ಎಲ್ಲಾ ಶಾಸಕರಿಗೆ ಸಂವಿಧಾನದ ಕನ್ನಡ ಪ್ರತಿ ಕೊಡುತ್ತೇವೆ: ಸಿಎಂ ಬಿ.ಎಸ್ ಯಡಿಯೂರಪ್ಪ
Team Udayavani, Feb 26, 2020, 12:13 PM IST
ಕೊಪ್ಪಳ: ಈ ಬಾರಿಯ ಬಜೆಟ್ ವೇಳೆ ಸಂವಿಧಾನವನ್ನು ಅನುವಾದಿಸಿ ಕನ್ನಡಕ್ಕೆ ಮುದ್ರಿಸಿ ಎಲ್ಲ ಶಾಸಕರಿಗೂ ಓದಿ ಮಾತನಾಡಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಹೇಳಿದರು.
ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 5 ರಂದು ಬಜೆಟ್ ಮಂಡನೆಗೆ ಎಲ್ಲ ಸಿದ್ದತೆ ನಡೆದಿದೆ. ಈ ಬಾರಿಯ ಬಜೆಟ್ ಅಧಿವೇಶನ ಐತಿಹಾಸಿಕವಾಗಲಿದೆ. ಯಾಕೆಂದರೇ ಬಜೆಟ್ ಅಧಿವೇಶನದಲ್ಲಿ ಎಲ್ಲ ಶಾಸಕರು ಸಂವಿಧಾನದ ಬಗ್ಗೆ ಮಾತನಾಡಲಿದ್ದಾರೆ. ಅದಕ್ಕಾಗಿ ಸಂವಿಧಾನವನ್ನು ಕನ್ನಡಕ್ಕೆ ಅನುವಾದಿಸಿ ಮುದ್ರಿಸಿ ಎಲ್ಲರಿಗೂ ಪುಸ್ತಕ ನೀಡುತ್ತೇವೆ ಎಂದರು.
ಶಾಸಕರಿಗೆ ಸಂವಿಧಾನದ ಪುಸ್ತಕ ಓದಿಕೊಂಡು ಬಂದು ಮಾತನಾಡಲು ಅವಕಾಶ ಕಲ್ಪಿಸಲಾಗುತ್ತದೆ. ಇದೊಂದು ಐತಿಹಾಸಿಕ ನಿರ್ಧಾರ ಎಂದರು.
ಇನ್ನು ಕೊಪ್ಪಳ ಜಿಲ್ಲೆಯ ತುಂಗಭದ್ರಾ ಡ್ಯಾಂ ನಲ್ಲಿ ಹೂಳು ತುಂಬಿದ ವಿಚಾರಕ್ಕೆ ಸಂಬಂಧಿಸಿದಂತೆ ನವಲಿ ಬಳಿ ಜಲಾಶಯ ನಿರ್ಮಾಣದ ಚಿಂತನೆ ಮಾಡಲಾಗುವುದು. ಹೊಸ ಡ್ಯಾಂ ನಿರ್ಮಾಣಕ್ಕೆ 6 ಸಾವಿರ ಕೋಟಿಗೂ ಅಧಿಕ ಹಣ ವ್ಯಯವಾಗಲಿದೆ. ಇದೊಂದು ಅಂತರಾಜ್ಯ ವಿಷಯವಾಗಿದ್ದು ಅದರ ಬಗ್ಗೆ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.