ರಾತ್ರೋರಾತ್ರಿ ಆಂಧ್ರಕ್ಕೆ ನೀರು
Team Udayavani, Mar 27, 2021, 8:30 PM IST
ಗಂಗಾವತಿ: ತುಂಗಭದ್ರಾ ನದಿಯ ಮೂಲಕ ಆಂಧ್ರಪ್ರದೇಶಕ್ಕೆ ನೀರು ಹರಿಸದಂತೆ ಸರಕಾರದ ಸೂಚನೆಯನ್ನು ಧಿಕ್ಕರಿಸಿ ನದಿಯ ಮೂಲಕ ಪುನಃ ಆಂಧ್ರಪ್ರದೇಶಕ್ಕೆ ತುಂಗಭದ್ರಾ ಯೋಜನೆಯ ಅ ಧಿಕಾರಿಗಳು ನೀರು ಹರಿಸುತ್ತಿರುವುದಕ್ಕೆ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಮಾ.17ರಿಂದ ಸತತವಾಗಿ ನದಿಗೆ ನೀರು ಹರಿಸಲಾಗುತ್ತಿದ್ದು, ರೈತರು ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ ಮನವಿ ಕೊಟ್ಟ ನಂತರ ತುಂಗಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ ಮುಖ್ಯ ಅಭಿಯಂತರು ಮತ್ತು ತುಂಗಭದ್ರಾ ಬೋಡ್ ಅಧ್ಯಕ್ಷರ ಜತೆ ಮಾತನಾಡಿ ನದಿಗೆ ನೀರು ಹರಿಸದಂತೆ ರಾಜ್ಯ ಸರಕಾರದ ಪರವಾಗಿ ಸೂಚನೆ ಕೊಟ್ಟಿದ್ದರೂ ಪುನಃ ಅ ಧಿಕಾರಿಗಳು ಹೆಚ್ಚಿನ ಪ್ರಮಾಣದಲ್ಲಿ ಹಗಲು ರಾತ್ರಿ ನದಿಯ ಮೂಲಕ ಆಂಧ್ರಪ್ರದೇಶಕ್ಕೆ ನೀರು ಹರಿಸುತ್ತಿದ್ದಾರೆ.
ಸದ್ಯ ಡ್ಯಾಂನಲ್ಲಿ 13 ಟಿಎಂಸಿ ಅಡಿ ನೀರಿನ ಸಂಗ್ರಹವಿದ್ದು, ರಾಯಚೂರು ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಯ ಸುಮಾರು 8 ಲಕ್ಷ ಎಕರೆ ಪ್ರದೇಶದಲ್ಲಿ ಭತ್ತ ಸೇರಿ ಇತರೆ ಬೆಳೆ ಬೆಳೆದಿದ್ದು ಇರುವ ನೀರು ಬೆಳೆದು ನಿಂತ ಬೆಳೆಗೆ ಸಾಲುವುದಿಲ್ಲ ಎಂದು ರೈತರ ಆಕ್ರೋಶವಾಗಿದೆ.
ರೈತರಿಂದ ಮುತ್ತಿಗೆ: ಅಚ್ಚುಕಟ್ಟು ರೈತರ ಹಿತ ಮರೆತು ಆಂಧ್ರಪ್ರದೇಶಕ್ಕೆ ನೀರು ಹರಿಸುತ್ತಿರುವ ತುಂಗಭದ್ರಾ ಬೋರ್ಡ್ ಮತ್ತು ಜಲಸಂಪನ್ಮೂಲ ಇಲಾಖೆ ಅ ಧಿಕಾರಿಗಳನ್ನು ರಾಜ್ಯ ಸರಕಾರ ನಿಯಂತ್ರಿಸಲು ಆಗುತ್ತಿಲ್ಲ. ಶೀಘ್ರವೇ ರೈತರ ನೇತೃತ್ವದಲ್ಲಿ ತುಂಗಭದ್ರಾ ಡ್ಯಾಂಗೆ ಮುತ್ತಿಗೆ ಹಾಕಿ ರೈತರೇ ನೀರನ್ನು ಆಂಧ್ರಪ್ರದೇಶಕ್ಕೆ ಹೋಗದಂತೆ ತಡೆಲಿದ್ದೇವೆ ಎಂದು ಕನಕಗಿರಿ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.