ಬದಲಾವಣೆಯ ಗಾಳಿ ಬಿರುಗಾಳಿಯಾಗಿ ಬೀಸಲಿದೆ: ಬಸವರಾಜ ಬೊಮ್ಮಾಯಿ

ನೀನ್ಯಾವ ಗಿರಾಕಿ? ಸಿದ್ದರಾಮಯ್ಯಗೆ ಸಿಎಂ ಪ್ರಶ್ನೆ

Team Udayavani, Oct 12, 2022, 9:28 PM IST

1-sadsadas

ಕೊಪ್ಪಳ(ಕುಷ್ಟಗಿ): ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಬದಲಾವಣೆಯ ಗಾಳಿ ಬಿರುಗಾಳಿಯಾಗಿ ಬೀಸಲಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕುಷ್ಟಗಿ ಜಿಲ್ಲಾ ಬಿಜೆಪಿ ವತಿಯಿಂದ ಕುಷ್ಟಗಿಯ ಐಎಂ ಕಚೇರಿ ಬಳಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿ,ನಮ್ಮ ಸರ್ಕಾರ ಹಾಲು ಉತ್ಪಾದಕ ರೈತರಿಗೆ, ರೈತರ ವಿದ್ಯಾರ್ಥಿಗಳ ಮಕ್ಕಳಿಗೆ ರೈತ ವಿದ್ಯಾನಿಧಿಯನ್ನು ನೇಕಾರರು, ಕೃಷಿ ಕೂಲಿ ಕಾರ್ಮಿಕರು, ಮೀನುಗಾರರು, ಆಟೋ ಹಾಗು ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿಸ್ತರಿಸಿದೆ. ದುಡಿಯುವ ಕಾರ್ಮಿಕ ಮಕ್ಕಳಿಗೂ ನೀಡುತ್ತಿದ್ದೇವೆ. ಎಸ್.ಸಿ. ಎಸ್.ಟಿ ಬಡವರಿಗೆ 75 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುವ ಯೋಜನೆ ಈ ತಿಂಗಳಿನಿಂದ ಪ್ರಾರಂಭವಾಗಿದೆ. ಎಸ್ ಸಿ. ಎಸ್ ಟಿ ಯವರಿಗೆ ವಸತಿ ಯೋಜನೆ ಸಹಾಯಧನ 2 ಲಕ್ಷ ರೂ. ನೀಡುತ್ತಿದ್ದು, ಭೂ ಒಡೆತನ ಯೋಜನೆಯ ಘಟಕ ವೆಚ್ಚ 20 ಲಕ್ಷ ರೂ.ವರೆಗೆ ನೀಡುವ ತೀರ್ಮಾನ ಮಾಡಲಾಗಿದೆ ಎಂದರು.

100 ಹಾಸ್ಟೆಲ್‍ಗಳ ನಿರ್ಮಾಣ, ಸ್ತ್ರೀ ಸಾಮರ್ಥ್ಯ ಯೋಜನೆಯ ಮೂಲಕ ಪ್ರತಿ ಗ್ರಾಮದ ಸ್ತ್ರೀಶಕ್ತಿ ಸಂಘಕ್ಕೆ 5 ಲಕ್ಷ ರೂ.ಗಳವರೆಗೆ ಸಹಾಯಧನವನ್ನು ನೀಡುತ್ತಿದ್ದು, ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಒಟ್ಟು 5 ಲಕ್ಷ ಮಹಿಳೆಯರಿಗೆ ಈ ಯೋಜನೆ ತಲುಪಲಿದೆ. ಪ್ರತಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಯುವಕ ಸಂಘಗಳನ್ನು ರಚಿಸಿ ಸ್ವಯಂ ಉದ್ಯೋಗಕ್ಕೆ 5 ಲಕ್ಷ ರೂ.ಗಳನ್ನು ನೀಡುವ ಕಾರ್ಯಕ್ರಮ ರೂಪಿಸಲಾಗಿದೆ. ಯುವಕರಿಗೆ ಅವಕಾಶಗಳು, ರೈತರಿಗೆ ಪ್ರೋತ್ಸಾಹ, ನೀರಾವರಿಗೆ ಆದ್ಯತೆ ಮುಂತಾದ ಕಾಯಕ್ರಮಗಳನ್ನು ಮುಂದಿಟ್ಟುಕೊಂಡು, ನಿಮ್ಮ ಆಶೀರ್ವಾದ ಮುಂದೆ ಬಂದಿದ್ದೇವೆ. ಈ ಭಾಗದ ನೀರಾವರಿ, ಹಿಂದುಳಿದವರ, ಪರಿಶಿಷ್ಟ ಜನಾಂಗದವರ ಕಾರ್ಯಕ್ರಮವನ್ನು ರೂಪಿಸಲು ನಾವು ಬದ್ಧ ಎಂದರು.

