ಪ್ರವಾಸೋದ್ಯಮ ಅಭಿವೃದ್ಧಿ ನಿರೀಕ್ಷೆಯಲ್ಲಿ ಕಿಷ್ಕಿಂದಾ
Team Udayavani, Aug 1, 2022, 4:18 PM IST
ಗಂಗಾವತಿ: ವಿಶ್ವವಿಖ್ಯಾತ ಕಿಷ್ಕಿಂದಾ ಅಂಜನಾದ್ರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮೊದಲ ಬಾರಿಗೆ ಆಗಮಿಸುತ್ತಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುತ್ತಿರುವುದು ಕ್ಷೇತ್ರದ ಜನರಲ್ಲಿ ಆಶಯ ಹೆಚ್ಚಿಸಿದ್ದು, ಆನೆಗೊಂದಿ ಸುತ್ತಲಿನ ಪ್ರದೇಶದ ಪ್ರವಾಸೋದ್ಯಮದ ನಿರೀಕ್ಷೆ ಮೂಡಿದೆ. ಈಗಾಗಲೇ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ 20 ಕೋಟಿ ಅನುದಾನ ನೀಡಿದ್ದು, ಪ್ರಸ್ತುತ ಸರ್ಕಾರ 100 ಕೋಟಿ ಅನುದಾನವನ್ನೂ ಘೋಷಿಸಿದೆ.
ಆನೆಗೊಂದಿ ಭಾಗ ಏಳು ಗುಡ್ಡಗಳ ಪ್ರದೇಶ ವಾಗಿದ್ದು, ಇಲ್ಲಿ 14 ಸಾವಿರ ಎಕರೆ ಕೃಷಿ ಭೂಮಿ ಯಿದೆ. ಇಲ್ಲಿಯ ಶೇ.20ರಷ್ಟು ನಿವಾಸಿಗಳು 1-5 ಎಕರೆ ಭೂಮಿ ಹೊಂದಿದ್ದಾರೆ. ಶೇ. 80 ಜನರು ಕೂಲಿ ಕೆಲಸ ಮತ್ತು ಪ್ರವಾಸೋದ್ಯಮವನ್ನೇ ಜೀವನ ಸಾಗಿಸುತ್ತಿದ್ದಾರೆ. ಈ ಮಧ್ಯೆ ಹಂಪಿ ಪ್ರಾ ಧಿಕಾರದ ಕೆಲ ನಿಯಮಗಳಿಂದ ಇಲ್ಲಿ ಸಣ್ಣಪುಟ್ಟ ಹೊಟೇಲ್ ಹಾಗೂ ವ್ಯವಹಾರ ನಿಂತಿವೆ. ಇಲ್ಲಿನ ಜನರ ಶ್ರೇಯೋಭಿವೃದ್ಧಿಗೆ ಸರಕಾರ ಕೆಲವು ನಿಯಮಗಳಿಗೆ ತಿದ್ದುಪಡಿಗೆ ಒತ್ತು ನೀಡಬೇಕಿದೆ. ಈ ಹಿಂದೆ ಸಿಎಂ ಅವರು ಹಂಪಿ ಅಭಿವೃದ್ಧಿ ಪ್ರಾಧಿಕಾರದಿಂದ ಆನೆಗೊಂದಿ ಭಾಗದ 15 ಗ್ರಾಮಗಳನ್ನು ಪ್ರತ್ಯೇಕ ಅಂಜನಾದ್ರಿ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಭರವಸೆಗೆ ಒತ್ತು ನೀಡುವ ಮೂಲಕ ಪ್ರವಾಸೋದ್ಯಮಕ್ಕೆ ವೇಗ ನೀಡಬೇಕಿದೆ. ಅಂಜನಾದ್ರಿ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ನಿಗಾ ವಹಿಸಬೇಕಿದೆ.
