ಕೋವಿಡ್ ಗೆ ಮಹಿಳೆ ಬಲಿ
Team Udayavani, Jun 18, 2020, 9:01 AM IST
ಸಾಂದರ್ಭಿಕ ಚಿತ್ರ
ಕೊಪ್ಪಳ: ಕೋವಿಡ್ ಸೋಂಕಿನಿಂದ ಬಳಲಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಗಂಗಾವತಿ ತಾಲೂಕಿನ ಮರಳಿ ಗ್ರಾಮದ 50 ವರ್ಷದ
ಪಿ-7105 ಎಂಬ ಮಹಿಳೆ ಬುಧವಾರ ಸಂಜೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಕುರಿತು ಜಿಲ್ಲಾಡಳಿತ ದೃಢಪಡಿಸಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಮಹಾಮಾರಿ ಕೋವಿಡ್-19 ಮಹಿಳೆಯನ್ನ ಬಲಿ ಪಡೆದಿದೆ. ಮರಳಿ ಗ್ರಾಮದಲ್ಲಿ ದಂಪತಿಗೆ ಜೂ.13ರಂದು ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅವರ ಗಂಟಲು ದ್ರವ ಪಡೆದು ಪ್ರಯೋಗಾಲಯಕ್ಕೆ ರವಾನಿಸಿತ್ತು.
ಜೂ.14ರಂದು ದಂಪತಿಗಳಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಅವರ ಟ್ರಾವೆಲ್ ಹಿಸ್ಟರಿ ತನಿಖೆ ಮಾಡಿದಾಗ ಅವರ ಪುತ್ರ ಬಳ್ಳಾರಿಯ ಜಿಂದಾಲ್‌ನಲ್ಲಿ ಉದ್ಯೋಗಿಯಾಗಿರುವ ಕುರಿತು ಮಾಹಿತಿ ಲಭ್ಯವಾಗಿತ್ತು. ಇಬ್ಬರೂ ದಂಪತಿಯನ್ನು ಜಿಲ್ಲಾ ಕೋವಿಡ್-19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿತ್ತು. ಆದರೆ ಪಿ-7105 ಎಂಬ 50 ವರ್ಷದ ಮಹಿಳೆಗೆ ಬುಧವಾರ ಸಂಜೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಿಸದೇ ಮಹಿಳೆ ಮೃತಪಟ್ಟಿದ್ದಾರೆ. ಜಿಲ್ಲಾಡಳಿತವು ಸರ್ಕಾರದ ನಿಯಮಾನುಸಾರ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
MUST WATCH
ಹೊಸ ಸೇರ್ಪಡೆ
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
Bangaluru; ವ್ಯಕ್ತಿ ಹೊಟ್ಟೆಯಿಂದ 50 ಟೂತ್‌ಬ್ರೆಷ್ ಹೊರತೆಗೆದ ವೈದ್ಯರು!
Snake; ಕಾಳಿಂಗದ ವೈಜ್ಞಾನಿಕ ಹೆಸರು ‘ಓಫಿಯೋಫೆಗಸ್ ಕಾಳಿಂಗ’:ಅಧಿಕೃತವಾಗಿ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.