮಕ್ಕಳಲ್ಲಿ ಕೂಡ ಅರಿವು ಮೂಡಿಸಿ
Team Udayavani, Jun 9, 2022, 2:10 PM IST
ಕೊಪ್ಪಳ: ಜೂ. 21ರಂದು ನಿಗದಿಯಾದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿಕಾಸ ಕಿಶೋರ್ ಸುರಳ್ಕರ್ ಹೇಳಿದರು.
ಜಿಲ್ಲಾ ಕೇಂದ್ರದಲ್ಲಿ 2022ರ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸುವ ಕುರಿತು ಚರ್ಚಿಸಲು ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಬಾರಿ ಭಾರತ ಸರ್ಕಾರದ ಆಯುಷ್ ಮಂತ್ರಾಲಯವು “ಯೋಗ ಫಾರ್ ಹುಮ್ಯಾನಿಟಿ’ ಎಂಬ ಆಶಯದಡಿ ಯೋಗ ದಿನವನ್ನು ಆಚರಿಸುತ್ತಿದೆ. ಜನ ಸಾಮಾನ್ಯರಲ್ಲಿ ಯೋಗದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜೂ. 21ರಂದು ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವ ವ್ಯವಸ್ಥೆ ಮಾಡಬೇಕೆಂದು ಸಲಹೆ ನೀಡಿದರು.
ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ| ಯಮನಪ್ಪ ಶಿರವಾರ ಮಾತನಾಡಿ, ಜಿಲ್ಲೆಯಲ್ಲಿ ಮೂರು ಪಾರಂಪರಿಕ ಮತ್ತು ಸಾಂಪ್ರದಾಯಿಕ ಸ್ಥಳಗಳನ್ನು ಗುರುತಿಸಿ ಯೋಗ ದಿನಾಚರಣೆ ನಡೆಸಲು ಸೂಚನೆ ಇದ್ದು, ಅದರಂತೆ ಜಿಲ್ಲೆಯಲ್ಲಿ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಆವರಣದಲ್ಲಿ, ಗಂಗಾವತಿ ತಾಲೂಕಿನ ಆನೆಗುಂದಿ ಅಥವಾ ಅಂಜನಾದ್ರಿ ಬೆಟ್ಟದಡಿಯ ಪ್ರದೇಶದಲ್ಲಿ ಮತ್ತು ಯಲಬುರ್ಗಾ ತಾಲೂಕಿನ ಇಟಗಿ ಗ್ರಾಮದ ಮಹಾದೇವ ದೇವಾಲಯದ ಆವರಣದಲ್ಲಿ ಯೋಗ ದಿನಾಚರಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಯೋಗದ ಬಗ್ಗೆ ಮಕ್ಕಳಲ್ಲಿ ಕೂಡ ಅರಿವು ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ಶಾಲಾ ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಲು ಆಯಾ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಕೂಡಲೇ ಸುತ್ತೋಲೆ ಹೊರಡಿಸಿ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜೂ. 21ರಂದು ಜಿಲ್ಲೆಯ ಮೂರು ಕಡೆಗಳಲ್ಲಿ ನಡೆಯುವ ಯೋಗ ದಿನಾಚರಣೆ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು. ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಮತ್ತು ಗಣ್ಯರನ್ನು ಶಿಷ್ಠಾಚಾರದಂತೆ ಆಹ್ವಾನಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.
ಜಿಪಂ ಸಿಇಒ ಬಿ. ಫೌಜಿಯಾ ತರನ್ನುಮ್ ಮಾತನಾಡಿ, ಯೋಗ ದಿನದಂದು ಭಾಗವಹಿಸುವ ಶಾಲಾ ಮಕ್ಕಳು ಮತ್ತು ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತು ಇನ್ನಿತರ ಎಲ್ಲವೂ ಸುವ್ಯಸ್ಥಿತವಾಗಿರುವಂತೆ ನೋಡಿಕೊಳ್ಳಬೇಕು. ಯೋಗ ದಿನಾಚರಣೆಯ ಯಶಸ್ಸಿಗೆ ಸಾರ್ವಜನಿಕ ಸಹಭಾಗಿತ್ವ ಬಹುಮುಖ್ಯವಾಗಿದ್ದು, ಯೋಗ ದಿನಾಚರಣೆ ಬಗ್ಗೆ ಹೆಚ್ಚಿನ ರೀತಿಯಲ್ಲಿ ಪ್ರಚಾರ ನಡೆಸಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವ ಹಾಗೆ ನೋಡಿಕೊಳ್ಳಬೇಕು ಎಂದರು.
ವೈದ್ಯಾಧಿಕಾರಿಗಳಾದ ಡಾ| ಗುರುರಾಜ್ ಉಮಚಗಿ, ಡಾ| ರಾಜಶೇಖರ ನರನಾಳ, ಡಾ| ವಿ.ಆರ್. ತಾಳಿಕೋಟೆ, ಡಾ| ಶರಣಪ್ಪ ಡೈದ್ರಿ, ಡಾ| ಪ್ರಹ್ಲಾದ್ ಐಲಿ, ಡಾ| ದೇಶಪಾಂಡೆ, ಡಾ| ಸೋಮಶೇಖರ ನಾಯಕ್, ಜಿಲ್ಲಾ ಸಂಖ್ಯಾ ಸಂಗ್ರಹಣಾ ಧಿಕಾರಿ ಕೃಷ್ಣಮೂರ್ತಿ ದೇಸಾಯಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.