ತುಂಗಭದ್ರಾ ನೀರಾವರಿಗೆ ಸಾವಿರ ಕೋಟಿ
ಚುನಾವಣೆ ಬಳಿಕ ಕ್ರಾಂತಿಕಾರಿ ಬೆಳವಣಿಗೆ: ಬಿಎಸ್‌ವೈಅಲ್ಲಿ ಮೋದಿ ಸರ್ಕಾರ, ಇಲ್ಲಿ ಬಿಜೆಪಿ ಸರ್ಕಾರ
Team Udayavani, Apr 13, 2019, 11:01 AM IST
ಗಂಗಾವತಿ: ನಗರದಲ್ಲಿ ಶುಕ್ರವಾರ ನಡೆದ ಬಿಜೆಪಿ ವಿಜಯ ಸಂಕಲ್ಪ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗಂಗಾವತಿ ಹನುಮ ಮಾಲಾಧಾರಿಗಳು ಬೆಳ್ಳಿ ಗದೆ ನೀಡಿ ಗೌರವಿಸಿದರು. ಶಾಸಕ ಬಿ.ಶ್ರೀರಾಮುಲು, ಮಾಜಿ ಸಿಎಂ ಜಗದೀಶ ಶೆಟ್ಟರ್, ಸಂಸದ ಸಂಗಣ್ಣ ಕರಡಿ, ಚಿತ್ರನಟಿ ಶೃತಿ ಇತರರಿದ್ದರು.
ಕೊಪ್ಪಳ: ಇಲ್ಲಿನ ತುಂಗಭದ್ರಾ, ಆಲಮಟ್ಟಿ ಜಲಾಶಯ ವಿಸ್ತಾರವಿದ್ದರೂ ರಾಜ್ಯದಲ್ಲಿ ಕುಡಿಯುವ ನೀರಿನ ಭವಣೆ ಹೆಚ್ಚಾಗಿದೆ. ಕಾಂಗ್ರೆಸ್-ಜೆಡಿಎಸ್ ಸರ್ಕಾರ ಏನೂ ಮಾಡುತ್ತಿಲ್ಲ. ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರ ಬಂದ 5 ವರ್ಷದಲ್ಲಿ ಈ ಭಾಗದ ನೀರಾವರಿ ಯೋಜನೆಗಳಿಗೆ ಸಾವಿರ ಕೋಟಿ ಅನುದಾನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಗಂಗಾವತಿಯಲ್ಲಿ ಶುಕ್ರವಾರ ಬಿಜೆಪಿಯಿಂದ ಆಯೋಜಿಸಿದ್ದ ವಿಜಯ ಸಂಕಲ್ಪಯಾತ್ರೆಯಲ್ಲಿ ಅವರು ಮಾತನಾಡಿದರು. ನಮ್ಮ ಸರ್ಕಾರ ಐದು ವರ್ಷದಲ್ಲಿ ಮಹತ್ವದ ಅಭಿವೃದ್ಧಿ ಕೆಲಸ ಮಾಡಿದೆ. 70 ವರ್ಷದ ಅವ ಧಿಯಲ್ಲಿ ಕಾಂಗ್ರೆಸ್ ಸರ್ಕಾರ ಏನೂ ಮಾಡಿಲ್ಲ. ಈ ಬಾರಿ ಮೋದಿ ಸರ್ಕಾರ ಅಧಿಕಾರ ಬಂದಾಕ್ಷಣ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಿದೆ. ನದಿಗಳ ಜೋಡಣೆ, ರೈಲ್ವೆ ಯೋಜನೆಗಳ ಹಾಗೂ ಹೆದ್ದಾರಿ ರಸ್ತೆಗಳ ನಿರ್ಮಾಣಕ್ಕೆ ಒತ್ತು ನೀಡಲಾಗಿದ್ದು, ಹಲವು ಯೋಜನೆಗಳ ಅನುಷ್ಠಾನ ಮಾಡಲಾಗುವುದು ಎಂದರು.
