ಬೆಟಗೇರಿ ಏತ ನೀರಾವರಿ ಮತ್ತೆ ಕಗ್ಗಂಟು

•ನೀರು ಕೊಡಿ ಎಂದ ಬೆಟಗೇರಿ ಜನ•ಡಂಗೂರ ಸಾರಿ, ಸಭೆ ನಡೆಸಿದ ಗ್ರಾಮಸ್ಥರು

Team Udayavani, Jun 3, 2019, 11:33 AM IST

kopala-tdy-2..

ಕೊಪ್ಪಳ: ಬೆಟಗೇರಿ ಗ್ರಾಮದಲ್ಲಿ ರವಿವಾರ ಗ್ರಾಮಸ್ಥರು ಸಭೆ ನಡೆಸಿರುವುದು.

ಕೊಪ್ಪಳ: ಬಹು ನಿರೀಕ್ಷಿತ ಅಳವಂಡಿ ಬೆಟಗೇರಿ ಏತ ನೀರಾವರಿ ಯೋಜನೆಗೆ ಇನ್ನೇನು ಇದೇ ತಿಂಗಳಲ್ಲಿ ಚಾಲನೆ ದೊರೆಯಲಿದೆ ಎನ್ನುವ ನಿರೀಕ್ಷೆಯ ಬೆನ್ನಲ್ಲೇ ಮತ್ತೆ ಕೆಲವೊಂದು ಆಪಾದನೆ ಕೇಳಿ ಬಂದಿವೆ. ಬೆಟಗೇರಿ ಜನತೆ ಮತ್ತೆ ಸಭೆ ನಡೆಸಿ ಗ್ರಾಮಕ್ಕೆ ನೀರು ಕೊಟ್ಟು ಮುಂದೆ ಹೋಗಿ ಎನ್ನುವ ನಿರ್ಧಾರ ಮಾಡಿದ್ದಾರೆ. ಹಾಗಾಗಿ ಮತ್ತೆ ಯೋಜನೆ ಕಗ್ಗಂಟ್ಟಾಗುವ ಲಕ್ಷಣ ಗೋಚರಿಸುತ್ತಿದೆ.

ತುಂಗಭದ್ರಾ ಹಿನ್ನೀರಿನ ಸಮೀಪದಲ್ಲಿನ ಅಳವಂಡಿ-ಬೆಟಗೇರಿ ಭಾಗಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಿ ಎನ್ನುವ ಕೂಗು ಹಲವು ವರ್ಷಗಳಿಂದ ಕೇಳಿ ಬಂದರೂ ನಾಲ್ಕೆ ೖದು ವರ್ಷಗಳಿಂದ ಇದಕ್ಕೆ ಶಕ್ತಿ ಬಂದಿದೆ. ಶಾಸಕ ರಾಘವೇಂದ್ರ ಹಿಟ್ನಾಳ ಹಲವು ಪ್ರಯತ್ನದ ಫಲವಾಗಿ ಯೋಜನೆಗೆ ರಾಜ್ಯ ಸರ್ಕಾರದಿಂದ ಅನುಮೋದನೆ ಪಡೆದು, 88 ಕೋಟಿ ರೂ. ಅನುದಾನವನ್ನೂ ಮಂಜೂರು ಮಾಡಿಸಿದ್ದಲ್ಲದೇ, ಈಗಾಗಲೆ ಶೇ. 90ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಇನ್ನೂ ಕೆಲವೇ ಕಾಮಗಾರಿ ನಡೆಯಬೇಕಿದ್ದು, ಶಾಸಕ ಹಿಟ್ನಾಳ ಸಹಿತ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಲ್ಲದೇ, ಜೂನ್‌ ತಿಂಗಳಲ್ಲಿಯೇ ಯೋಜನೆಗೆ ಚಾಲನೆ ನೀಡುವ ಕುರಿತು ಭರವಸೆ ನೀಡಿದ್ದಾರೆ.

