ಗ್ರಾಪಂ ಅಭಿವೃದ್ಧಿಗೆ ಆದ್ಯತೆ ನೀಡಲಿ
Team Udayavani, Jan 25, 2019, 11:22 AM IST
ಯಲಬುರ್ಗಾ: ಗ್ರಾಮಗಳ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡುವ ಉದ್ದೇಶದಿಂದ ಗ್ರಾಪಂಗಳಿಗೆ ಸಂವಿಧಾನ ಬದ್ಧವಾದ ಅಧಿಕಾರವನ್ನು ನೀಡಲಾಗಿದೆ ಎಂದು ಅಕ್ಷರ ದಾಸೋಹ ತಾಲೂಕು ಅಧಿಕಾರಿ ಎಫ್.ಎಂ. ಕಳ್ಳಿ ಹೇಳಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ತಾಲೂಕಿನ ಗ್ರಾಪಂ ಸದಸ್ಯರಿಗೆ ಹಾಗೂ ಪಿಡಿಒಗಳಿಗೆ ಹಮ್ಮಿಕೊಂಡ ಹೈಕ ಅಭಿವೃದ್ಧಿ ಯೋಜನೆಯ ಕುರಿತು ಮಾಹಿತಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗಾಂಧೀಜಿ ಅವರ ಕನಸಿನಂತೆ ರೂಪುಗೊಂಡಿರುವ ಗ್ರಾಪಂಗಳು ಗ್ರಾಮಗಳ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರವಹಿಸುತ್ತಿವೆ. ಇದಕ್ಕಾಗಿ ಬಲವಂತರಾಯ ಮೆಹ್ತಾ ಸಮಿತಿ ನೀಡಿರುವ ಹಲವಾರು ವಿಷಯಗಳನ್ನು ಜಾರಿಗೆ ತರಲಾಗಿದೆ ಎಂದರು.
ಗ್ರಾಮೀಣ ಭಾಗದಲ್ಲಿ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದವರಿಗೂ ಗ್ರಾಮಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಲು 73ನೇ ತಿದ್ದುಪಡಿ ಮೂಲಕ ಅವಕಾಶ ನೀಡಲಾಗಿದೆ. ಇದಕ್ಕಾಗಿ ಮೀಸಲಾತಿ ಸೌಲಭ್ಯ ಕಲ್ಪಿಸಲಾಗಿದೆ. ಇದರಿಂದಾಗಿ ಗ್ರಾಪಂಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸಾಮಾಜಿಕವಾಗಿ ಹಿಂದುಳಿದವರು ಸಹ ಅಧಿಕಾರ ಚಲಾಯಿಸಲು ಅವಕಾಶ ದೊರೆತಿದೆ. 14ನೇ ಹಣಕಾಸು ಯೋಜನೆಯಲ್ಲಿ ಗ್ರಾಪಂಗಳಿಗೆ ಹೆಚ್ಚಿನ ಆರ್ಥಿಕ ಸೌಲಭ್ಯ ದೊರೆತಿದೆ. ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಸರಕಾರದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ತರಬೇತಿಯಲ್ಲಿ ಕಾನೂನುಗಳನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ತಾಪಂ ವ್ಯವಸ್ಥಾಪಕ ಮಹೇಶಗೌಡ ಮಲ್ಲನಗೌಡ್ರ ಮಾತನಾಡಿ, ತರಬೇತಿಯಲ್ಲಿ ಗ್ರಾಪಂಗಳಿಗೆ ಸಂವಿಧಾನ ಬದ್ಧವಾಗಿ ದೊರೆತಿರುವ ಅಧಿಕಾರ, ಸಾಮಾನ್ಯ ಸಭೆಯ ನಡವಳಿಕೆ, ಸ್ಥಾಯಿ ಸಮಿತಿಗಳ ಕರ್ತವ್ಯ, ಸ್ವಂತ ಸಂಪನ್ಮೂಲಗಳ ಕ್ರೋಢೀಕರಣ, ರಾಜ್ಯ ಮತ್ತು ಕೇಂದ್ರ ಸರಕಾರದ 21 ಅಂಶಗಳು ಸೇರಿದಂತೆ ನಾನಾ ವಿಷಯಗಳನ್ನು ವಿವರವಾಗಿ ತಿಳಿಸಲಾಗುವುದು. ಹೈಕ ಪ್ರದೇಶಾಭಿವೃದ್ಧಿ ಯೋಜನೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಯಾವ ರೀತಿ ಪಡೆಯಬೇಕು ಎಂಬುದನ್ನು ಸಮಗ್ರವಾಗಿ ತಿಳಿದುಕೊಳ್ಳಬೇಕು ಎಂದರು.
