ನಾಲ್ವರ ಗಂಟಲು ದ್ರವ ಸಂಗ್ರಹ
Team Udayavani, Jun 5, 2020, 6:33 AM IST
ಕಾರಟಗಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆಮ್ಮು, ಅಸ್ತಮಾ ಹಾಗೂ ಉಸಿರಾಟದ ತೊಂದರೆ ಇದ್ದ ನಾಲ್ವರು ಮಹಿಳೆಯರ ಗಂಟಲು ದ್ರವ ಸಂಗ್ರಹಿಸಿ ಕಿಮ್ಸ್‌ಗೆ ಕಳಿಸಲಾಗಿದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ಡಾ| ನಾಗರಾಜ ತಿಳಿಸಿದ್ದಾರೆ.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈವರೆಗೆ ಥರ್ಮಲ್ ಸ್ಕ್ರೀನಿಂಗ್ ಮಾತ್ರ ನಡೆಸಲಾಗುತ್ತಿತ್ತು. ಜೂ.2ರಂದು ಗಂಟಲು ದ್ರವ ಸಂಗ್ರಹ ಕೇಂದ್ರ ಆರಂಭಿಸಲಾಗಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಗಂಟಲು ದ್ರವ ಸಂಗ್ರಹದ ಬಗ್ಗೆ ವಿಶೇಷ ತರಬೇತಿ ನೀಡಿ ಅಗತ್ಯವಾಗಿ ಕೈಗೊಳ್ಳಬೇಕಾದ ಮುಂಜಾಗ್ರತೆಗಳ ಬಗ್ಗೆಯೂ ತಿಳಿಸಲಾಗಿದೆ.
ಗುರುವಾರ ತಾಲೂಕು ವ್ಯಾಪ್ತಿಯ ವಿವಿಧ ಗ್ರಾಮಗಳ ನಾಲ್ವರು ಮಹಿಳೆಯರ ಗಂಟಲುದ್ರವ ಸಂಗ್ರಹ ಮಾಡಲಾಗಿದೆ. ಅಲ್ಲದೆ ರಾಜಸ್ಥಾನದಿಂದ ಬುಧವಾರ ಪಟ್ಟಣಕ್ಕೆ ಆಗಮಿಸಿದ 12 ಜನರನ್ನು ಕೂಡ ಗುರುವಾರ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗಿದೆ. ಯಾರಲ್ಲೂ ಕೋವಿಡ್ ಸಂಬಂಧಿಸಿದ ಲಕ್ಷಣಗಳು ಕಂಡುಬಂದಿಲ್ಲ. ತಾಲೂಕಿನಲ್ಲಿ ಕೋವಿಡ್ ಶಂಕಿತ, ಸೋಂಕಿತರು ಇವರೆಗೆ ಎಲ್ಲೂ ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.