ಸರ್ಕಾರ ಆಗೊಮ್ಮೆ ಈಗೊಮ್ಮೆ ಆನೆಗೊಂದಿ ಉತ್ಸವ ಮಾಡುತ್ತಿದ್ದು ಶಾಸಕ ಪರಣ್ಣ ಮುನವಳ್ಳಿ ಅವರ ಅವ ಧಿಯಲ್ಲಿ ಎರಡು ಬಾರಿ ಆನೆಗೊಂದಿ ಉತ್ಸವ ಮಾಡಿದ್ದು ಬಿಟ್ಟರೆ ಉಳಿದ ಅವ ಧಿಯಲ್ಲಿ ಉತ್ಸವ ನಡೆಸಿಲ್ಲ. ಬಜೆಟ್‌ನಲ್ಲಿ ಹಣ ಮೀಸಲಿಟ್ಟು ಪ್ರತಿವರ್ಷ ಉತ್ಸವವನ್ನು ಸಂಭ್ರಮದಿಂದ ನಡೆಸಬೇಕಿದೆ. ವಿರೂಪಾಪುರಗಡ್ಡಿ ನಿರಾಶ್ರಿತರಿಗೆ ಪುನರ್ವಸತಿ, ಹಿಟ್ನಾಳದಿಂದ-ಗಂಗಾವತಿವರೆಗೆ ಚತುಷ್ಪಥ ರಸ್ತೆ ನಿರ್ಮಾಣದಲ್ಲಿ ಮನೆ ಗದ್ದೆ ಕಳೆದುಕೊಳ್ಳುವವರಿಗೆ ಪುನರ್ವಸತಿ ಕಲ್ಪಿಸುವುದು. ಇಲ್ಲಿಯ ಬೆಟ್ಟಗುಡ್ಡಗಳನ್ನು ನೈಸರ್ಗಿಕವಾಗಿ ಉಳಿಸಿಕೊಂಡು ಅಭಿವೃದ್ಧಿ ಮಾಡಬೇಕೆಂದು ಜನತೆ ಒತ್ತಾಯಿಸಿದ್ದಾರೆ.
ಬಿಎಸ್‌ವೈ ಸೇರಿ ಸಿಎಂ ಬೊಮ್ಮಾಯಿ ಅವರು ಅಂಜನಾದ್ರಿ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು, ಇಲ್ಲಿಯವರೆಗೂ 120 ಕೋಟಿ ಅನುದಾನ ಮಂಜೂರು ಮಾಡಿದ್ದಾರೆ. ಕಿಷ್ಕಿಂದೆಯಲ್ಲಿ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಅಭಿವೃದ್ಧಿ ಕೈಗೊಳ್ಳಲಾಗುವುದು. ಹೊಸ ಮಾಸ್ಟರ್ ಪ್ಲಾನ್‌ನಲ್ಲಿ ಸ್ಥಳೀಯರ ಪಾಲ್ಗೊಳ್ಳುವಿಕೆಯ ಕುರಿತಂತೆ ನಿಯಮಗಳನ್ನು ಅಳವಡಿಸಿದೆ. ರೊಪ್‌ವೇ, ವಿಜಯನಗರ ಕಾಲುವೆಗಳ ಶಾಶ್ವತ ದುರಸ್ತಿ, ಅಂಜನಾದ್ರಿಗೆ ಚತುಷ್ಪಥ ರಸ್ತೆ ಸೇರಿ 61 ಎಕರೆ ಸ್ವಾಧೀನಕ್ಕೆ ಕ್ರಮ ಕೈಗೊಂಡಿದೆ. ಈಗ ಸಿಎಂ ಸ್ಥಳೀಯರು, ರೈತರು ಹಾಗೂ ಜನಪ್ರತಿನಿಧಿಗಳ ಜತೆ ಚರ್ಚಿಸಿ ಪ್ರವಾಸೋದ್ಯಮದ ಅಭಿವೃದ್ಧಿಗೆ ಯೋಜನೆ ರೂಪಿಸಲಿದ್ದಾರೆ. –ಪರಣ್ಣ ಮುನವಳ್ಳಿ, ಗಂಗಾವತಿ ಶಾಸಕ
-ಕೆ.ನಿಂಗಜ್ಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.