ದ್ರಾಕ್ಷಿ ಬೆಳೆಗಾರರಿಗೆ ತರಬೇತಿ
Team Udayavani, Sep 2, 2020, 4:57 PM IST
ಕನಕಗಿರಿ: ತಾಲೂಕಿನ ಅಡವಿಬಾವಿ ಗ್ರಾಮದಲ್ಲಿ ತೋಟಗಾರಿಕೆ ದಿನಾಚರಣೆ ಹಾಗೂ ದ್ರಾಕ್ಷಿ ಬೆಳೆಗಾರರಿಗೆ ತರಬೇತಿ ಕಾರ್ಯಕ್ರಮ ನಡೆಯಿತು.
ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕ ಕೃಷ್ಣ ಉಕ್ಕುಂದ ಮಾತನಾಡಿ, ಈ ಭಾಗದಲ್ಲಿ ದ್ರಾಕ್ಷಿ ಬೆಳೆ 200 ಹೆಕ್ಟೇರ್ ಪ್ರದೇಶದ ಹೊಂದಿದ್ದು, ಪ್ರತಿಯೊಬ್ಬ ರೈತರು ತೋಟಗಾರಿಕೆ ಬೆಳೆಯುವ ಆಸಕ್ತಿಯನ್ನು ಹೊಂದಿದ್ದಾರೆ. ಋತುಮಾನಗಳಿಗೆ ಅನುಸಾರವಾಗಿ ಹಾಗೂ ಕಾಲಕ್ಕೆ ತಕ್ಕಂತೆ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳಬೇಕು. ಇಲಾಖೆಯಿಂದ ದೊರೆಯುವ ಸಹಾಯಧನ ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ಶಾಸಕ ಬಸವರಾಜ ದಢೇಸುಗೂರು ಅವರು ಇಚ್ಛಾಶಕ್ತಿಯಿಂದ ತಾಲೂಕಿನ ಸಿರವಾರ ಗ್ರಾಮದ ಬಳಿ ತೋಟಗಾರಿಕೆ ಟೆಕ್ನಾಲಜಿ ಪಾರ್ಕ್ ಆರಂಭಿಸಲು ಡಿಪಿಆರ್ ತಯಾರಿಸಿ ಅನುಮೋದನೆಗೆ ಕಳಿಸಲಾಗಿದೆ. ತೋಟಗಾರಿಕೆ ಟೆಕ್ನಾಲಜಿ ಪಾರ್ಕ್ ನಿರ್ಮಾಣದಿಂದ ಈ ಭಾಗದಲ್ಲಿ ರೈತರಿಗೆ ಅನುಕೂಲವಾಗಲಿದೆ ಎಂದರು.
ಮುದ್ದೇಬಿಹಾಳದ ತೋಟಗಾರಿಕೆ ವಿವಿ ಪ್ರಾಧ್ಯಾಪಕ ರಾಘವೇಂದ್ರಆಚಾರ್ಯ ಮಾತನಾಡಿ, ಬೆಳೆಬೆಳೆಸುವ ಮುನ್ನವೇ ಹವಾಮಾನ ವೈಫಲ್ಯ ಕಂಡುಕೊಂಡು ನಾಟಿ ಮಾಡಬೇಕು. ದ್ರಾಕ್ಷಿಯಲ್ಲಿ ಹೊಸ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಗಂಗಾವತಿ ತೋಟಗಾರಿಕೆ ಇಲಾಖೆ ಅಧಿಕಾರಿ ಶಿವಯೋಗಪ್ಪ ಮಾತನಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ವಾಮನಮೂರ್ತಿ, ಕೀಟ ತಜ್ಞ ಬದ್ರಿ ಪ್ರಸಾದ, ರೈತ ಮುಖಂಡರಾದ ಜಗದೀಶಪ್ಪ ಸೋಮನಾಳ, ಕುಮಾರೆಪ್ಪ ಮಾದಿನಾಳ, ವೀರೇಶ ವಿಟ್ಲಾಪೂರ, ಶರಣಬಸವ ಕನ್ನೇರಮಾಡ, ಮಲ್ಲಪ್ಪ ಆರೇರ್, ಮಹೇಶ ಹುಲಸನಟ್ಟಿ, ದ್ಯಾಮಣ್ಣ ನೆಲಜೇರಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.