ಹಳ್ಳಿಗಳಲ್ಲಿ ಬಳಕೆಯಾಗುತ್ತಿಲ್ಲ ಶೌಚಾಲಯ

ಬಯಲು ಬಹಿರ್ದೆಸೆ ಮುಕ್ತ ಗ್ರಾಮಗಳು ಆಗುವುದು ಯಾವಾಗ?

Team Udayavani, Apr 25, 2022, 11:26 AM IST

8

ದೋಟಿಹಾಳ: ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಪತ್ರಿಯೊಬ್ಬರು ಬಯಲು ಶೌಚಾಲಯಕ್ಕೆ ಹೊಗುವುದನ್ನು ಬಿಡಿ ಮನೆಗೊಂದು ಶೌಚಾಲಯ ನಿರ್ಮಿಸಿಕೊಳ್ಳಿ. ನಮ್ಮ ಗ್ರಾಮ, ತಾಲೂಕು, ಜಿಲ್ಲೆ ಹಾಗೂ ರಾಜ್ಯ ಬಯಲು ಮುಕ್ತ ಶೌಚಾಲಯ ರಾಜ್ಯವನ್ನಾಗಿ ಮಾಡೋಣ ಎಂದೆಲ್ಲಾ ಅಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ತಾಲೂಕಿನ ಅನೇಕ ಹಳ್ಳಿಗಳಲ್ಲಿ ಶೌಚಾಲಯಗಳನ್ನು ಗ್ರಾಮಸ್ಥರು ಬಳಸುತ್ತಿಲ್ಲ.

ಕೇಂದ್ರ ಮತ್ತು ರಾಜ್ಯ ಸರಕಾರಿ ಸ್ವಚ್ಚ ಭಾರತ್‌ ಮಿಷನ್‌ ಯೋಜನೆಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಕೋಟಿ ಗಟ್ಟಲೇ ಹಣ ಖರ್ಚು ಮಾಡುತ್ತಿದೆ. ಆದರೆ ಶೌಚಾಲಯ ನಿರ್ಮಾಣ ಮಾಡಿದ ಮೇಲೆ ಜನರು ಅದನ್ನು ಉಪಯೋಗಿಸದೇ ಕಟ್ಟಿಗೆ, ಕುಳ್ಳು ಮತ್ತು ಮನೆಗಳ ಸಾಮಾಗ್ರಿಗಳನ್ನು ಇಡಲು ಉಪಯೋಗಿಸುತ್ತಿರುವುದು ಅನೇಕ ಹಳ್ಳಿಗಳಲ್ಲಿ ಕಂಡುಬರುತ್ತಿದೆ. ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕಾಗಿದೆ.

ಬಿಜಕಲ್‌ ಗ್ರಾಪಂನ ಕೆ. ಬೋದೂರ ತಾಂಡಾ, ದೋಟಿಹಾಳ ಗ್ರಾಪಂನ ಹೆಸರೂರು ಗ್ರಾಮ ಮತ್ತು ಮುದೇನೂರ ಗ್ರಾಪಂನ ಕೆ.ಬೆಂಚಮಟ್ಟಿ ಗ್ರಾಮಗಳಲ್ಲಿ ಮನೆಗೊಂದು ಶೌಚಾಲಯಗಳನ್ನು ನಿರ್ಮಾಣ ಮಾಡಿಕೊಂಡಿದ್ದಾರೆ. ಆದರೆ ಸಾರ್ವಜನಿಕರು ಅವುಗಳನ್ನು ಉಪಯೊಗಿಸುತ್ತಿಲ್ಲ. ಅವುಗಳು ಕೇವುಲ ನೋಡಲು ಮಾತ್ರ ಶೌಚಾಲಯ. ಯಾರೊಬ್ಬರು ಮನೆಯ ಹತ್ತಿರ ಇರುವ ವೈಯಕ್ತಿಕ ಶೌಚಾಲಯಕ್ಕೆ ಹೋಗದೆ. ಇಂದಿಗೂ ಮಹಿಳೆಯರೂ, ಪುರಷರು ಬಯಲು ಶೌಚಾಲಯಕ್ಕೆ ಹೋಗುತ್ತಿದ್ದಾರೆ. ಈ ಗ್ರಾಮಗಳು ಬಯಲು ಬಹಿರ್ದೆಸೆ ಮುಕ್ತ ಗ್ರಾಮವಾಗಿರುವ ವಿಚಾರ ಗ್ರಾಮಸ್ಥರಿಗೆ ಗೊತ್ತಿಲ್ಲ.

