ತುಂಗಭದ್ರಾ ಡ್ಯಾಂನಿಂದ 35 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
Team Udayavani, Jul 12, 2022, 7:59 PM IST
ಕೊಪ್ಪಳ: ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಅತಿಯಾದ ಮಳೆಯಿಂದಾಗಿ ಬಯಲು ಸೀಮೆಯ ತುಂಗಭದ್ರಾ ಜಲಾಶಯವು ಭರ್ತಿಯಾಗಿದ್ದು, ಮಂಗಳವಾರ ಸಂಜೆ 6 ಗಂಟೆ ವೇಳೆಗೆ ಡ್ಯಾಂನಿಂದ ನದಿಪಾತ್ರಗಳಿಗೆ 35984 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಯಿತು.
ಕಳೆದ ಕೆಲವು ದಿನಗಳಿಂದ ಶಿವಮೊಗ್ಗ ಸೇರಿದಂತೆ ಕರಾವಳಿ ಭಾಗದಲ್ಲಿ ಅತ್ಯಧಿಕ ಮಳೆಯು ಸುರಿಯುತ್ತಿದ್ದು ಇದರಿಂದ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಬಹುಪಾಲು ಡ್ಯಾಂಗಳು ಭರ್ತಿಯಾಗಿ ಹರಿಯುತ್ತಿವೆ. ಈಗ ತುಂಗಭದ್ರಾ ಜಲಾಶಯವು ಭರ್ತಿಯಾಗಿದೆ. ತುಂಗಭದ್ರಾ ಡ್ಯಾಂನಿನ ನೀರು ಸಂಗ್ರಹಣ ಸಾಮರ್ಥ್ಯ 133 ಟಿಎಂಸಿಯಷ್ಟಿದ್ದು, ಡ್ಯಾಂ ಒಡಲಾಳದಲ್ಲಿ 33 ಟಿಎಂಸಿಯಷ್ಟು ಹೂಳು ತುಂಬಿಕೊಂಡ ಹಿನ್ನೆಲೆಯಲ್ಲಿ ಪ್ರಸ್ತುತ ಡ್ಯಾಂ ನೀರು ಸಂಗ್ರಹ ಸಾಮರ್ಥ್ಯ 100 ಟಿಎಂಸಿಯಷ್ಟಿದೆ. ಕಳೆದ ಕೆಲವು ದಿನಗಳಿಂದ ಡ್ಯಾಂನ ಒಳ ಹರಿವು 95 ಸಾವಿರ ಕ್ಯೂಸೆಕ್‌ಗೂ ಹೆಚ್ಚಿದೆ. ನೀರಿನ ಒಳ ಹರಿವು ನೋಡಿಕೊಂಡು ನೀರಾವರಿ ಇಲಾಖೆಯ ಅಧಿಕಾರಿ ವರ್ಗವು ಡ್ಯಾಂಗೆ 35 ಸಾವಿರ ಕ್ಯೂಸೆಕ್‌ನಷ್ಟು ನೀರನ್ನು ನದಿಪಾತ್ರಗಳಿಗೆ ಹರಿ ಬಿಡಲಾಗಿದೆ.
ಗೇಟ್ ಮೂಲಕ ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ ಸುತ್ತಲಿನ ಸಹಸ್ರಾರು ಜನರು ತುಂಗಭದ್ರಾ ಸೊಬಗನ್ನು ನೋಡಲು ಆಗಮಿಸುತ್ತಿದ್ದಾರೆ. ಇದಲ್ಲದೇ ನದಿಪಾತ್ರಕ್ಕೆ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿಬಿಡುವ ಸಾಧ್ಯತೆ ಇದೆ ಎನ್ನುವ ಮಾಹಿತಿಯು ತಿಳಿದು ಬಂದಿದೆ. ಹಾಗಾಗಿ ನದಿ ಪಾತ್ರದ ಗ್ರಾಮಗಳಿಗೆ ಮುಂಚಿತವೇ ಡಂಗೂರ ಸಾರಿಸಿ ನದಿ ಪಾತ್ರದ ಸ್ಥಳಕ್ಕೆ ಜನ ಜಾನುವಾರು ತೆರಳದಂತೆ ಕಟ್ಟೆಚ್ಚರ ನೀಡಲಾಗಿದೆ. ನಿಷೇಧಾಜ್ಞೆಯನ್ನೂ ಹೊರಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.