ಯಲಬುರ್ಗಾ: ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ
Team Udayavani, Apr 3, 2024, 10:43 AM IST
ಉದಯವಾಣಿ ಸಮಾಚಾರ
ಯಲಬುರ್ಗಾ: ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬಲ್ಲ ಆರಂಭಿಕ ಹಂತವೇ ಚುನಾವಣಾ ಪ್ರಕ್ರಿಯೆಯಾಗಿದೆ. ಮತದಾರರು ಪ್ರತಿ ಚುನಾವಣೆ ಮತದಾನದಲ್ಲಿ ತೊಡಗಿಸಿಕೊಂಡಾಗ ಮಾತ್ರ ಪ್ರಜಾಪ್ರಭುತ್ವದ ಆಶಯ ಅರ್ಥ ಪೂರ್ಣವಾಗಲಿವೆ ಎಂದು ತಾಪಂ ಸಹಾಯಕ ನಿರ್ದೇಶಕ ಹನಮಂತಗೌಡ ಪೊಲೀಸ್ ಪಾಟೀಲ್ ಹೇಳಿದರು.
ತಾಲೂಕಿನ ಗೆದಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿ ಸ್ಥಳದಲ್ಲಿ ಮಂಗಳವಾರ ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಮತದಾನ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಲು ಸ್ವೀಪ್ ಜಾಗೃತಿ ಹಾಗೂ ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತ್ರಿ ಅಭಿಯಾನದಲ್ಲಿ ಅವರು ಮಾತನಾಡಿದರು.
ಶೇ 100ರಷ್ಟು ಮತದಾನವಾದಾಗ ಮಾತ್ರ ಪ್ರಜಾಪ್ರಭುತ್ವದ ವ್ಯವಸ್ಥೆ ಬಲಗೊಳ್ಳಲಿದೆ. ಮತದಾನ ಪವಿತ್ರವಾದ ಕಾರ್ಯವಾಗಿದೆ.
ನರೇಗಾ ಕೂಲಿಕಾರರು ಮತ ಚಲಾಯಿಸುವ ಮೂಲಕ ತಮ್ಮಿಂದ ದೇಶಕ್ಕೆ ದೊಡ್ಡ ಕೊಡುಗೆ ನೀಡಿದಂತಾಗುತ್ತದೆ. ಮೇ ತಿಂಗಳಲ್ಲಿ ಜರುಗುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುವುದರ ಮೂಲಕ ಸುಭದ್ರ ದೇಶವನ್ನಾಗಿ ನಿರ್ಮಿಸೋಣ. ಮತದಾನ ದಿನದಂದು ಸಮಯ ವ್ಯರ್ಥ ಮಾಡದೆ ಚುನಾವಣೆ ಆಯೋಗ ನಿಗದಿಪಡಿಸಿದ
ದಾಖಲೆಗಳನ್ನು ತೆಗೆದುಕೊಂಡು ಹೋಗಿ ಮತ ಚಲಾಯಿಸಬೇಕು. ಗೆದಗೇರಿ ಗ್ರಾಮ ಪಂಚಾಯತಿಯಲ್ಲಿ ಶೇಕಡಾ 100 ರಷ್ಟು ಮತದಾನ ಆಗಬೇಕು ಎಂದರು.
ವಲಸೆ ಯಾಕ್ರಿ ನಿಮ್ಮೂರಲ್ಲೆ ಉದ್ಯೋಗ ಖಾತ್ರಿ ಅಭಿಯಾನವು ಎರಡು ತಿಂಗಳ ನಿರಂತರವಾಗಿದ್ದು, ಅದರ ಸದುಪಯೋಗವನ್ನು ಎಲ್ಲ ಕೂಲಿಕಾರರು ಪಡೆಯಬೇಕು ಎಂದರು. ಕಾರ್ಯಕ್ರಮದಲ್ಲಿ ತಾಪಂ ತಾಂತ್ರಿಕ ಸಂಯೋಜಕರಾದ ಸಂತೋಷ ನಂದಾಪುರ, ಐಇಸಿ ಸಂಯೋಜಕರಾದ ಶರಣಪ್ಪ ಹಾಳಕೇರಿ, ಗ್ರಾಮ ಪಂಚಾಯತಿ ಪಿಡಿಒ ಮಹಾಂತೇಶ ಬಾಳಿಕಾಯಿ ಮಾತನಾಡಿದರು. ಗ್ರಾ.ಪಂ ಕಾರ್ಯದರ್ಶಿ ಚನ್ನಪ್ಪ, ಟಿಎಇ ಶ್ರೀದೇವಿ, ಬಿಎಫ್‌ಟಿ ದೇವಪ್ಪ ಬತ್ತಿ, ಕಾಯಕ ಮಿತ್ರರಾದ ಮಂಜುಳಾ ತಳವಾರ, ಕಾಯಕ ಬಂಧುಗಳು, ಕೂಲಿಕಾರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.