ನಿರ್ವಹಣೆ ಇಲ್ಲದ ಪ್ರವಾಸಿ ಮಂದಿರ
Team Udayavani, Jul 27, 2019, 2:06 PM IST
ಕನಕಗಿರಿ: ಪಾಳು ಬಿದ್ದಿರುವ ಪ್ರವಾಸಿ ಮಂದಿರದ ಶೌಚಾಲಯ.
ಕನಕಗಿರಿ: ಪಟ್ಟಣದಲ್ಲಿ ಇರುವ ಪ್ರವಾಸಿ ಮಂದಿರ ನಿರ್ವಹಣೆ ಇಲ್ಲದೇ ಹಾಳಾಗುವ ಹಂತಕ್ಕೆ ತಲುಪಿದೆ.
ನಿಜಾಮರ ಕಾಲದಲ್ಲಿ ನಿರ್ಮಿಸಿರುವ ಪ್ರವಾಸಿ ಮಂದಿರದಲ್ಲಿ ಇರುವ ಶೌಚಾಲಯವನ್ನು ಅಧಿಕಾರಿಗಳು ದುರಸ್ತಿ ಮಾಡದೇ ಇರುವುದರಿಂದ ಪ್ರವಾಸಿ ಮಂದಿರಕ್ಕೆ ವಿಶ್ರಾಂತಿಗಾಗಿ ಬರುವ ಸರ್ಕಾರಿ ಅಧಿಕಾರಿಗಳಿಗೆ ಹಾಗೂ ಜನ ಪತ್ರಿನಿಧಿಗಳಿಗೆ ದುರ್ನಾತ ಬೀರುತ್ತಿದೆ. ಸುಮಾರು ನಾಲ್ಕು ತಿಂಗಳಿಂದ ಶೌಚಾಲಯನ್ನು ದುರಸ್ತಿಗೊಳಿಲ್ಲ. ಪ್ರವಾಸಿ ಮಂದಿರದ ನಿರ್ವಹಣೆ ಹೊತ್ತ ಲೋಕೋಪಯೋಗಿ ಇಲಾಖೆಯ ಅಭಿಯಂತರರಾದ ರಾಜಣ್ಣನವರು ಪ್ರವಾಸಿ ಮಂದಿರಕ್ಕೆ ಭೇಟಿ ನೀಡದೇ ಗಂಗಾವತಿಯಲ್ಲಿ ಕಾಲ ಹರಣ ಮಾಡುತ್ತಿದ್ದಾರೆ. ಪ್ರವಾಸಿ ಮಂದಿರದ ನಿರ್ವಹಣೆ ಹೆಸರಿನಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂ. ಹಣವನ್ನು ಎತ್ತುವಳಿ ಮಾಡುತ್ತಿದ್ದಾರೆ. ಇನ್ನು ಪ್ರವಾಸಿ ಮಂದಿರದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೂ ಕೂಡ ಸುಮಾರು 4 ತಿಂಗಳಿಂದ ವೇತನವನ್ನು ನೀಡಿಲ್ಲ. ಕೂಡಲೇ ಅಭಿಯಂತರರ ವಿರುದ್ಧ ಮೇಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್ ಫಿಕ್ಸ್
IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್ ಸೂರ್ಯವಂಶಿ
Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.