DJ Sound: ಜಿಲ್ಲಾ ಪೊಲೀಸ್ ಇಲಾಖೆಯ ದ್ವಂದ್ವ ನಿಲುವು; ಡಿಜೆ ಸೌಂಡ್ ಗೆ ಮೃತಪಟ್ಟ ಯುವಕ

ಸಾರ್ವಜನಿಕರಿಂದ ಆಕ್ರೋಶ

Team Udayavani, Oct 10, 2023, 1:19 PM IST

6-gangavathi

ಗಂಗಾವತಿ: ಗಣೇಶ ವಿಸರ್ಜನೆ ಮೆರವಣಿಗೆಯ ಡಿಜೆ ಸೌಂಡ್ ಪರವಾನಿಗೆ ನೀಡುವ ವಿಷಯದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ದ್ವಂದ್ವ ನಿಲುವಿನಿಂದಾಗಿ ಗಂಗಾವತಿ ನಗರದಲ್ಲಿ ಯುವಕನೋರ್ವ ಮೆರವಣಿಗೆಯಲ್ಲಿ ಡಿಜೆ ಸೌಂಡ್ ಪರಿಣಾಮ ಮೃತಪಟ್ಟ ಘಟನೆ ಹಾಗೂ ನಗರದಲ್ಲಿ ಕೋಮು ಗಲಭೆಗೆ ಕಾರಣವಾಗಿದ್ದು ಜಿಲ್ಲಾಡಳಿತದ ವಿರುದ್ಧ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಪ್ರಶಾಂತ ನಗರದ ಯುವಕ ಸುದೀಪ್  ರುದ್ರಪ್ಪ ಸಜ್ಜನ (26) ಕುಸಿದು ಬಿದ್ದು ಮೃತಪಟ್ಟವರು.

ಧ್ವನಿವರ್ಧಕ (ಡಿಜೆ) ಬಳಸುವ ಪರವಾನಿಗೆ ನೀಡುವ ಸಂದರ್ಭ ಇಂತಿಷ್ಟು ಪ್ರಮಾಣದಲ್ಲಿ ಧ್ವನಿವರ್ಧಕ ಬಳಸಬೇಕು. ಉದಾಹರಣೆಗಳು ಕಾನೂನಾತ್ಮಕವಾಗಿ ಇದ್ದರೂ ಕೂಡ ಇಲ್ಲಿನ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ.

ಮಸೀದಿ ಮುಂದೆ ಘರ್ಷಣೆ ನಡೆದು ಎರಡು ಕೋಮಿನ ಯುವಕರ ಕೇಸ್  ದಾಖಲಾಗಿದೆ. ಅದರೊಂದಿಗೆ ಕರ್ತವ್ಯ ನಿರ್ಲಕ್ಷ್ಯ ಹಿನ್ನೆಲೆ ಪಿಐ, ಸಿಪಿಐ ಹಾಗೂ ಪೇದೆಯೊರ್ವನ ಅಮಾನತು ಮಾಡಲಾಗಿದೆ.

ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಡಿಜೆ ಪರವಾನಿಗೆ ‌ನಿಯಮಾನುಸಾರ ನೀಡಲು ಅವಕಾಶವಿಲ್ಲ ಎಂದು ಹೇಳಿದ ನಂತರವೂ 5ನೇ ದಿನದ ಗಣೇಶ ವಿಸರ್ಜನೆ ವೇಳೆ ಗಣೇಶನ ಸಮಿತಿಯವರು ಹೆಚ್ಚಿನ ಪ್ರಮಾಣದಲ್ಲಿ ಸೌಂಡ್ ಡಿಜೆ ಬಳಸಿದರೂ ನಾಮಕಾವಸ್ತೆ ಎನ್ನುವಂತೆ ಎರಡು ಡಿಜೆಗಳನ್ನು ಟ್ರ್ಯಾಕ್ಟರ್ ಸಮೇತ  ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಲಾಯಿತು.

13,15 ಮತ್ತು 21 ದಿನಗಳಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಡಿಜೆ ಸೌಂಡ್ ಬಳಸಿದರೂ ಸ್ಥಳದಲ್ಲಿದ್ದ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಆಕ್ಷೇಪಣೆ ಮಾಡಿಲ್ಲ. ಗಂಗಾವತಿ ಪ್ರಶಾಂತನಗರದ ಈಶ್ವರ ಗಜಾನನ ಯುವಕ ಮಂಡಳಿಯು ಗಣೇಶ ವಿಸರ್ಜನೆ ಸಂದರ್ಭದಲ್ಲಿ ಡಿಜೆ ಬಳಕೆ ಮಾಡಿತ್ತು.

ಡಿಜೆ ಸೌಂಡ್‌ಗೆ ಡ್ಯಾನ್ಸ್‌ ಮಾಡುತ್ತಿದ್ದ ಸುದೀಪ್  ರುದ್ರಪ್ಪ ಸಜ್ಜನ ಕುಸಿದು ಬಿದ್ದು ಅಸ್ವಸ್ಥನಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸಮಿತಿಯವರು ಮೆರವಣಿಗೆ ನಿಲ್ಲಿಸಿ ಗಣೇಶನನ್ನು ವಿಸರ್ಜನೆ ಮಾಡಿದ್ದಾರೆ.

ಪೊಲೀಸ್‌ ವರಿಷ್ಠಾಧಿಕಾರಿ ಯಶೋಧ ವಂಟಗೋಡಿ ನೇತೃತ್ವದಲ್ಲಿ ಸಭೆ ನಡೆಸಿ ಡಿಜೆ ಸೌಂಡ್ ಇಂತಿಷ್ಟು ಇರಬೇಕೆನ್ನುವ ಆದೇಶ ಮಾಡಲಾಗಿತ್ತು.

ಧ್ವನಿವರ್ಧಕ ಪರವಾನಿಗೆ ನೀಡುವ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು ನಿರ್ದೇಶನ ಉಲ್ಲಂಘಿಸಿ ಗಣೇಶನ ಸಮಿತಿಯವರು ಹೆಚ್ಚಿನ ಡಿಜೆ ಸೌಂಡ್ ಬಳಸುತ್ತಿರುವುದನ್ನು ತಡೆಗಟ್ಟದೇ  ಮುಂಜಾಗ್ರತೆ ವಹಿಸದ ಹಿನ್ನೆಲೆಯಲ್ಲಿ ಈ ಘಟನೆಗಳು ಜರಗಿವೆ ಎಂದು  ಸಾರ್ವಜನಿಕರ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಟಾಪ್ ನ್ಯೂಸ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

3-tavaragera

Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್

4-gangavathi

Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

11

IPL ‌Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?

Iyer

IPL ‌Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್‌ ಅಯ್ಯರ್‌ ಪಂಜಾಬ್‌ ಪಾಲಿಗೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.