ನಾನು ರಾಮನವಮಿ ಮುನ್ನವೇ ಹನುಮನು ಜನಸಿದ ಭೂಮಿಗೆ ಆಗಮಿಸಿದ್ದೇನೆ. ಇಲ್ಲಿನ ಮಣ್ಣಿನ ಕಣ ಕಣದಲ್ಲೂ ಪುಣ್ಯವಿದೆ. ಇಲ್ಲಿನ ಕಣದ
ಪುಣ್ಯವೂ ನನಗೆ ಸಿಗಲಿ. ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ, ಶರಣರ-ಸಂತರ, ಆಂಜನೇಯನು ನಮಗೆ ಆಶೀರ್ವದಿಸಲಿ. ಇಂದು ದೇಶದೆಲ್ಲೆಡೆಯೂ
ಮತ್ತೂಮ್ಮೆ ಮೋದಿ ಅಲೆಯಾಗಿ ಕಾಣಿಸುತ್ತಿದೆ. ಪ್ರತಿಯೊಬ್ಬರೂ ಬಿಜೆಪಿಗೆ ಮತ ನೀಡಿ ದೇಶದ ರಕ್ಷಣೆ ಮಾಡಿ ಎಂದರಲ್ಲದೇ, ಪಿಎಂ ಕಿಸಾನ್ ಯೋಜನೆ ಜಾರಿ ಮಾಡಿದರೆ ರಾಜ್ಯ ಸರ್ಕಾರ ಅಡ್ಡಗಾಲು ಹಾಕುತ್ತಿದೆ. ನಾವು ಅಧಿಕಾರಕ್ಕೆ ಬಂದಾಕ್ಷಣ ಮತ್ತೆ ಯೋಜನೆ ಅನುಷ್ಠಾನ ಮಾಡಲಿದ್ದೇವೆ ಎಂದರು.
ಸಮಾರಂಭಕ್ಕೂ ಪೂರ್ವದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ಪ್ರಧಾನಿ ಮೋದಿ ರೈತರಿಗೆ 6 ಸಾವಿರ ರೂ. ಪಿಂಚಣಿ, ಮಹಿಳೆಯರಿಗೆ ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ಮೀಸಲು, ಆದಾಯ ತೆರಿಗೆ, ಮುದ್ರಾದಡಿ 8 ಲಕ್ಷ ಕೋಟಿ ಸಾಲ ಸೇರಿದಂತೆ ಹಲವು ಯೋಜನೆ ಜಾರಿ ಮಾಡಿದ್ದಾರೆ. ಐದು ವರ್ಷದಲ್ಲಿ ಅಭಿವೃದ್ಧಿ ಪರ್ವವೇ ನಡೆದಿದೆ ಎಂದರು.
ಚುನಾವಣೆ ನಂತರ ಕ್ರಾಂತಿಕಾರಿ ಬದಲಾವಣೆ: ದೇಶದಲ್ಲಿ ಮತ್ತೆ ಮೋದಿ ಅವರೇ ಪ್ರಧಾನಿಯಾಗಲಿದ್ದಾರೆ ಎಂದು ಕಾಂಗ್ರೆಸ್‌ನ ಜನಾರ್ದನ ಪೂಜಾರಿ ಅವರೇ ಹೇಳಿದ್ದಾರೆ. ಚುನಾವಣೆ ಬಳಿಕ ರಾಜ್ಯದಲ್ಲಿ ಕ್ರಾಂತಿಕಾರಿ ಬೆಳವಣಿಗೆ ನಡೆಯಲಿದೆ. ಮೈತ್ರಿ ಸರ್ಕಾರ ಬಡಿದಾಟ ಶುರುವಾಗುತ್ತೆ. ರಾಜ್ಯದಲ್ಲಿ ಬಿಜೆಪಿ 22, ದೇಶದಲ್ಲಿ 330 ಸ್ಥಾನ ನಾವು ಗೆಲ್ಲುತ್ತೇವೆ. ಮನಮೋಹನಸಿಂಗ್ ಅವರ
10 ವರ್ಷದಲ್ಲಿ ಅವರ ಹೆಸರು ಎಲ್ಲೂ ಕೇಳಿಲ್ಲ. ಆದರೆ 5 ವರ್ಷದಲ್ಲಿ ಮೋದಿ ಹೆಸರು ಸಣ್ಣ ಮಗುವಿಂದ ಕೇಳಿ ಬರುತ್ತಿದೆ ಎಂದರು.
