Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Team Udayavani, Nov 22, 2024, 1:26 PM IST
ಗದಗ / ಕೊಪ್ಪಳ: ವಕ್ಫ್ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಕೊಪ್ಪಳ ಮತ್ತು ಗದಗ ಜಿಲ್ಲೆಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ.
ಗದಗ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ರೈತರ ಭೂಮಿ, ಮಠಮಾನ್ಯಗಳ ಹಾಗೂ ಜನಸಾಮಾನ್ಯರ ಆಸ್ತಿಗಳನ್ನು ಕಬಳಿಸುತ್ತಿರುವ ಕಾಂಗ್ರೆಸ್ ಪ್ರಾಯೋಜಿತ ವಕ್ಫ್ ಅಕ್ರಮದ ವಿರುದ್ಧ ನಮ್ಮ ಹಕ್ಕು ನಮ್ಮ ಭೂಮಿ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಲಾಗುತ್ತಿದೆ.
ಕಾಂಗ್ರೆಸ್ ರೈತರ ಆಸ್ತಿ ಕಬಳಿಸಿದ ವಕ್ಫ್ ನಡೆಗೆ ಹಾಗೂ ರೈತ ವಿರೋಧಿ ನೀತಿ ಅನುಸರಿಸಿದೆ. ರೈತರ ಪಹಣಿಯಲ್ಲಿ ಆಸ್ತಿ ನಮೂದು ಮಾಡಿದ ವಕ್ಫ್ ರದ್ದು ಪಡಿಸಿ. ರಾಜ್ಯ ಸರ್ಕಾರ ಭ್ರಷ್ಟ ಸರ್ಕಾರ, ಎಸ್ಟಿ ನಿಗಮದ ಹಣ ನುಂಗಿದೆ. ಕೂಡಲೇ ವಕ್ಫ್ ರದ್ದು ಮಾಡಲು ಆಗ್ರಹಿಸಿದರು.
ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರಡಗಿ, ಮುಖಂಡರಾದ ಎಂ.ಎಸ್. ಕರಿಗೌಡ್ರ, ಸಿದ್ದಣ್ಣ ಪಲ್ಲೇದ ಸೇರಿ ಹಲವರು ಭಾಗಿಯಾಗಿದ್ದರು.
ಕೊಪ್ಪಳದಲ್ಲಿ ಪ್ರತಿಭಟನೆ
ಕೊಪ್ಪಳ ಡಿಸಿ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಿದೆ. ನಮ್ಮ ಹಕ್ಕು ನಮ್ಮ ಭೂಮಿ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಲಾಗುತ್ತಿದೆ. ರೈತರ ಆಸ್ತಿ ಕಬಳಿಸಿದ ವಕ್ಫ್, ರೈತ ವಿರೋಧಿ ನೀತಿ ಅನುಸರಿಸಿದ ಕಾಂಗ್ರೆಸ್ ಎಂದು ಘೋಷಣೆ ಕೂಗಿ, ರೈತರ ಪಹಣಿಯಲ್ಲಿ ಆಸ್ತಿ ನಮೂದು ಮಾಡಿದ ವಕ್ಫ್ ರದ್ದು ಪಡಿಸಿ. ರಾಜ್ಯ ಸರ್ಕಾರ ಭ್ರಷ್ಟ ಸರ್ಕಾರ. ಎಸ್ ಟಿ ನಿಗಮದ ಹಣ ನುಂಗಿದೆ. ಕೂಡಲೇ ವಕ್ಫ್ ರದ್ದು ಮಾಡಿ, ರಾಜ್ಯದ ರೈತರ ಹಿತ ಕಾಯಲಿ ಎಂದು ಬಿಜೆಪಿ ನಾಯಕರು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ
Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ
ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.