ಇಂಧನವಿಲ್ಲದೇ ತ್ಯಾಜ್ಯ ಸಂಗ್ರಹ ಸ್ಥಗಿತ
Team Udayavani, May 17, 2020, 4:54 PM IST
ಗಂಗಾವತಿ: ನಗರದ ಘನತ್ಯಾಜ್ಯ ಸಾಗಿಸುವ ವಾಹನಗಳಿಗೆ ಡಿಸೇಲ್ ಹಾಕಿಸಲು ಹಣದ ಕೊರತೆಯಿಂದಾಗಿ ಎರಡು ದಿನಗಳಿಂದ ನಗರದ ಮನೆ ಮನೆಗೆ ತೆರಳಿ ಕಸ ಸಂಗ್ರಹಸ್ಥಗಿತಗೊಳಿಸಲಾಗಿದೆ.
ಜಿಲ್ಲಾ ಧಿಕಾರಿಗಳು ಸೂಕ್ತ ಕ್ರಮ ಜರುಗಿಸುವಂತೆ ಎಂದು ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘ ರಾಜ್ಯಾಧ್ಯಕ್ಷ ಜೆ. ಭಾರದ್ವಾಜ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ನಗರಸಭೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ತ್ಯಾಜ್ಯ ಸಾಗಿಸುವ ವಾಹನಗಳಿಗೆ ಡಿಸೇಲ್ ಕೊಡದೇ ಇರುವುದರಿಂದ ಕಸ ತುಂಬಿದ ಗಾಡಿಗಳು ಗಂಗಾವತಿಯ ಗುಂಡಮ್ಮಕ್ಯಾಂಪಿನ ಸಿಟಿ ಮಾರ್ಕೆಟ್‌ನಲ್ಲಿ ನಿಂತಿವೆ. ಈ ಬಗ್ಗೆ ನಗರಸಭೆಯ ಆಡಳಿತ ವರ್ಗ ಕಾಳಜಿವಹಿಸುತ್ತಿಲ್ಲ. ಟ್ರಾÂಕ್ಟರ್ ಗಳು ಕಳೆದ 5-6 ತಿಂಗಳಿನಿಂದ ರಿಪೇರಿ ಬಂದು ಹಾಗೆಯೇ ನಿಂತಿವೆ. ಕಸ ಸಾಗಿಸುವ ಕಂಪ್ಯಾಕ್ಟರ್‌ಗಳು ಮೂರು ವಾಹನಗಳಿದ್ದು, ಒಂದು ವಾಹನ ಎರಡು ವರ್ಷದ ಕೆಳಗೆ ದುರಸ್ತಿಗೆ ಬಂದು ನಿಂತಿದೆ.
ಇನ್ನೊಂದು ಕಂಪ್ಯಾಕ್ಟರ್ ಕಳೆದ ಎರಡು ತಿಂಗಳಿನಿಂದ ದುರಸ್ತಿಯಾಗದೆ ನಿಂತಿದೆ. ಒಂದು ಕಂಪ್ಯಾಕ್ಟರ್ ಚಾಲನೆಯಲ್ಲಿದ್ದು, ಅದಕ್ಕೂ ಡಿಸೇಲ್ ವ್ಯವಸ್ಥೆ ಇಲ್ಲ. ಇದರಿಂದಾಗಿ ಟಾಟಾ ಏಸ್ ಗಾಡಿಗಳು ಕಸ ತುಂಬಿಕೊಂಡು ಮಾರ್ಕೇಟ್‌ನಲ್ಲಿ ನಿಂತಿವೆ. ಇಷ್ಟೆಲ್ಲಾ ವಿಷಯಗಳು ಅಧಿಕಾರಿಗಳ ಗಮನಕ್ಕಿದ್ದರೂ ಯಾವುದೇ ಪರಿಹಾರ ವ್ಯವಸ್ಥೆ ಮಾಡುತ್ತಿಲ್ಲ. ಕೂಡಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡು ತ್ಯಾಜ್ಯ ಸಾಗಿಸುವ ವಾಹನಗಳ ದುರಸ್ತಿಯ ಬಗ್ಗೆ ಹಾಗೂ ಅವುಗಳಿಗೆ ಇಂಧನ ಒದಗಿಸುವವ್ಯವಸ್ಥೆ ಮಾಡಬೇಕೆಂದು ಕರ್ನಾಟಕ ಪ್ರಗತಿಪರ ಪೌರಕಾರ್ಮಿಕರ ಸಂಘ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.