ತೆರವುಗೊಳ್ಳುವ ಶಾಲೆಗೆ ಪರ್ಯಾಯ ವ್ಯವಸ್ಥೆ ಆಗಿಲ್ಲ
ರೈಲ್ವೆ ನಿಲ್ದಾಣಕ್ಕಾಗಿ ತೆರವಾಗಲಿವೆ ಶಾಲೆ-ಅಂಗನವಾಡಿ
Team Udayavani, Apr 14, 2022, 4:52 PM IST
ಕುಷ್ಟಗಿ: ಪಟ್ಟಣದ ಹೊರವಲಯದ ಸಂತ ಶಿಶುನಾಳ ಶರೀಫ್ ನಗರದ ಬಳಿ ಗದಗ-ವಾಡಿ ವಿದ್ಯುತ್ ಲೈನ್ ರೈಲು ಮಾರ್ಗದ ಉದ್ದೇಶಿತ ರೈಲು ನಿಲ್ದಾಣ ನಿರ್ಮಾಣಕ್ಕಾಗಿ ಈಗಾಗಲೇ ಭೂಮಿ ಸ್ವಾಧೀನಗೊಂಡಿದೆ. ಇದರ ವ್ಯಾಪ್ತಿಯಲ್ಲಿ ಮನೆ ಕಳೆದುಕೊಳ್ಳುವವರಿಗೆ ಪರಿಹಾರವೂ ಸಿಕ್ಕಿದೆ. ಆದರೆ ತೆರವುಗೊಳ್ಳಲಿರುವ ಸರ್ಕಾರಿ ಶಾಲಾ ಕಟ್ಟಡ ಹಾಗೂ ಅಂಗನವಾಡಿ ಕೇಂದ್ರಕ್ಕೆ ಇದುವರೆಗೂ ಯಾವುದೇ ಪರ್ಯಾಯ ಕ್ರಮವಾಗಿಲ್ಲ.
ಈ ಭಾಗದ ಮಹತ್ವಾಕಾಂಕ್ಷಿ ನೈರುತ್ಯ ವಲಯದ ರೈಲ್ವೆ ಯೋಜನೆ 257 ಕಿ.ಮೀ. ಇದ್ದು, 2,841 ಕೋಟಿ ರೂ. ವೆಚ್ಚದ ಯೋಜನೆಯಾಗಿದೆ. ಪಟ್ಟಣದಲ್ಲಿ 2.02 ಕೋಟಿ ರೂ. ಅಂದಾಜು ವೆಚ್ಚದಲ್ಲಿ ರೈಲು ನಿಲ್ದಾಣ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಕುಷ್ಟಗಿ ವ್ಯಾಪ್ತಿಯ ಸಂತ ಶಿಶುನಾಳ ಶರೀಫ್ ನಗರ ಹಾಗೂ ಮಾರುತಿ ನಗರದ ನಡುವಿನೆ 1.04 ಕಿ.ಮೀ. ಉದ್ದ ಹಾಗೂ 35-80 ಮೀಟರ್ ಅಗಲ ರೈಲ್ವೆ ನಿಲ್ದಾಣ ನಿರ್ಮಿಸಲು ಜಾಗೆ ಗುರುತಿಸಲಾಗಿದೆ.
ಈ ಜಾಗೆಯಲ್ಲಿ 35 ಮನೆಗಳು, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ನಿರ್ಮಾಣ ಹಂತದ ಅಂಗನವಾಡಿ ಕಟ್ಟಡ ಇದೆ. ಈಗಾಗಲೇ ಮನೆ ಕಳೆದುಕೊಂಡವರಿಗೆ ತಲಾ 3 ಲಕ್ಷ ರೂ. ಪರಿಹಾರ ಸಿಕ್ಕಿದೆ. ಶಾಲೆ ಹಾಗೂ ಅಂಗನವಾಡಿ ಕೇಂದ್ರಕ್ಕೆ ಇಲ್ಲಿವರೆಗೂ ರೈಲ್ವೇ ಇಲಾಖೆ, ತಾಲೂಕಾಡಳಿತದಿಂದ ಯಾವೂದೇ ಮುನ್ಸೂಚನೆ ಬಂದಿಲ್ಲ.
