ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ನಡೆಸುವುದನ್ನು ಮರೆತ ರಾಜ್ಯ ಸರ್ಕಾರ: ಅಭ್ಯರ್ಥಿಗಳ ಆಕ್ರೋಶ

ಈ ಬಾರಿ ಖಾಸಗಿ ಅನುದಾನಿತ ಶಾಲೆ ಶಿಕ್ಷಕರ ನೇಮಕಾತಿಗೂ ಟಿಟಿಎ ಅನ್ವಯ ಸರ್ಕಾರದ ಘೋಷಣೆ

Team Udayavani, Jul 21, 2022, 12:24 PM IST

9

ಗಂಗಾವತಿ: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿಗಾಗಿ ರಾಜ್ಯ ಸರಕಾರ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸುವ ಪದ್ಧತಿಯನ್ನು ಕಳೆದ ಹಲವು ವರ್ಷಗಳಿಂದ ಅನುಷ್ಠಾನ ಮಾಡಿದೆ.

2021 ರಲ್ಲಿ ಆಯೋಜನೆ ಮಾಡಿದ್ದ ಟಿಇಟಿ ಪರೀಕ್ಷೆಯನ್ನು  ಒಟ್ಟು 2,31,886 ಅಭ್ಯರ್ಥಿಗಳು ಬರೆದಿದ್ದರು. ಇದರಲ್ಲಿ ಶೇಕಡಾ 19.43 ರಷ್ಟು ಅಭ್ಯರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದರು. ಹೆದರಿದ ಸರಕಾರ ಆಹ್ವಾನ ಮಾಡಿದ್ದ ಶಿಕ್ಷಕರ ಹುದ್ದೆಗೆ ಶೇಕಡಾ 19.43 ರಷ್ಟು ಅಭ್ಯರ್ಥಿಗಳು ಮಾತ್ರ ಆಯ್ಕೆಗೊಂಡು ಉಳಿದವರು ಅನುತ್ತೀರ್ಣರಾಗಿದ್ದರು.

ಇದರಿಂದ ಕಲ್ಯಾಣ ಕರ್ನಾಟಕ ಸೇರಿದಂತೆ ರಾಜ್ಯದ ಬಹುತೇಕ ಭಾಗದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿದ್ದವು. ಇದನ್ನು ಗಮನಿಸಿ ನಿಯಮಾವಳಿಯಲ್ಲಿ ಕೆಲವು ಬದಲಾವಣೆ ಮಾಡಿ 2022-23 ಶೈಕ್ಷಣಿಕ ವರ್ಷಕ್ಕಾಗಿ ಕಲ್ಯಾಣ ಕರ್ನಾಟಕ ಭಾಗದ 5000 ಹುದ್ದೆಗಳು ಸೇರಿ ರಾಜ್ಯದಲ್ಲಿ ಒಟ್ಟು 15000 ಶಿಕ್ಷಕರ ಹುದ್ದೆಗಳನ್ನು ತುಂಬಲು ಈಗಾಗಲೇ ರಾಜ್ಯ ಸರಕಾರ ಪ್ರಕ್ರಿಯೆ ನಡೆಸಿದೆ.

ಈ ಮಧ್ಯೆ ಈ ಹಿಂದಿನ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವರು ಪ್ರತಿ ವರ್ಷ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂಬ ನಿಯಮ ರೂಪಿಸಿದರು .ಕಳೆದ ವರ್ಷ ಆಗಸ್ಟ್ ನಲ್ಲಿ ಟಿಇಟಿ ಪರೀಕ್ಷೆಯನ್ನು ಸರ್ಕಾರ ಆಯೋಜನೆ ಮಾಡಿತ್ತು ಪ್ರಸ್ತುತ ವರ್ಷದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸುವ ಕುರಿತು ಇದುವರೆಗೂ ರಾಜ್ಯ ಸರ್ಕಾರ ಯಾವುದೇ ಪ್ರಕಟಣೆ ನೀಡಿಲ್ಲ .ಇದರಿಂದ ಶಿಕ್ಷಕ ಅರ್ಹತಾ ಪರೀಕ್ಷೆಗಾಗಿ ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು ಟಿಇಟಿ ಪರೀಕ್ಷೆಗಾಗಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ.