ಬಿಇಒ ಶರಣಪ್ಪ ವಟಗಲ್ಲ ಮಾತನಾಡಿ, ಹೈಕ ಅನುದಾನದಲ್ಲಿ ತಾಲೂಕಿನ ಶಾಲಾ ಕಟ್ಟಡಗಳು ನಿರ್ಮಾಣವಾಗುತ್ತಿವೆ. ತಾಲೂಕಿನ ಗ್ರಾಪಂಗಳ ಅಧ್ಯಕ್ಷರು ಹಾಗೂ ಪಿಡಿಒಗಳು ಗುಣಮಟ್ಟದ ಕಾಮಗಾರಿ ನಡೆಸಬೇಕು ಹಾಗೂ ಸರ್ಕಾರದಿಂದ ಶೈಕ್ಷಣಿಕ ಅಭಿವೃದ್ಧ್ದಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ. ಅವುಗಳನ್ನು ತಾಲೂಕಿನಲ್ಲಿ ಸಕಾಲದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ತಾಲೂಕು ಆರೋಗ್ಯ ಅಧಿಕಾರಿ ಡಾ| ಮಂಜುನಾಥ ಬ್ಯಾಳಹುಣಸಿ, ಪಿ.ವೈ. ಮ್ಯಾಗೇರಿ, ಅಂಗನವಾಡಿ ಮೇಲ್ವಿಚಾರಕಿ ಮಂಜುಳಾ, ಸಂಪನ್ಮೂಲ ವ್ಯಕ್ತಿಗಳಾದ ಉಮೇಶ ನಾಯಕ, ಭೀಮಪ್ಪ ಹವಳಿ, ಗ್ರಾಪಂ ಅಧ್ಯಕ್ಷರು, ಪಿಡಿಒಗಳು ಇದ್ದರು.
ತರಬೇತಿ ಕಾರ್ಯಾಗಾರದ ಸಂದರ್ಭದಲ್ಲಿ ತಾಲೂಕಿನ ಕೆಲ ಗ್ರಾಪಂ ಪಿಡಿಒಗಳು ನಿದ್ರೆಗೆ ಜಾರಿದ್ದರು. ಕೆಲವರು ಫೋನ್ ಚಾಟಿಂಗ್‌ನಲ್ಲಿ ತಲ್ಲೀನರಾಗಿವುರು ಕಂಡು ಬಂತು. ತಾಪಂ ವ್ಯವಸ್ಥಾಪಕ ಮಹೇಶಗೌಡ ಮಲ್ಲನಗೌಡ್ರ ಪ್ರತಿಕ್ರಿಯಿಸಿ ತರಬೇತಿ ಸಭಾಂಗಣದಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ನಿದ್ರೆಗೆ ಜಾರಿದ್ದ ಹಾಗೂ ಮೊಬೈಲ್ ಚಾಟಿಂಗ್‌ನಲ್ಲಿ ಬ್ಯೂಸಿಯಾಗಿದ್ದ ಪಿಡಿಒಗಳ ವಿರುದ್ಧ ಕ್ರಮಕ್ಕೆ ಸಿಸಿ ಕ್ಯಾಮೆರಾ ವಿಡಿಯೋ ಸಮೇತ ಮೇಲಾಧಿಕಾರಿಗೆ ವರದಿ ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು
Anjanadri ಬೆಟ್ಟದಲ್ಲಿ ಬೆಳಗಿನ ಜಾವದಿಂದಲೇ ಮಾಲಾಧಾರಿಗಳಿಂದ ಮಾಲೆ ವಿಸರ್ಜನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
PAK Vs SA: ಸರಣಿ ಕ್ಲೀನ್ ಸ್ವೀಪ್ ಗೈದ ಪಾಕಿಸ್ಥಾನ
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
BCCI: ಇನ್ನೆರಡು ಟೆಸ್ಟ್ ನಿಂದ ಮೊಹಮ್ಮದ್ ಶಮಿ ಹೊರಕ್ಕೆ
Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.