D. K. Shivakumar: ನೀರು ಕಡಿಮೆಯಾದಾಗ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್‌ಗೇಟ್
Team Udayavani, Sep 22, 2024, 11:39 PM IST
ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿ ನೀರು ಕಡಿಮೆಯಾದ ಬಳಿಕ ಹೊಸ ಕ್ರೆಸ್ಟ್‌ಗೇಟ್‌ಗಳ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ತುಂಗಭದ್ರಾ ಜಲಾಶಯ ಬಾಗಿನ ಸಮರ್ಪಣೆ ಅನಂತರ ಮುನಿರಾಬಾದ್‌ನಲ್ಲಿ ರವಿವಾರ ನಡೆದ ಸಮಾರಂಭದಲ್ಲಿ ಅವರು ಮಾತನಾಡಿ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತುಂಗಭದ್ರಾ ಬೋರ್ಡ್ ಜತೆ ಚರ್ಚೆ ನಡೆಸಿ ಒಂದು ವರ್ಷದೊಳಗೆ ನೂತನ ಗೇಟ್ ಅಳವಡಿಕೆ ಮಾಡಲಾಗುವುದು. ಆ ಮೂಲಕ ರೈತರ ರಕ್ಷಣೆ ಮಾಡಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗುವುದು. ಕ್ರೆಸ್ಟ್‌ಗೇಟ್ ಕಿತ್ತು ಹೋಗಿದ್ದ ವೇಳೆ ನಮ್ಮ ಸರಕಾರ ರೈತರ ಪರವಾಗಿ ನಿಂತು ತಜ್ಞರ ಶ್ರಮದಿಂದ ಮತ್ತೆ ಡ್ಯಾಂನಲ್ಲಿ ನೀರುಳಿಸುವ ಕೆಲಸ ಮಾಡಿದೆ. ಈ ಅವಕಾಶ ನನಗೆ ಹಾಗೂ ಸಿದ್ದರಾಮಯ್ಯ ಅವರಿಗೆ ಸಿಕ್ಕಿರುವುದು ನಮ್ಮ ಭಾಗ್ಯ ಎಂದರು.
ಕನ್ನಯ್ಯರ ಕಾರ್ಯ ಶ್ಲಾಘನೆ
ಕಷ್ಟಕಾಲದಲ್ಲಿ ಕನ್ನಯ್ಯ ನಾಯ್ಡು ಅವರು ನಮ್ಮ ಜೊತೆ ನಿಂತು, 20 ಟಿಎಂಸಿಯಷ್ಟು ನೀರು ಉಳಿಸಿದರು. 9 ಲಕ್ಷ ಎಕರೆಗೆ ಬೆಳೆ ಹಾಗೂ ನಮ್ಮ ರೈತರನ್ನು ಉಳಿಸಿದರು. ಇವರೊಟ್ಟಿಗೆ ನಾರಾಯಣ, ಹಿಂದೂಸ್ಥಾನ್ ಎಂಜಿನಿಯರಿಂಗ್, ಜಿಂದಾಲ್ ಸಹಕಾರ ದೊರೆಯಿತು. ಗೇಟ್ ಕಿತ್ತ ಒಂದೇ ವಾರದಲ್ಲಿ ದುರಸ್ತಿ ಮಾಡಿದ್ದು ನಮಗೆಲ್ಲ ಸಂತಸ ತರಿಸಿದೆ ಎಂದರು.
ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿಕೊಂಡ ಕಾರಣ ಸುಮಾರು 33 ಟಿಎಂಸಿಯಷ್ಟು ನಮ್ಮ ಪಾಲಿನ ನೀರು ಸಿಗುತ್ತಿಲ್ಲ. ಇದಕ್ಕೆಲ್ಲ ಪರಿಹಾರ ನವಲಿ ಸಮತೋಲಿತ ಅಣೆಕಟ್ಟು. ಇದರ ನಿರ್ಮಾಣಕ್ಕೆ ಈಗಾಗಲೇ ಡಿಪಿಆರ್ ತಯಾರಿಸಲಾಗಿದೆ. 15 ಸಾವಿರ ಎಕರೆ ಭೂಮಿ, 9 ಸಾವಿರ ಕೋಟಿ ರೂ. ಅಗತ್ಯವಿದೆ. ಈ ಕುರಿತು ಆಂಧ್ರ-ತೆಲಂಗಾಣ ಸರಕಾರಗಳ ಸಿಎಂ ಹಾಗೂ ಆ ರಾಜ್ಯದ ನೀರಾವರಿ ಸಚಿವರನ್ನು ಶೀಘ್ರದಲ್ಲೇ ಭೇಟಿ ಮಾಡಿ ಚರ್ಚೆ ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Koppala: ಮರಕುಂಬಿ ಅಸ್ಪೃಶ್ಯತೆ ಪ್ರಕರಣ… 99 ಜನರಿಗೆ ಜಾಮೀನು ನೀಡಿದ ಹೈಕೋರ್ಟ್
ಕೊಪ್ಪಳ:ಈ ರಸ್ತೆಗಳಲ್ಲಿ ನಿತ್ಯವೂ ನರಕ ದರ್ಶನ-ಜೀವಭಯದಲ್ಲೇ ಸಂಚಾರ
ಕುಷ್ಟಗಿ: ಬಿಳಿ ಜೋಳಕ್ಕೂ ಲಗ್ಗೆಯಿಟ್ಟ ಲದ್ದಿ ಹುಳು
Gangavathi: ಆನೆಗೊಂದಿ ರಾಜವಂಶಸ್ಥ ಎಸ್.ಆರ್.ಕೆ. ರಾಜಬಹಾದ್ದೂರ್ ನಿಧನ
MUST WATCH
ಹೊಸ ಸೇರ್ಪಡೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.