ಈ ಮಧ್ಯೆ ರಾಜ್ಯ ಸರ್ಕಾರ ರಾಜ್ಯದ ಅನುದಾನಿತ ಶಾಲೆಗಳ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಭರ್ತಿ ಮಾಡುವ ಕುರಿತು ಸುತ್ತೋಲೆ ಹೊರಡಿಸಿದೆ. ಜೊತೆಗೆ ರಾಜ್ಯ ಸರ್ಕಾರದ ಇತ್ತೀಚಿನ ಸುತ್ತೋಲೆ ಪ್ರಕಾರ ಸರ್ಕಾರಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಶಿಕ್ಷಕರ ನೇಮಕಾತಿ ಸಂದರ್ಭದಲ್ಲಿ ಟಿಇಟಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ  ಸರಕಾರ ನಡೆಸುವ ಸಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಸರಕಾರವೇ ನೇಮಕಾತಿ ಮಾಡಲಾಗುತ್ತದೆ  ಎಂಬ ಸುತ್ತೋಲೆ ಪ್ರಕಟವಾಗಿದೆ.

ಪ್ರಸ್ತುತ ರಾಜ್ಯ ಸರ್ಕಾರ ರಾಜ್ಯದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿದರೂ ಇನ್ನೂ ಖಾಲಿ ಹುದ್ದೆಗಳು ಉಳಿಯುತ್ತವೆ. ಶಿಕ್ಷಣ ಇಲಾಖೆ ನೇಮಕಾತಿ ನಿರಂತರವಾಗಿರುತ್ತದೆ ಎಂದು ಸರ್ಕಾರ ಘೋಷಣೆ ಮಾಡಿದೆ. ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ನಡೆಸಲು ಮಾತ್ರ ಆಸಕ್ತಿ ತೋರುತ್ತಿಲ್ಲ. ಇದರಿಂದ ಪ್ರತಿ ವರ್ಷ ಖಾಲಿ ಹುದ್ದೆಗಳ ಸಂಖ್ಯೆ ಏರುತ್ತಲೇ ಇದೆ.

ಪ್ರಸ್ತುತ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಕಳೆದ ತಿಂಗಳು ಸಿಇಟಿ ಪರೀಕ್ಷೆ ನಡೆಸಿದ್ದು, ಇದುವರೆಗೂ ಅದರ ಫಲಿತಾಂಶ ಪ್ರಕಟವಾಗಿಲ್ಲ. ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟವಾದ ನಂತರ ಪುನಃ ಎಷ್ಟು ಹುದ್ದೆಗಳು ಖಾಲಿ ಉಳಿಯಲಿವೆ ಎಂಬ ಮಾಹಿತಿ ಲಭ್ಯವಾಗುತ್ತದೆ.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೂಡಲೇ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ನಡೆಸುವ ಮೂಲಕ ಹಳೆಯ ಮತ್ತು ನೂತನವಾಗಿ ಬಿ ಎಡ್ ಡಿ ಎಡ್ ಮುಗಿಸಿದ ಅಭ್ಯರ್ಥಿಗಳಿಗೆ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಬೇಕೆನ್ನುವುದು ಡಿಎಡ್ ಮತ್ತು ಬಿಎಡ್ ವಿದ್ಯಾರ್ಥಿಗಳ ಆಗ್ರಹವಾಗಿದೆ.