ಹಳ್ಳಿಗಳಲ್ಲಿ ಇಂದಿಗೂ ಜನರು ಶೌಚಕ್ಕೆ ಬಯಲನ್ನೇ ಆಶ್ರಯಿಸಿದ್ದಾರೆ. ಸಮರ್ಪಕ ನಿರ್ವಹಣೆ ಕೊರತೆಯಿಂದ ಶೌಚಾಲಯಗಳು ಬಾಗಿಲು ಮುಚ್ಚಿವೆ. ಹಲವು ಬಳಕೆಗೆ ಯೋಗ್ಯವಿಲ್ಲದಂತಾಗಿವೆ. ಹಳ್ಳಿಗಳಲ್ಲಿ ಈಗಲೂ ತಿಳಿವಳಿಕೆ ಕೊರತೆಯಿಂದ ಶೌಚಾಲಯ ಬಳಕೆ ಮಾಡಿಕೊಂಡಿಲ್ಲ. ನೀರಿಲ್ಲದಿರುವುದು ಕೂಡ ಸಮಸ್ಯೆಯಾಗಿದೆ. ಹೀಗಾಗಿ ಸಾರ್ವಜನಿಕರು ಇವುಗಳನ್ನು ಕುಳ್ಳು, ಕಟ್ಟಿಗೆಗಳನ್ನು ಹಾಕಲು ಉಪಯೋಗಿಸುತ್ತಿದ್ದಾರೆ.

ಇದರ ಬಗ್ಗೆ ಗ್ರಾಮಸ್ಥರನ್ನು ವಿಚಾರಿಸಿದರೆ. ಗ್ರಾಮದ ಪ್ರತಿಯೊಬ್ಬರ ಮನೆಗಳ ಮುಂದೆ ವೈಯಕ್ತಿಕ ಶೌಚಾಲಯಗಳಿವೆ. ಸದ್ಯ ಅವುಗಳು ಹಾಳಾಗಿವೆ ಮತ್ತು ನೀರಿನ ಸಮಸ್ಯೆ ಇರುವುದರಿಂದ ಶೌಚಾಲಯಗಳು ಬಳಕೆ ಮಾಡುತ್ತಿಲ್ಲ ಎಂದು ಗ್ರಾಮಸ್ಥರು ತಿಳಿಸಿದರು. ಸರಕಾರ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಸಹಾಯಧನ ನೀಡುತ್ತದೆ. ಆದರೆ ಸಾರ್ವಜನಿಕರು ಮಾತ್ರ ಇವುಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸುತ್ತಿಲ್ಲ. ಇದರ ಬಗ್ಗೆ ಜಾಗೃತಿ ಮೂಡಿಸಬೇಕಿದೆ.

ಸಿಇಒ ಅವರು ಪ್ರತಿ ಶುಕ್ರವಾರ ಚಿಲುಮೆ ಎಂಬ ಕಾರ್ಯಕ್ರಮ ಮಾಡುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಸ್ವತ್ಛತೆ ಮತ್ತು ಶೌಚಾಲಯಗಳ ಬಳಕೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಈ ಬಗ್ಗೆ ಕೇವಲ ಅಧಿ ಕಾರಿಗಳ ಕೆಲಸ ಮಾಡಿದರೆ ಸಾಲದು, ಇದಕ್ಕೆ ಸಾರ್ವಜನಿಕರ ಸಹಕಾರ ಬಹಳ ಮುಖ್ಯ. ಡಾ| ಜಯರಾಮ್‌ ಚವ್ಹಾಣ, ಕುಷ್ಟಗಿ ತಾಪಂ ಇಒ   ಮಲ್ಲಿಕಾರ್ಜುನ ಮೆದಿಕೇರಿ

ಟಾಪ್ ನ್ಯೂಸ್

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

8-gangavathi

Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.