ನಮ್ಮ ಸರ್ಕಾರದಿಂದ ದೊಡ್ಡ ಬದಲಾವಣೆ
ಅದಕ್ಕೆ ದೊಡ್ಡ ಬದಲಾವಣೆಗಳನ್ನು ನಮ್ಮ ಸರ್ಕಾರ ತರುತ್ತಿದೆ. 28000 ಕೋಟಿ ರೂ.ಗಳನ್ನು ಪರಿಶಿಷ್ಟ. ವರ್ಗದವರ ಕಲ್ಯಾಣಕ್ಕೆ ಮೀಸಲಿಟ್ಟು ಖರ್ಚು ಮಾಡುತ್ತಿದ್ದೇವೆ. 100 ಅಂಬೇಡ್ಕರ್ ವಿದ್ಯಾರ್ಥಿನಿಲಯಗಳನ್ನು ಇದೇ ವರ್ಷ ನಿರ್ಮಾಣ ಮಾಡಲಾಗುತ್ತಿದ್ದು, 50 ಕನಕದಾಸರ ವಿದ್ಯಾರ್ಥಿನಿಲಯಗಳನ್ನು ನಿರ್ಮಿಸುತ್ತಿದ್ದೇವೆ. ಕನಕದಾಸರು ಹುಟ್ಟಿದ ಊರನಿಂದ ನಾನು ಬಂದಿದ್ದೇನೆ. ಬಾಡಾ ನನ್ನ ಕ್ಷೇತ್ರದಲ್ಲಿದೆ. ಸಂಪೂರ್ಣ ಭಕ್ತಿ ಭಾವ ನಮ್ಮ ಕಣಕಣದಲ್ಲಿ ಅಳವಡಿಸಿಕೊಂಡಿದ್ದೇವೆ. 14 ಕೋಟಿ ರೂ.ಗಳನ್ನು ವೆಚ್ಚ ಮಾಡಿ ಅಭಿವೃದ್ಧಿ ಮಾಡಿದ್ದೇವೆ. ಬಾಡ ಅಭಿವೃದ್ಧಿಗೆ ಬಿ.ಎಸ್ ಯಡಿಯೂರಪ್ಪ ಅವರು ಅನುದಾನ ನೀಡಿ, ಅವರ ವಿಚಾರಗಳನ್ನು ಯಾವ ರೀತಿ ಬಿಂಬಿಸಿದ್ದೇವೆ ಎಂದು ಹಾಲುಮತಸ್ತ ಬಂಧುಗಳು ಬಂದು ನೋಡಬೇಕು. ಯಾವುದೇ ಸಮುದಾಯಕ್ಕೆ ಭೇದಭಾವ ಮಾಡಿಲ್ಲ. ನಿಜವಾದ ಸಾಮಾಜಿಕ ನ್ಯಾಯ ನಾವು ನೀಡುತ್ತಿದ್ದೇವೆ ಎಂದರು.

