ನ್ಯಾಯಾಧೀಶರಿಂದ ಕೋವಿಡ್ ಜಾಗೃತಿ
Team Udayavani, Apr 15, 2020, 6:23 PM IST
ಯಲಬುರ್ಗಾ: ತಾಲೂಕಿನ ಬೇವೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿವಿಲ್ ನ್ಯಾಯಾಧೀಶರಾದ ಶುಭ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಯಲಬುರ್ಗಾ: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆಗಾಗಿ ದಾಖಲಾಗುವ ರೋಗಿಗಳಿಗೆ ವೈದ್ಯರು ಸರಿಯಾಗಿ ಸ್ಪಂದಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಹೇಳಿದರು.
ತಾಲೂಕಿನ ಬೇವೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿರುವ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕಾರ್ಯಕ್ಕೆ ಆರೋಗ್ಯ ಇಲಾಖೆ ಮುಂದಾಗಬೇಕು. ವೈದ್ಯರು ಮಾಸ್ಕ್ ಸೇರಿದಂತೆ ವಿಶೇಷವಾಗಿ ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಜಾಗೃತಿ ವಹಿಸಿ ಕಾರ್ಯ ನಿರ್ವಹಿಸಬೇಕು. ಪ್ರತಿಯೊಬ್ಬರು ಕಡ್ಡಾಯವಾಗಿ ಲಾಕ್‌ಡೌನ್ ಅನ್ನು ಪಾಲಿಸಬೇಕು ಮನೆಯಿಂದ ಯಾರೂ ಹೊರಗಡೆ ಬರಬಾರದು. ಮಹಾಮಾರಿ ಕೊರೊನಾ ನಿರ್ಮೂಲನೆಗೆ ತಾಲೂಕಾಡಳಿತಕ್ಕೆ ಸಹಕಾರ ನೀಡಬೇಕಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಸರಕಾರದ ನಿಯಮಗಳನ್ನು ಪಾಲಿಸಬೇಕು ಎಂದರು. ಸಿವಿಲ್ ನ್ಯಾಯಾಧೀಶರಾದ ಶ್ರೀಶೈಲ ಬಾಗಡೆ, ತಾಲೂಕು ಆರೋಗ್ಯ ಅಧಿಕಾರಿ ಡಾ| ಮಂಜುನಾಥ ಬ್ಯಾಳಹುಣಸಿ, ಡಾ| ವಿವೇಕ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
ಗಂಗಾವತಿ: ಹಳ್ಳದ ಬದಿ ಹೊಸ್ಕೇರಾ-ಡಗ್ಗಿ ದಲಿತರ ಶವ ಸಂಸ್ಕಾರ- ಅಸ್ಪ್ರಶ್ಯತೆ ಇನ್ನೂ ಜೀವಂತ!
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
ರೀಲ್‌ನಿಂದ ರಿಯಲ್ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!
ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.