ಟಿಪ್ಪರ್ ಪ್ರಯಾಣವೇ ಇಲ್ಲಿ ‘ಟಾಪ್’
Team Udayavani, May 12, 2019, 4:54 PM IST
ಕುಕನೂರು: ಸರಕು ಸಾಗಾಣಿಕೆ ವಾಹನಗಳಲ್ಲಿ ಪ್ರಯಾಣಿಕರ ಸಂಚಾರ ಅಪರಾಧ. ಸರಕು ಸಾಗಾಣಿಕೆ ವಾಹನಗಳಲ್ಲಿ ಯಾವುದೇ ಕಾರಣಕ್ಕೂ ಪ್ರಯಾಣಿಕರು ಸೇರಿದಂತೆ ಶಾಲಾ ಮಕ್ಕಳು, ಕಾರ್ಮಿಕರು ಸಂಚರಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ಕುಮಾರ್ ಇತ್ತೀಚೆಗೆ ನಡೆದ ಸಭೆಯಲ್ಲಿ ಎಚ್ಚರಿಕೆ ನೀಡಿದ್ದರೂ ಇಲ್ಲಿ ಕಾರ್ಮಿಕರನ್ನು ಸರಕು ಸಾಗಾಣಿಕೆ ವಾಹನದಲ್ಲೇ ಸಾಗಿಸುತ್ತಿರುವುದು ಸಾರ್ವಜನಿಕರ ಚರ್ಚೆಗೆ ಗ್ರಾಸವಾಗಿದೆ.
ಹೌದು. ಇಲ್ಲಿಯ ಕೆಲವು ಕಂಪನಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೂಲಿ ಕಾರ್ಮಿಕರನ್ನು ಟಿಪ್ಪರ್‌ನಲ್ಲೇ ಕರೆದುಕೊಂಡು ಹೋಗಲಾಗುತ್ತಿದೆ. ಸೂಪರ್‌ವೈಜರ್ ಹಾಗೂ ಕಚೇರಿಯಲ್ಲಿ ಕಾರ್ಯ ನಿರ್ವಹಿಸುವವರಿಗೆ ಸಂಚರಿಸಲು ಬಸ್ ಸೌಲಭ್ಯ ಇದೆ. ಆದರೆ ಕೂಲಿ ಕಾರ್ಮಿಕರಿಗೆ ಸಂಚರಿಸಲು ಯಾವುದೇ ರೀತಿಯ ಬಸ್ ಹಾಗೂ ಟ್ಯಾಕ್ಸಿಗಳು ಇಲ್ಲದಿರುವುದು ಆಶ್ಚರ್ಯ ಸಂಗತಿ. ಬೆಳಗ್ಗೆ ತಡವಾಗಿ ಕಾರ್ಮಿಕರನ್ನು ಕರೆದುಕೊಂಡು ಹೋದರೆ ಎಲ್ಲಿ ಸಮಸ್ಯೆಯಾಗುತ್ತದೆ ಎನ್ನುವ ಉದ್ದೇಶದಿಂದ ಪ್ರತಿದಿನ ಬೆಳಿಗ್ಗೆ 5-30 ರಿಂದ 6 ಗಂಟೆಯೊಳಗೇ ಕಾರ್ಮಿಕರನ್ನು ಕಂಪನಿಯ ಟಿಪ್ಪರ್‌ನಲ್ಲಿ ಕರೆದುಕೊಂಡು ಹೋಗಲಾಗುತ್ತಿದೆ. ಉಳಿದವರನ್ನು 8 ಗಂಟೆ ಸುಮಾರಿಗೆ ಬಸ್‌ನಲ್ಲಿ ಕರೆದುಕೊಂಡು ಹೋಗಲಾಗುತ್ತದೆ.
ಇದು ತಾಲೂಕಿನಲ್ಲಿ ಕೆಲಸ ಆರಂಭ ಆದಾಗಿನಿಂದಲೂ ಇದೇ ಪರಿಸ್ಥಿತಿ ಇದೆ. ಈ ವಿಷಯವಾಗಿ ಪ್ರಾದೇಶಿಕ ಸಾರಿಗೆ ಇಲಾಖೆ, ಪೊಲೀಸ್, ಕಾರ್ಮಿಕ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಚರ್ಚಿಸಿದ್ದರೂ ಪ್ರಯೋಜನ ಇಲ್ಲದಂತಾಗಿದೆ. ಈ ತರಹದ ಘಟನೆಗಳು ಆಗದಂತೆ ನೋಡಿಕೊಳ್ಳಬೇಕಿದ್ದ ಅಧಿಕಾರಿಗಳು ಇದುವರೆಗೂ ಕ್ರಮ ಕೈಗೊಳ್ಳದಿರುವುದು ಪ್ರಜ್ಞಾವಂತರ ಆಕ್ರೋಶಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.