ರೈಲ್ವೆ ಇಲಾಖೆಯವರು ಕೆಲವು ಮನೆಗಳು, ಶಾಲೆ, ಅಂಗನವಾಡಿ ಕೇಂದ್ರ ಇಲಾಖೆ ಪರಿಮಿತಿಯಲ್ಲಿವೆ ಎನ್ನುತ್ತಿದ್ದಾರೆ. ಇಲ್ಲಿ ರೈಲು ನಿಲ್ದಾಣವಾದರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮಾರುತಿ ನಗರ ಇಲ್ಲವೇ ಕೃಷ್ಣಗಿರಿ ಸರ್ಕಾರಿ ಶಾಲೆಯಲ್ಲಿ ವಿಲೀನಗೊಳಿಸಬೇಕೆ? ಎನ್ನುವ ಬಗ್ಗೆ ಚರ್ಚೆ ನಡೆದಿದೆ. ಆದರೆ ಸಂತ ಶಿಶುನಾಳ ಶರೀಫ್ ನಗರದ ನಿವಾಸಿಗಳಿಂದ ನಮ್ಮ ಬಡಾವಣೆಗೆ ಹೊಂದಿಕೊಂಡಿರುವ ಜಮೀನು ಖರೀ ದಿಸಿ ಶಾಲೆ, ಅಂಗನವಾಡಿ ನಿರ್ಮಿಸುವ ಬೇಡಿಕೆ ವ್ಯಕ್ತವಾಗಿದೆ.
ರೈಲು ನಿಲ್ದಾಣದಿಂದ ಶಾಲೆ ಸ್ಥಳಾಂತರ ಬಗ್ಗೆ ಮಾಹಿತಿ ಇಲ್ಲ. ಕೂಡಲೇ ಮಾಹಿತಿ ತರಿಸಿಕೊಂಡು, ಪರಿಶೀಲಿಸಿ ಹೊಸ ಶಾಲೆ ನಿರ್ಮಾಣಕ್ಕಾಗಿ ಮೇಲಾಧಿಕಾರಿಗಳಲ್ಲಿ ಪ್ರಸ್ತಾಪಿಸುವೆ. –ಸುರೇಂದ್ರ ಕಾಂಬ್ಳೆ, ಕ್ಷೇತ್ರ ಶಿಕ್ಷಣಾಧಿಕಾರಿ
ಅಲೆಮಾರಿ ಬುಡಕಟ್ಟು ಸಮುದಾಯದ ಜನರ ಹೋರಾಟದ ಹಿನ್ನೆಲೆಯಲ್ಲಿ ಈ ಜಾಗೆ ಬಂದಿದೆ. ರೈಲು ಮಾರ್ಗ, ನಿಲ್ದಾಣಕ್ಕಾಗಿ ಇಲಾಖೆಯ ಸೂಚನೆಯಂತೆ 35 ಮನೆಗಳನ್ನು ಬಿಟ್ಟುಕೊಟ್ಟಿದ್ದೇವೆ. ಶಾಲೆ, ಅಂಗನವಾಡಿ ಕೇಂದ್ರಕ್ಕೆ ಹೊಸ ಜಾಗೆ ಖರೀದಿ ಸುವ ಬಗ್ಗೆ ಇಲ್ಲಿವರೆಗೂ ಚಕಾರವೆತ್ತಿಲ್ಲ. 70 ಮಕ್ಕಳಿರುವ ಶಾಲೆಗಾಗಿ ಬಡಾವಣೆಗೆ ಹೊಂದಿಕೊಂಡಿರುವ ಜಮೀನು ಖರೀದಿಧಿಸಿ, ಅಲ್ಲಿಯೇ ಶಾಲೆ, ಅಂಗನವಾಡಿ ನಿರ್ಮಿಸಲು ಕ್ರಮ ಕೈಗೊಳ್ಳಬೇಕು. –ಮಹಿಬೂಬಸಾಬ್ ಮದಾರಿ, ಶಾಲೆ ಎಸ್‌ಡಿಎಂಸಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.