ಕುಷ್ಟಗಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಖಂಡಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ
Team Udayavani, Dec 20, 2021, 2:31 PM IST
ಕುಷ್ಟಗಿ: ಬೆಳಗಾವಿಯಲ್ಲಿ ದೇಶಭಕ್ತ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಧ್ವಂಸ ಖಂಡಿಸಿ ಹಾಲುಮತ ಸಮಾಜ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಕುಷ್ಟಗಿಯ ಕನಕದಾಸ ವೃತ್ತದ ನಾಮಫಲಕಕ್ಕೆ ಮಾಲರ್ಪಣೆ ಮಾಡುವ ಮೂಲಕ ಪ್ರತಿಭಟನೆ ಮೆರವಣಿಗೆಗೆ ಚಾಲನೆ ನೀಡಲಾಯಿತು. ನಂತರ ಮಾರುತಿ ವೃತ್ತ, ಬಸವೇಶ್ವರ ವೃತ್ತದಲ್ಲಿ ಜಮಾಯಿಸಿ ದೇಶಭಕ್ತ ಸಂಗೊಳ್ಳಿ ರಾಯಣ್ಣಪ್ರತಿಮೆ ಭಗ್ನಗೊಳಿಸಿ ಎಂ.ಇ.ಎಸ್. ಸಂಘಟನೆ ಕೃತ್ಯಕ್ಕೆ ಆಕ್ರೋಶ ವ್ಯಕ್ತವಾಯಿತು.
ಈ ಕಾರ್ಯದಲ್ಲಿ ಬರೀ ಬಂಧಿಸಿದರೆ ಸಾಲದು, ಗಡಿಪಾರು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು. ದೇಶಭಕ್ತರ ಪ್ರತಿಮೆಗಳನ್ನು ಭಗ್ನಗೊಳಿಸಿ ಕನ್ನಡಿಗರಲ್ಲಿ ಒಡಕು ಕುತಂತ್ರಿ ಬುದ್ದಿಯ ಎಂ.ಇ.ಎಸ್ ಹಾಗೂ ಶಿವಸೇನೆ ಆಟಾಟೋಪ ಮಟ್ಟಹಾಕಬೇಕು. ಸಂಗೊಳ್ಳಿ ರಾಯಣ್ಣ ಕೇವಲ ಹಾಲುಮತಕ್ಕೆ ಸೀಮಿತ ಅಲ್ಲ ಇಡೀ ಸರ್ವ ಜನಾಂಗದ ಆಸ್ತಿಯಾಗಿದ್ದಾರೆ. ಬೆಳಗಾವಿಯಲ್ಲಿ ಪದೇ ಪದೇ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನ ಮಾಡುತ್ತಿರುವುದು ಹಾಲುಮತ ಸಮಾಜದ ಮನಸ್ಸುಗಳಿಗೆ ನೋವಾಗಿದೆ. ಈ ಪ್ರಕರಣದಲ್ಲಿ ಯಾರೇ ಆಗಿರಲಿ ಶಿಕ್ಷೆ ವಿಧಿಸಿ ಗಡಿಪಾರು ಮಾಡಬೇಕು ಎಂದು ಹಾಲುಮತ ಸಮಾಜದ ತಾಲೂಕಾ ಅದ್ಯಕ್ಷ ಮಲ್ಲಣ್ಣ ಪಲ್ಲೇದ್ ಒತ್ತಾಯಿಸಿದರು.
ಹಾಲುಮತ ಸಮಾಜದ ಗುರುಗಳಾದ ಶಿವಾನಂದಯ್ಯ ಗುರುವಿನ್, ಯುವ ಘಟಕದ ಅಧ್ಯಕ್ಷ ಕಲ್ಲೇಶ ತಾಳದ,ಎಚ್.ಬಿ.ಕುರಿ, ಮಂಜುನಾಥ ನಾಲಗಾರ, ಲಕ್ಷ್ಮಿ ಪಾಟೀಲ,ಸಂಗಪ್ಪ ಪಂಚಮ್, ಕರವೇ ಸಂಘಟನೆಯ ಅಜ್ಜಪ್ಪ ಕರಡಕಲ್, ಚಂದ್ರು ವಡಿಗೇರಿ ಮತ್ತೀತರರು ನೇತೃತ್ವವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.