ವಿವಾದಕ್ಕೆ ತಿರುಗಿದ ರಾಜಕಾಲುವೆ ಒತ್ತುವರಿ; ಕಾಂಪ್ಲೆಕ್ಸ್ ಬಿಲ್ಡಿಂಗ್ ತೆರವು ಕಾರ್ಯಾಚರಣೆ
Team Udayavani, Nov 25, 2021, 10:13 AM IST
ಗಂಗಾವತಿ: ಜುಲೈ ನಗರದ ರಾಜಕಾಲುವೆ ಒತ್ತುವರಿ ಮಾಡಿ ನಿರ್ಮಿಸಿರುವ ವಾಣಿಜ್ಯ ಕಾಂಪ್ಲೆಕ್ಸ್ ತೆರವು ಕಾರ್ಯಾಚರಣೆ ಇದೀಗ ವಿವಾದಕ್ಕೆ ತಿರುಗಿದೆ. ಇದರಿಂದ ಗುರುವಾರ ಬೆಳಿಗ್ಗೆ ತೆರವು ಕಾರ್ಯಕ್ಕೆ ತೆರಳಿದ್ದ ನಗರಸಭೆಯ ಸಿಬ್ಬಂದಿ ವರ್ಗವು ಬರಿಗೈಲಿ ವಾಪಸ್ಸಾದ ಘಟನೆ ಜರುಗಿದೆ.
ನಗರದ ಎಪಿಎಂಸಿ ಬನ್ನಿಗಿಡ ಕ್ಯಾಂಪ್ ಸೇರಿದಂತೆ ಮೇಲ್ಭಾಗದ ಮಳೆ ನೀರು ಮತ್ತು ಚರಂಡಿ ನೀರು ನಗರದ ಖಬರಸ್ಥಾನ ಮಧ್ಯಭಾಗದಲ್ಲಿರುವ ರಾಜಕಾಲುವೆಯ ಮಾರ್ಗವಾಗಿ ದುರುಗಮ್ಮನ ಹಳ್ಳ ಸೇರುತ್ತದೆ. ಜುಲೈ ನಗರಕ್ಕೆ ಹೋಗುವ ರಸ್ತೆ ಮಧ್ಯೆ ಇರುವ ಈ ರಾಜ ಕಾಲುವೆ ಮೇಲ್ಭಾಗದಲ್ಲಿ ಇತ್ತೀಚೆಗೆ ಶಾಪಿಂಗ್ ಕಾಂಪ್ಲೆಕ್ಸ್ ಒಂದನ್ನು ನಿರ್ಮಿಸಲಾಗಿದೆ. ಸ್ಥಳೀಯರ ಆಕ್ಷೇಪದ ಹಿನ್ನೆಲೆಯಲ್ಲಿ ಈ ಮಳಿಗೆ ತೆರವುಗೊಳಿಸಲು ಕಳೆದ ಮೂರು ತಿಂಗಳ ಹಿಂದೆ ನಗರಸಭೆಯವರು ಯತ್ನಿಸಿದ ಸಂದರ್ಭದಲ್ಲಿ ಕೆಲ ವ್ಯಕ್ತಿಗಳ ಒತ್ತಡದಿಂದಾಗಿ ತೆರವು ಕಾರ್ಯಾಚರಣೆಯನ್ನು ಅರ್ಧಕ್ಕೆ ನಿಲ್ಲಿಸಲಾಗಿತ್ತು. ಇತ್ತೀಚೆಗೆ ರಾಜ್ಯದಲ್ಲಿ ಸುರಿದ ಅಕಾಲಿಕ, ಸತತ ಮಳೆಯಿಂದ ಹೆಚ್ಚಿನ ಅನಾಹುತ ಸಂಭವಿಸಿದ್ದರಿಂದ ಸಿಎಂ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದಲ್ಲಿ ರಾಜಕಾಲುವೆಗಳ ಒತ್ತುವರಿ ಮಾಡಿರುವ ಕಟ್ಟಡಗಳನ್ನು ಕೂಡಲೇ ತೆರವು ಮಾಡುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದರು.