ರಾಜ್ಯದಲ್ಲಿ ಖಾಲಿ ಇರುವ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ ಸಂಬಂಧಪಟ್ಟಂತೆ ಶಿಕ್ಷಣ ಇಲಾಖೆ ಅವೈಜ್ಞಾನಿಕ ನಿಯಮಗಳನ್ನು ಅನುಸರಿಸದೆ ಪ್ರತಿ ವರ್ಷ ಟಿಇಟಿ ಪರೀಕ್ಷೆ ನಡೆಸುವ ಮೂಲಕ ಪಿಇಟಿಯನ್ನು ನಡೆಸಬೇಕು. ಈ ಸಂದರ್ಭದಲ್ಲಿ ಎಲ್ಲಾ ಅಭ್ಯರ್ಥಿಗಳಿಗೂ ನೇಮಕಾತಿಯಾಗಲು ಅನುಕೂಲವಾಗುತ್ತದೆ. ಕಳೆದ ವರ್ಷ ಟಿಇಟಿ ಪರೀಕ್ಷೆ ಬರೆದ  ಅಭ್ಯರ್ಥಿಗಳ ಪೈಕಿ ಶೇ.19.43 ರಷ್ಟು ಅಭ್ಯರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ. ಇನ್ನುಳಿದವರು ಅನುತ್ತೀರ್ಣರಾಗಿದ್ದು ಪುನಃ ಈಗ ಟಿಇಟಿ ಪರೀಕ್ಷೆ ನಡೆಸಿ ಅನುತ್ತೀರ್ಣರಾದವರಿಗೂ ಅವಕಾಶವನ್ನು ಕಲ್ಪಿಸಬೇಕು. ಪ್ರಸ್ತುತ ಶಿಕ್ಷಕರ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಇದರಲ್ಲಿ ಹುದ್ದೆ ಸಿಗದವರು ಸಹ ಟಿಇಟಿ ಪರೀಕ್ಷೆ ಬರೆದು ಮುಂದಿನ ಸಿಇಟಿ ಪರೀಕ್ಷೆಗೆ ಅರ್ಹತೆ ಪಡೆಯಬಹುದಾಗಿದೆ. ಲಕ್ಷಾಂತರ ಅಭ್ಯರ್ಥಿಗಳು ಹಗಲು ರಾತ್ರಿ ಟಿಇಟಿ ಪರೀಕ್ಷೆಗಾಗಿ ತಯಾರಿ ನಡೆಸಲು ರಾಜ್ಯ ಸರ್ಕಾರ ಶೀಘ್ರವೇ ಟಿಇಟಿ ಪರೀಕ್ಷೆ ನಡೆಸಬೇಕೆಂದು ಬಿ ಎಡ್ ತೇರ್ಗಡೆಯಾಗಿರುವ   ಸೋಮನಾಥ್ ಉದಯವಾಣಿಗೆ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.

ಈಗಾಗಲೇ ರಾಜ್ಯದಲ್ಲಿ ಖಾಲಿ ಇರುವ 15,000 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಪ್ರಕ್ರಿಯೆ ನಡೆದಿದೆ. ಸಿಇಟಿ ಪರೀಕ್ಷೆಯ ಫಲಿತಾಂಶ ಇನ್ನೂ ಪ್ರಕಟಗೊಂಡಿಲ್ಲ. ಫಲಿತಾಂಶ ಪ್ರಕಟಗೊಂಡ ನಂತರ ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಪುನಃ ಟಿಇಟಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಅಲ್ಲಿಯವರೆಗೂ ಅನುದಾನಿತ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಯ ಸಿಇಟಿ ಪರೀಕ್ಷೆಯನ್ನು ಸರಕಾರ ನಡೆಸದಿರಲು ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಉದಯವಾಣಿಯೊಂದಿಗೆ ಮಾತನಾಡಿ ತಿಳಿಸಿದ್ದಾರೆ.

– ಕೆ. ನಿಂಗಜ್ಜ

 

ಟಾಪ್ ನ್ಯೂಸ್

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್‌ ಮುಂಡಾಡಿ

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್‌ ಆಫೀಸ್‌ನಲ್ಲಿ ಗೆದ್ದವರು ಯಾರು?

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Yuva Rajkumar: ʼಎಕ್ಕʼ ಇದು ಯುವ ಹೊಸ ಲೆಕ್ಕ

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾಚಾರ!

Tirupati: ಮೂರು ವರ್ಷದ ಬಾಲಕಿ ಮೇಲೆ ಸಂಬಂಧಿಯಿಂದಲೇ ಅತ್ಯಾ*ಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

Deepavali Festival: ರೈತರ ಪಾಲಿಗೆ ಹೂವಾಯ್ತು ದೀಪಾವಳಿ ಹಬ್ಬದ ಬೋನಸ್‌!

5-koppala

Koppala: ಶಾರ್ಟ್ ಸರ್ಕ್ಯೂಟ್ ನಿಂದ ಓರ್ವ ಸಾವು

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

ಯಶಸ್ವಿ ವ್ಯವಸಾಯ- ವಲಸಿಗನ ಬದುಕು ಸಿಹಿಯಾಗಿಸಿದ ಕಬ್ಬು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

KEA: ಪರೀಕ್ಷೆ ವೇಳೆ ತುಂಬು ತೋಳಿನ ಶರ್ಟ್‌ಗೆ ಕತ್ತರಿ!

KEA: ಪರೀಕ್ಷೆ ವೇಳೆ ತುಂಬು ತೋಳಿನ ಶರ್ಟ್‌ಗೆ ಕತ್ತರಿ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

abhimanyu kashinath next movie suri loves sandhya

Abhimanyu Kashinath; ಸೂರಿ ಲವ್‌ ಗೆ ಉಪ್ಪಿ ಮೆಚ್ಚುಗೆ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

1-a-ccc

INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ

arrested

Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್

1-a-shaina

Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.