ಕಾರ್ಮಿಕರಿಗೆ ಮಳೆಗಾಲದವರೆಗೆ ಕೆಲಸ
Team Udayavani, May 16, 2020, 5:18 PM IST
ತಾವರಗೇರಾ: ಕೃಷಿ ಇಲಾಖೆಯ ಜಲಾಮೃತ ಯೋಜನೆಯಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಸುಮಾರು 4012 ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿ ಕಾರಿ ಎಸ್.ವಿ. ಹುಣಿಸಿಹಾಳ ತಿಳಿಸಿದ್ದಾರೆ.
ಇತ್ತೀಚಿಗೆ ಸಮೀಪದ ಮ್ಯಾದರಡೊಕ್ಕಿ, ಗರ್ಜನಾಳ, ಕಳಮಳ್ಳಿ ಗ್ರಾಮಗಳ ಹೊರ ವಲಯದ ಜಮೀನುಗಳಲ್ಲಿ ಬದು ನಿರ್ಮಾಣ, ಕಂದಕ ನಿರ್ಮಾಣ ಕಾಮಗಾರಿಗಳನ್ನು ತೆಗೆದುಕೊಂಡಿದ್ದು ಸುಮಾರು 11 ಲಕ್ಷ ರೂ. ಕಾಮಗಾರಿ ಮುಗಿದಿದೆ. ಒಂದು ದಿನದ ಕೂಲಿ 275 ರೂ. ನೀಡಲಾಗುತ್ತದೆ. ಮಳೆಗಾಲ ಬರುವ ತನಕ ಕಾಮಗಾರಿ ನಡೆಯಲಿದೆ ಎಂದು ತಿಳಿಸಿದರು.
ಜಿಪಂ ಸದಸ್ಯ ಹನಮಗೌಡ ಪೊಲೀಸಪಾಟೀಲ್ ಈ ಕಾಮಗಾರಿಗೆ ಚಾಲನೆ ನೀಡಿದ್ದರು. ಜುಮಲಾಪೂರ ಗ್ರಾಪಂ ಅಧ್ಯಕ್ಷೆ ಕಮಲಮ್ಮ ರಾಠೊಡ್, ಸಹಾಯಕ ಕೃಷಿ ಅಧಿಕಾರಿಗಳಾದ ಯಲ್ಲಪ್ಪ ಗಿಟಗಿ, ಶಿವಾನಂದ ಮಾಳಗಿ, ದೊಡ್ಡಬಸವ ಇದ್ಲಾಪೂರ, ಮತ್ತು ಗ್ಯಾನಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
ಹನುಮಮಾಲಾ ವಿಸರ್ಜನೆ: ಕಿಷ್ಕಿಂಧಾ ಅಂಜನಾದ್ರಿಗೆ ಜಗಮಗಿಸುವ ವಿದ್ಯುತ್ ದೀಪಗಳಿಂದ ಅಲಂಕಾರ
ಕೃಷ್ಣ ನಿಧನ;ಪ್ರಮುಖ ಸರಕಾರಿ ಕಚೇರಿಗಳಲ್ಲಿ ಅರ್ಧಕ್ಕೇರದ ರಾಷ್ಟ್ರಧ್ವಜ;ಅಧಿಕಾರಿಗಳಿಂದ ಅಗೌರವ
ಎಸ್.ಎಂ.ಕೃಷ್ಣ ನಿಧನ; ಶೋಕಾಚರಣೆ ಆದೇಶಕ್ಕೆ ಕಿಮ್ಮತ್ತು ನೀಡದ ಬಿಇಒ,ಸಮಾಜ ಕಲ್ಯಾಣ ಇಲಾಖೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.