ಮಧ್ಯರಾತ್ರಿ ಜನ ಓಡಾಟ: ಲಾಕ್ ಡೌನ್ ಬಿಗಿಗೊಳಿಸಿದ ಪೊಲೀಸರು
Team Udayavani, Apr 17, 2020, 3:49 PM IST
ಗಂಗಾವತಿ: ಕೋವಿಡ್-19 ಲಾಕ್ ಡೌನ್ ಹಿನ್ನಲೆಯಲ್ಲಿ ವ್ಯಾಪಾರ ವಹಿವಾಟು ನಿರ್ಬಂಧಿಸಲಾಗಿದ್ದರೂ ರಾತ್ರಿ ವೇಳೆ ಕೆಲವರು ಅಂಗಡಿ ತೆರೆದಿರಿಸಿ ವ್ಯಾಪಾರ ನಡೆಸುತ್ತಿದ್ದ ಕಾರಣ ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಸಂಚಾರ ಬಂದ್ ಮಾಡಿದ್ದಾರೆ.
ಪೊಲೀಸರು ರಾತ್ರಿ ಕರ್ತವ್ಯ ಮುಗಿಸಿ ಹೋದ ನಂತರ ಮಧ್ಯ ರಾತ್ರಿಯಿಂದ ನಗರದ ವಿವಿಧ ಸರ್ಕಲ್ ಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ತೆರೆದು ವ್ಯವಹಾರ ನಡೆಸಿ ಜನ ಸಂದಣಿ ಸೇರಲು ಕಾರಣರಾಗುತ್ತಿದ್ದರು.
ಬಟ್ಟೆ, ದಿನಸಿ ಮೊಬೈಲ್ ಎಲೆಕ್ಟ್ರಾನಿಕ್ ಮತ್ತು ಪ್ಯಾನ್ಸಿಸ್ಟೋರ್ ಸೇರಿ ವಿವಿಧ ಅಂಗಡಿಗಳನ್ನು ತೆರೆದು ಭರ್ಜರಿ ವ್ಯಾಪಾರ ನಡೆಸಿ ಲಾಕ್ ಡೌನ್ ಉಲ್ಲಂಘನೆ ಕುರಿತು ಉದಯವಾಣಿ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿ ಪ್ರಮುಖ ವೃತ್ತಗಳಲ್ಲಿ ಸಂಚಾರ ಬಂದ್ ಮಾಡಲಾಗಿದೆ.
ಸಹಾಯಕ ಆಯುಕ್ತೆ ಗೀತಾ ತಹಸೀಲ್ದಾರ್ ಎಲ್.ಡಿ.ಚಂದ್ರಕಾಂತ ಇಒ ಡಾ.ಮೋಹನಕುಮಾರ ಡಿವೈಎಸ್ ಪಿ ಡಾ.ಚಂದ್ರಶೇಖರ ಗುರುವಾರ ಇಡೀ ರಾತ್ರಿ ನಗರದಲ್ಲಿ ಗಸ್ತು ನಡೆಸಿ ಅಂಗಡಿ ಓಪನ್ ಆಗದಂತೆ ಕ್ರಮಕೈಗೊಳ್ಳಲಾಗಿದೆ.
ಶುಕ್ರವಾರ ಬೆಳ್ಳಿಗ್ಗೆ ಇಡೀ ನಗರದಲ್ಲಿ ಪೊಲೀಸ್ ಪೆಟ್ರೋಲಿಂಗ್ ನಡೆಸಿ ವಾಹನ ಸಂಚಾರವಾಗದಂತೆ ಏಕಮುಖ ಸಂಚಾರ ಮಾಡಲು ಒಂದು ಕಡೆ ರಸ್ತೆ ಬಂದ್ ಮಾಡಲಾಗಿದೆ.
ಲಾಕ್ ಡೌನ್ ಇನ್ನಷ್ಟು ಬಿಗಿಗೊಳಿಸಿ ವಿನಾಕಾರಣ ಬೈಕ್ ನಲ್ಲಿ ಓಡಾಡುವವರ ವಿರುದ್ದ ಕ್ರಮ ಕೈಗೊಂಡು ದಂಡ ಹಾಕಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.