ಕರ್ನಾಟಕದಲ್ಲಿ ಅಭಿವೃದ್ಧಿಯ ಪರ್ವ ಆರಂಭ
ಕುಷ್ಟಗಿಯ ಸಮಗ್ರ ಅಭಿವೃದ್ಧಿಯನ್ನು ನಾವು ಮಾಡುತ್ತೇವೆ. ಇಡೀ ದೇಶದಲ್ಲಿ ನರೇಂದ್ರ ಮೋದಿಯವರ ಪರವಾದ ಅಲೆ ಎದ್ದಿದೆ. ಇಡೀ ವಿಶ್ವದಲ್ಲಿ ಭಾರತದ ಬಗ್ಗೆ ಗೌರವ ಹೆಚ್ಚಿಸಿರು ಶ್ರೇಯಸ್ಸು ನರೇಂದ್ರ ಮೋದಿಯವರದ್ದು. ನರೇಂದ್ರ ಮೋದಿವರ ಕಾರ್ಯಕ್ರಮಗಳು ಬಡವರ ಪರವಾಗಿದೆ. ಕಿಸಾನ್ ಸಮ್ಮಾನ್, ಆಯುಷ್ಮಾನ್ ಭಾರತ್, ಎಲ್ಲವೂ ಜನರಿಗೆ ತಿಳಿದಿದೆ. ಇವೆಲ್ಲರೂ ಪರಿಣಾಮಕಾರಿಯಾಗಿ ಮುಟ್ಟಲು ಡಬಲ್ ಇಂಜಿನ್ ಸರ್ಕಾರ ಕಾರಣ. ಡಬಲ್ ಇಂಜಿನ್ ಸರ್ಕಾರ ಬಂದ ನಂತರ ಆರ್ಥಿಕವಾಗಿ, ಸಾಮಾಜಿಕವಾಗಿ ಕರ್ನಾಟಕವನ್ನು ಮುನ್ನಡೆಸಲಾಗುತ್ತಿದೆ. ಇದು ಮುಂದುವರೆಯಬೇಕಾದರೆ ಬಿಜೆಪಿ ಅಗತ್ಯ. ಮುಂಬರುವ ಚುನಾವಣೆಯಲ್ಲಿ ವಿಧಾನಸಭೆಯ 3 ನೇ ಮಹಡಿಯಲ್ಲಿ ಕಮಲವನ್ನು ಅರಳಿಸಿ ಮತ್ತೊಮ್ಮೆ ಜನಪರವಾದ ಸರ್ಕಾರವನ್ನು ತರುವ ವಿಶ್ವಾಸವಿದೆ. ನವ ಕರ್ನಾಟಕದಿಂದ ನವ ಭಾರತ ನಿರ್ಮಾಣ ಮಾಡಲು ನಿಮ್ಮ ಆಶೀರ್ವಾದ ಅಗತ್ಯ ಎಂದರು. ನಿಮ್ಮ ಮತ, ವಿಶ್ವಾಸಕ್ಕೆ ನೀವು ಖುಷಿ ಪಡುವ ರೀತಿಯಲ್ಲಿ ಕೆಲಸ ಮಾಡುತ್ತೇವೆ. ಕರ್ನಾಟಕದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಿದೆ ಎಂದರು.

ನೀನ್ಯಾವ ಗಿರಾಕಿ? ಸಿದ್ದರಾಮಯ್ಯಗೆ ಸಿಎಂ ಪ್ರಶ್ನೆ

ಸಿದ್ದರಾಮಯ್ಯ ಅವರು ಬಸವರಾಜ ಬೊಮ್ಮಾಯಿ ನಮ್ಮ ಗಿರಾಕಿ ಎಂದು ಹೇಳಿದ್ದಾರೆ ಅವರು ಮತ್ತು ನಾನು ಜನತಾದಳದಲ್ಲಿದ್ದೆವು. ಆಗ ನಾವಿಬ್ಬರೂ ಕಾಂಗ್ರೆಸ್ಸನ್ನು ಕಟ್ಟಾ ವಿರೋಧಿಸಿದರೂ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಯಾಕೆ ಹೋದಿರಿ ನಾನು ಸಿದ್ದರಾಮಯ್ಯ ಅವರನ್ನು ಕೇಳುವೆ? ನೀನು ಈಗ ಎಲ್ಲಿದ್ದೀಯಪ್ಪಾ? ನೀನ್ಯಾವ ಗಿರಾಕಿ ಎಂದು ಕುಟುಕಿದರು.

ಟಾಪ್ ನ್ಯೂಸ್

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

18-uv-fusion

UV Fusion: ನಿಸ್ವಾರ್ಥ ಜೀವ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

16-pongal

Pongal: ಹೀಗೊಂದು ಪೊಂಗಲ್‌ ಪ್ರಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.