ಎಸ್‌ಸಿಪಿ-ಟಿಎಸ್‌ಪಿ ಅನುದಾನ ಸಮರ್ಪಕ ಬಳಸಿ
Team Udayavani, Aug 28, 2020, 6:44 PM IST
ಕೊಪ್ಪಳ: ವಿವಿಧ ಇಲಾಖೆಗಳಿಗೆ ರಾಜ್ಯ ಸರ್ಕಾರದಿಂದ ಬಿಡುಗಡೆಯಾಗುವ ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ನಿಗದಿತ ಅವಧಿಯಲ್ಲಿ ಯೋಜನೆಗಳನ್ನು ಪೂರ್ಣಗೊಳಿಸಿ ಎಂದು ಜಿಲ್ಲಾಧಿಕಾರಿಗೆ ವಿಕಾಸ್ ಕಿಶೋರ್ ಸುರಳ್ಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಪಂ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಪರಿಶಿಷ್ಟ ಜಾತಿ, ವರ್ಗದ ಅಭಿವೃದ್ಧಿ ಕಾರ್ಯಕ್ರಮಗಳ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.ಇಲಾಖೆಗಳು ಸೂಕ್ತ ರೀತಿಯಲ್ಲಿ ಯೋಜನೆ ರೂಪಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು. ಬಿಡುಗಡೆಯಾದ ಅನುದಾನವನ್ನು ಫಲಾನುಭವಿಗಳಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ, ಅವಶ್ಯ ಕ್ರಮಗಳನ್ನು ಕೈಗೊಳ್ಳಬೇಕು. ಇದುವರೆಗೆ ಬಾಕಿ ಉಳಿದ ಹಾಗೂ ಬಳಕೆ ಆಗದ ಅನುದಾನದ ಕುರಿತು ಸೂಕ್ತ ಕಾರಣಗಳೊಂದಿಗೆ ಅಧಿಕಾರಿಗಳು ಮಾಹಿತಿ ನೀಡಬೇಕು. ಅನುದಾನ ಬಳಕೆಯಾದ ವರ್ಷ, ತಿಂಗಳು, ದಿನಾಂಕ ಸಹಿತ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ವರದಿ ನೀಡಬೇಕು. ಅಧಿಕಾರಿಗಳು ಸಭೆಗೆ ಬರುವಾಗ ತಮ್ಮ ಇಲಾಖೆಗಳ ಸಂಪೂರ್ಣ ಮಾಹಿತಿಯೊಂದಿಗೆ ಬರಬೇಕು ಎಂದರು.
ಸಕಾಲದಲ್ಲಿ ಅರ್ಜಿ ಕರೆದು ಪಾರದರ್ಶಕತೆಯಿಂದ ಫಲಾನುಭವಿ ಆಯ್ಕೆ ಮಾಡಬೇಕು. ವಿವಿಧ ಯೋಜನೆಯಲ್ಲಿ ನೀಡುವ ಪರಿಕರಗಳಾಗಲಿ, ಇನ್ನಿತರ ಯಾವುದೇ ಯೋಜನೆಗಳ ಸೌಲಭ್ಯಗಳಾಗಲಿ ಗುಣಮಟ್ಟದಿಂದ ಕೂಡಿರಬೇಕು. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಕಾನೂನಿನ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.
ಜಿಲ್ಲೆಯ ಆಸ್ಪತ್ರೆಗಳಲ್ಲಿ ಅವಶ್ಯವಿರುವ ಆಕ್ಸಿಜನ್ ವ್ಯವಸ್ಥೆಯನ್ನು ಪೂರ್ಣಗೊಳಿಸಲು ಅಗತ್ಯ ಪ್ರಮಾಣದ ಆಕ್ಸಿಜನ್ ಸರಬರಾಜಿನ ಅವಶ್ಯಕತೆಯಿದೆ. ನಮ್ಮ ಜಿಲ್ಲೆಯಲ್ಲಿಯೇ ಆಕ್ಸಿಜನ್ ಪ್ಲಾಂಟ್ ಇದ್ದು, ಅಲ್ಲಿಂದ ಬೇರೆ ಜಿಲ್ಲೆಗಳಿಗೆ ಆಕ್ಸಿಜನ್ ಪೂರೈಕೆಯಾಗುತ್ತಿದೆ. ನಮ್ಮ ಜಿಲ್ಲೆಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸೌಲಭ್ಯದ ಕೊರತೆಯಾಗದಂತೆ ಸಂಬಂಧಿ ಸಿದ ಇಲಾಖೆ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಂಡು ಜಿಲ್ಲೆಯ ಎಲ್ಲ ಆಸ್ಪತ್ರೆಗಳಿಗೆ ಆಕ್ಸಿಜನ್ ಸಿಲಿಂಡರ್‌ಗಳನ್ನು ಒದಗಿಸಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಪಂ ಸಿಇಒ ರಘುನಂದನ್ ಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಲಕ್ಷ ¾ಣ ಬಬಲಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.