ಇದನ್ನೂ ಓದಿ:ಇನ್ನೆರಡು ಬ್ಯಾಂಕ್ ಖಾಸಗಿಗೆ? ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡನೆ
ಜುಲೈ ನಗರದ ರಾಜ ಕಾಲುವೆಯ ಮೇಲಿನ ಕಟ್ಟಡವನ್ನು ತೆರವು ಮಾಡಲು ಗುರುವಾರ ನಗರಸಭೆಯ ಪೌರಾಯುಕ್ತರ ನೇತೃತ್ವದಲ್ಲಿ ಸಿಬ್ಬಂದಿ ವರ್ಗ ತೆರಳಿದ್ದ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷರು ಸೇರಿದಂತೆ ಕೆಲವು ನಗರಸಭೆ ಸದಸ್ಯರು ಹಾಗೂ ಒಂದು ಸಮುದಾಯದ ಜನಾಂಗದವರು ತೆರವು ಕಾರ್ಯಾಚರಣೆ ಬಗ್ಗೆ ಆಕ್ಷೇಪವೆತ್ತಿದ್ದರು. ಒಂದು ಸಮುದಾಯವನ್ನು ಗುರಿಯಾಗಿರಿಸಿಕೊಂಡು ನಗರ ಸಭೆಯವರು ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ ಈ ವಾಣಿಜ್ಯ ಮಳಿಗೆ ಖಬರಸ್ಥಾನದ ಆಸ್ತಿಯಲ್ಲಿ ಇರುವುದರಿಂದ ವಾಣಿಜ್ಯ ಮಳಿಗೆಯನ್ನು ನಿರ್ಮಿಸಲಾಗಿದೆ. ಆದ್ದರಿಂದ ಇದನ್ನು ತೆರವುಗೊಳಿಸುವಂತೆ ಅಧಿಕಾರಿಗಳ ಜತೆ ವಾಗ್ವಾದಕ್ಕಿಳಿದರು.
ಎರಡು ದಿನ ಕಾಲಾವಕಾಶ: ರಾಜಕಾಲುವೆ ಮೇಲೆ ನಿರ್ಮಿಸಿದ ವಾಣಿಜ್ಯ ಮಳಿಗೆಯನ್ನು ತೆರವು ಕಾರ್ಯಾಚರಣೆ ಈ ಹಿಂದೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಕೆಲವರ ಮನವಿಯ ಮೇರೆಗೆ ಕಾರ್ಯಾಚರಣೆ ಇಳಿಸಲಾಗಿತ್ತು. ಇದೀಗ ಮುಖ್ಯಮಂತ್ರಿಗಳ ಮೌಖಿಕ ಆದೇಶದ ಹಿನ್ನೆಲೆಯಲ್ಲಿ ಜುಲೈ ನಗರದ ರಾಜಕಾಲುವೆ ನಿರ್ಮಿಸಿದ ವಾಣಿಜ್ಯ ಮಳಿಗೆಯನ್ನು ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ. ಖಬರಸ್ಥಾನ ಸಮಿತಿಯವರು ಮತ್ತು ಕೆಲ ಮುಖಂಡರ ಮನವಿ ಮೇರೆಗೆ ಈ ಕಾರ್ಯಾಚರಣೆಯನ್ನು ಎರಡು ದಿನದ ಮಟ್ಟಿಗೆ ನಿಲ್ಲಿಸಲಾಗಿದೆ. ರಸ್ತೆ ನದಿ ಹಳ್ಳ ಕೊಳ್ಳ ರಾಜಕಾಲುವೆ ನೈಸರ್ಗಿಕವಾಗಿದ್ದು, ಇವುಗಳ ಮೇಲೆ ಯಾವುದೇ ಕಟ್ಟಡಗಳ ನಿರ್ಮಿಸಬಾರದು. ಇದರಿಂದ ಪ್ರಕೃತಿ ವಿಕೋಪಗಳು ಸಂಭವಿಸುವ ಸಾಧ್ಯತೆಯಿದೆ. ಗಂಗಾವತಿ ನಗರದಲ್ಲಿ ಚರಂಡಿ ರಾಜಕಾಲುವೆ ಮತ್ತು ಹಳ್ಳದ ಒತ್ತುವರಿ ಬಗ್ಗೆ ದೂರುಗಳಿದ್ದು ಶೀಘ್ರದಲ್ಲೇ ಎಲ್ಲಾ ಕಡೆ ಕಾರ್ಯಾಚರಣೆ ಮಾಡಿ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ.
ಜುಲೈ ನಗರ ರಾಜಕಾಲುವೆ ಒತ್ತುವರಿ ಮಳಿಗೆ ತೆರವು ಕಾರ್ಯ ಎರಡು ದಿನದ ಮಟ್ಟಿಗೆ ನಿಲ್ಲಿಸಲಾಗಿದೆ. ನಂತರ ತೆರವುಗೊಳಿಸಲಾಗುತ್ತದೆ ಎಂದು ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.