ಅಂಜನಾದ್ರಿ ಬೆಟ್ಟದಲ್ಲಿ ನಾಳೆ ಯೋಗ ಶಿಬಿರ: ವಚನಾನಂದ ಶ್ರೀ
75 ತಾಣಗಳಲ್ಲಿ ಯೋಗ ಕಾರ್ಯಕ್ರಮಕ್ಕೆ ಅಂಜನಾದ್ರಿಯಿಂದಲೇ ಚಾಲನೆ
Team Udayavani, Apr 15, 2022, 10:23 AM IST
ಕೊಪ್ಪಳ: ಜಗತ್ತಿಗೆ ಯೋಗವನ್ನು ಪರಿಚಯಿಸಲು ದೇಶದಲ್ಲಿನ 75 ಪ್ರವಾಸಿ ಹಾಗೂ ಐತಿಹಾಸಿಕ ಸ್ಥಳಗಳಲ್ಲಿ ಯೋಗ ಶಿಬಿರ ಆಯೋಜನೆ ಮಾಡುವ ಉದ್ದೇಶವಿದ್ದು, ಅದರ ಭಾಗವಾಗಿ ನಾಡಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದಲ್ಲಿ ಏ.16ರಂದು ಹನುಮ ಜಯಂತಿ ಪ್ರಯುಕ್ತ ಯೋಗ ಶಿಬಿರ ಹಮ್ಮಿಕೊಳ್ಳಲಾಗುವುದು ಎಂದು ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ ಹಂಪಿ, ವಿಜಯಪುರದ ಗೋಲಗುಂಬಜ್, ಮೈಸೂರು ಅರಮನೆ ಸೇರಿ 75 ತಾಣಗಳಲ್ಲಿ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗು ವುದು. ಇತರೆ ಜಿಲ್ಲೆಗಳಲ್ಲಿಯೂ ಕಾರ್ಯಕ್ರಮ ಇರಲಿವೆ. ಅಂಜನಾದ್ರಿ ಬೆಟ್ಟದಿಂದ ಚಾಲನೆ ನೀಡಲಿದ್ದು, ಏ.16ರ ಬೆಳಗ್ಗೆ 6ರಿಂದ 7 ಗಂಟೆವರೆಗೆ ಶಿಬಿರ ನಡೆಯಲಿದೆ. ಆಸಕ್ತರು ಈ ಯೋಗ ಶಿಬಿರದಲ್ಲಿ ಪಾಲ್ಗೊಳ್ಳಬಹುದು ಎಂದರು.
ಇನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಸರ್ಕಾರ ಹಲವು ಕಾರ್ಯಕ್ರಮ ನಡೆಸುತ್ತಿದೆ. ಹರಿಹರ ಪೀಠದಲ್ಲಿ ಏ.23, 24ರಂದು ಸರ್ಕಾರದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪಂಚಮಸಾಲಿ ಸಮುದಾಯದ ಅನೇಕ ಮಹನೀಯರ ಹೋರಾಡಿದ್ದಾರೆ. ಕೆಲವರನ್ನು ಇತಿಹಾಸ ಗುರುತಿಸಿದರೆ, ಇನ್ನೂ ಕೆಲವರು ಮರೆಯಾಗಿದ್ದಾರೆ. ಅಂತಹವರ ಬಗ್ಗೆ ಸಮಾಜಕ್ಕೆ ತಿಳಿಸುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರೊಂದಿಗೆ ಉನ್ನತ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನೂತನ ಶಿಕ್ಷಣ ನೀತಿ ಬಗ್ಗೆ ವಿಚಾರ ಸಂಕಿರಣ ನಡೆಯಲಿದೆ ಎಂದರು.
ಏ.24ರಂದು ಬೆಳಗ್ಗೆ ಹರ ಮಾಲೆ ಕಾರ್ಯಕ್ರಮ ನಡೆಯಲಿದೆ. ಯುವಕರು ಸೇರಿ ಎಲ್ಲ ವಯೋ ಮಾನ ದವರು ಹರಮಾಲೆ ಧರಿಸಿ ಜಪ ಮಾಡಲಿ ದ್ದಾರೆ. ಕೋವಿಡ್‌ನಲ್ಲಿ ಸಾಕಷ್ಟು ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಅಂತಹವರಿಗೆ ನೆರವಾಗಲೆಂದು ಕೌಶಲ ಅಭಿವೃದ್ಧಿ, ಬೃಹತ್ ಕೈಗಾರಿಕೆ ಇಲಾಖೆ ಸಹ ಯೋಗದಲ್ಲಿ ಬೆಳಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ಬೃಹತ್ ಉದ್ಯೋಗ ಮೇಳ ಹಮ್ಮಿಕೊಂಡಿದ್ದೇವೆ. ನೂರಾರು ಕಂಪನಿಗಳು ಭಾಗಿಯಾಗಲಿದ್ದು, ಯುವ ಕರು ಸದುಪಯೋಗ ಪಡೆದುಕೊಳ್ಳಬೇಕಿದೆ. ಉದ್ಯೋಗ ಮೇಳದಲ್ಲಿ ನೋಂದಣಿ ಮಾಡಿಕೊಳ್ಳಬಹುದು.
ಮಾಹಿತಿಗಾಗಿ 8971749636, 8095774 802 ಸಂಖ್ಯೆ ಸಂಪರ್ಕಿಸುವಂತೆ ತಿಳಿಸಿದರು. ಪಂಚಮಸಾಲಿ ಸಮುದಾಯ ಮುಖಂಡರಾದ ಬಸನಗೌಡ ತೊಂಡಿಹಾಳ, ಕರಿಯಪ್ಪ ಮೇಟಿ, ಕೆ.ಜಿ. ಪಲ್ಯದ್, ಶಿವಪ್ಪ ಯಲಬುರ್ಗಾ, ಕಳಕನಗೌಡ ಕಲ್ಲೂರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.