ಗ್ರಾಮದಲ್ಲಿ ಡಂಗೂರ: ಈ ಬೆಳವಣಿಗೆ ಬೆನ್ನಲ್ಲೇ ಬೆಟಗೇರಿ ಗ್ರಾಮಸ್ಥರು ಶನಿವಾರ ರಾತ್ರಿ ಡಂಗೂರ ಸಾರಿಸಿ ರವಿವಾರ ಏತ ನೀರಾವರಿ ಯೋಜನೆಯ ಕುರಿತು ಚರ್ಚೆ ನಡೆಸಿದ್ದಾರೆ. ಈ ಯೋಜನೆಯಿಂದ ನಮಗೆ ಅನ್ಯಾಯವಾಗುತ್ತಿದೆ. ಶಾಸಕ ಹಿಟ್ನಾಳ ಅವರು ಗ್ರಾಮದ ಸೀಮಾಗೆ ನೀರು ಹರಿಸುವ ಭರವಸೆ ನೀಡಿದ್ದಾರೆ. ಆದರೆ ಪೈಪ್‌ಲೈನ್‌ ಅಳವಡಿಸಿದ್ದು ಬಿಟ್ಟರೆ ರೈತರ ಜಮೀನಿಗೆ ನೀರು ಹರಿಸುವ ಕುರಿತು ಪೂರ್ವ ಯೋಜನೆಯಿಲ್ಲ. ಕಾಟಾಚಾರಕ್ಕೆ ಎಂಬಂತೆ ಯೋಜನೆ ನಡೆಸಿದ್ದು, ಮುಂದಿನ ಹಳ್ಳಿಗಳಿಗೆ ಇದರ ಅನುಕೂಲವಾಗಲಿದೆಯೇ ವಿನಃ ನಮಗೆ ನೀರು ಹರಿಯಲ್ಲ ಎನ್ನುವ ಮಾತನ್ನಾಡಿದ್ದಾರೆ.

ಮೊದಲು ನಮಗೆ ನೀರು ಕೊಡಲಿ:

ಶಾಸಕ ಹಿಟ್ನಾಳ ಮಾತಿನಂತೆ ಮೊದಲು ಸೀಮಾ ವ್ಯಾಪ್ತಿಯಲ್ಲಿ ಪೈಪ್‌ಲೈನ್‌ ಅಳವಡಿಸಿದ್ದಾರೆ. ಆದರೆ ಸ್ಲೀವ್‌ ವಾಲ್ಗೆ ನೀರು ಹರಿಸಿಯೇ ಮುಂದಿನ ಗ್ರಾಮಕ್ಕೆ ನೀರು ಕೊಂಡೊಯ್ಯಬೇಕು. ಅಲ್ಲಿಯವರೆಗೂ ನಾವು ಯೋಜನೆಗೆ ಚಾಲನೆ ಮಾಡಲು ಬಿಡುವುದಿಲ್ಲ. ಈ ಯೋಜನೆಯಲ್ಲಿ ಬೆಟಗೇರಿಗೆ ಪ್ರತ್ಯೇಕ ಸ್ಲೀವ್‌ ವಾಲ್ನ ಡಿಪಿಆರ್‌ ಸೇರ್ಪಡೆಯಾಗಿಲ್ಲ. ಇದರ ಬಗ್ಗೆ ಗೊಂದಲವಿದೆ. ಡಿಪಿಆರ್‌ ಸಿದ್ಧಪಡಿಸಿ ಅನುಮೋದನೆ ಪಡೆದಿರುವ ಕುರಿತು ದಾಖಲೆ ತೋರಿಸಲಿ. ನಂತರವೇ ಈ ಯೋಜನೆಗೆ ಚಾಲನೆಗೆ ಅವಕಾಶ ನೀಡ‌ಲಿದ್ದೇವೆ. ಇಲ್ಲದಿದ್ದರೆ ಮತ್ತೆ ಹೋರಾಟ ಮಾಡಲಿದ್ದೇವೆ ಎನ್ನುವ ನಿರ್ಣಯಕ್ಕೆ ಜನತೆ ಬಂದಿದ್ದಾರೆ.

ಇಷ್ಟು ದಿನಗಳ ಕಾಲ ಸುಮಗವಾಗಿ ನಡೆದಿದ್ದ ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆ ಮತ್ತೆ ಕಗ್ಗಂಟಿನ ರೂಪ ಪಡೆದುಕೊಳ್ಳುತ್ತಿದೆ. ರವಿವಾರ ಗ್ರಾಮದಲ್ಲಿ ನಡೆದ ಸಭೆಯಲ್ಲಿ ನೀರಾವರಿ ಯೋಜನೆ ರಾಜಕೀಯ ರೂಪ ಪಡೆದುಕೊಂಡಿದ್ದು, ಕೈ-ಕಮಲ ಮುಖಂಡರ ನಡುವೆ ಮಾತಿನ ಚಕಮಕಿ ನಡೆದಿದೆ.

•ದತ್ತು ಕಮ್ಮಾರ

ಟಾಪ್ ನ್ಯೂಸ್

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.