ಮಾರ್ಚ್ ಅಂತ್ಯಕ್ಕೆ ಗಂಗಾವತಿಗೆ ರೈಲು
Team Udayavani, Dec 7, 2018, 3:36 PM IST
ಗಂಗಾವತಿ: ಬಹುದಿನಗಳ ಕನಸಾಗಿರುವ ಗಂಗಾವತಿವರೆಗಿನ ರೈಲ್ವೆ ಮಾರ್ಗದಲ್ಲಿ 2019ರ ಮಾರ್ಚ್ ಅಂತ್ಯದ ವೇಳೆ ರೈಲು ಓಡಿಸಲು ರೈಲ್ವೆ ಇಲಾಖೆ ಸಕಲ ಸಿದ್ಧತೆ ನಡೆಸಿದೆ. ಗುರುವಾರ ನೈರುತ್ಯ ರೈಲ್ವೆ ವಲಯದ ಮಹಾಪ್ರಬಂಧಕ ಎ.ಕೆ. ಸಿಂಗ್ ಹಾಗೂ ಅಧಿಕಾರಿಗಳ ತಂಡ ಗಂಗಾವತಿ ರೈಲ್ವೆ ನಿಲ್ದಾಣ ಹಾಗೂ ವಸತಿ ಗೃಹಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಗಂಗಾವತಿಯಿಂದ ಚಿಕ್ಕಬೆಣಕಲ್ಲವರೆಗೆ ರೈಲ್ವೆ ಮಾರ್ಗದ ಮೇಲೆ ಪರೀಕ್ಷಾರ್ಥ ಗಾಡಿಯ ಮೇಲೆ ಅಧಿಕಾರಿಗಳು ತೆರಳಿ ಗುಣಮಟ್ಟ ಪರಿಶೀಲನೆ ನಡೆಸಿದರು. ಭೇಟಿಯ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದಲ್ಲಿ ಸಸಿಗಳನ್ನು ನೆಡಲಾಯಿತು. ಗುತ್ತಿಗೆದಾರರಿಂದ ಮಹಾಪ್ರಬಂಧಕ ಎ.ಕೆ. ಸಿಂಗ್ ಹಾಗೂ ಮುಖ್ಯ ಅಭಿಯಂತರ ರಾಮಗೋಪಾಲ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ರೈಲ್ವೆ ಸಲಹಾ ಮಂಡಳಿ ಮಾಜಿ ಸದಸ್ಯ ಹಾಗೂ ನಾಗರೀಕ ಹಿತರಕ್ಷಣಾ ವೇದಿಕೆ ಸಂಚಾಲಕ ವಿ.ಪಿ. ಗುಪ್ತಾ ಮಾತನಾಡಿ, ಈಗಾಗಲೇ ಗಂಗಾವತಿ ರೈಲ್ವೆ ನಿಲ್ದಾಣದವರೆಗೆ ರೈಲು ಸಂಚಾರ ಮಾಡಬೇಕಿತ್ತು. ರೈಲ್ವೆ ಹಳಿಯ ಕೊರತೆಯಿಂದ ಮಾರ್ಗದ ಕಾಮಗಾರಿ ವಿಳಂಬವಾಗಿದೆ. ದೇಶದಲ್ಲಿ ರೈಲ್ವೆ ಅಪಘಾತ ಹಾಗೂ ಮಾರ್ಗ ಪರಿವರ್ತನೆ ಹಿನ್ನೆಲೆಯಲ್ಲಿ ಹಳಿ ಕೊರತೆಯಾಗಿದೆ. ಈಗಾಗಲೇ ಗಂಗಾವತಿ ತನಕ ಹಳೆಯ ಹಳಿಗಳ ಜೋಡಣೆಯಾಗಿದ್ದು, ಫೆಬ್ರುವರಿ ವೇಳೆ ನೂತನ ಹಳಿ ಜೋಡಣೆ ಮಾಡಿ ಮಾರ್ಚ್ ಅಂತ್ಯದ ವೇಳೆಗೆ ಗಂಗಾವತಿಯಿಂದ ರೈಲು ಸಂಚಾರ ನಡೆಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಗಂಗಾವತಿಯಿಂದ ಗೋವಾ ಹಾಗೂ ಹೈದ್ರಾಬಾದ್ ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ರೈಲು ಓಡಿಸುವಂತೆ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಂಸದರಿಗೆ ಈಗಾಗಲೇ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.