ಗೂಂಡಾ ಸಂಸ್ಕೃತಿ: ಸಿಎಂ ಕುಮಾರಸ್ವಾಮಿ ಯಾರು ಹಸಿವಿನಿಂದ ಬಳಲುವರೋ ಅವರು ಸೈನ್ಯಕ್ಕೆ ಹೋಗ್ತಾರೆ ಎಂದಿದ್ದಾರೆ. ಇಂತಹ ಸಿಎಂಗೆ ನಾವು ಏನು ಅನ್ನಬೇಕು. ಗೂಂಡಾ ಸಂಸ್ಕೃತಿಯ ಸಿಎಂ ನಮಗೆ ಬೇಕಾ..? ಸಚಿವ ರೇವಣ್ಣ ಮೋದಿ ಮತ್ತೆ ಪಿಎಂ ಆದರೆ ರಾಜಕೀಯ ನಿವೃತ್ತಿ ಪಡೆವೆ ಅಂತಾರೆ. ರೇವಣ್ಣ ರಾಜಕೀಯ ನಿವೃತ್ತಿ ಪಡೆಯಲು ಸಿದ್ಧವಾಗಿರಿ. ಕೇಂದ್ರದಲ್ಲಿ ಮೋದಿ ಸರ್ಕಾರ ಬರುತ್ತೆ ಎಂದು ಹೇಳಿದ ಅವರು, ಬೂತ್ ಮಟ್ಟದಲ್ಲಿ ಪ್ರತಿಯೊಬ್ಬರೂ ಹೆಚ್ಚು ಮತ ಹಾಕಿಸಿ ಲಕ್ಷ ಮತಗಳ ಅಂತರದಲ್ಲಿ ಕೊಪ್ಪಳ, ಬಳ್ಳಾರಿ, ರಾಯಚೂರು ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಕರೆ ನೀಡಿದರು.
ಸಿಎಂ ಕ್ಷಮೆ ಕೇಳಲಿ: ಬಿಜೆಪಿ ಉಗ್ರಗಾಮಿಗಳ ತಾಂಡವ ನೃತ್ಯ ಹತ್ತಿಕ್ಕಲು ಜಮ್ಮು-ಕಾಶ್ಮೀರ ಮೀಸಲು ರದ್ದತಿಗೆ ನಾವು ವಾಗ್ಧಾನ ಮಾಡಿದೆ. ಚುನಾವಣೆ ಮುಗಿದ ಬಳಿಕ ಮೈತ್ರಿ ಸರ್ಕಾರ ಉಳಿಯಲ್ಲ. ಉಳಿಯಲು ಸಾಧ್ಯವಿಲ್ಲ. ನಾನು ಸಿಎಂ ಆಗೋದನ್ನು ತಪ್ಪಿಸಲು ಕಾಂಗ್ರೆಸ್ -ಜೆಡಿಎಸ್ ಜೊತೆ ಮೈತ್ರಿ ಮಾಡಿತು. ಸಿಎಂ ಮಾಧ್ಯಮದ ಮೇಲೂ ಧಮಕಿ ಹಾಕುಲು ಮುಂದಾಗಿದ್ದಾರೆ. ಈ ಕೂಡಲೇ ಮಾಧ್ಯಮದ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಸಿಎಂ ಕುಮಾರಸ್ವಾಮಿಯಿಮದ ರೈತರಿಗೆ ಮೋಸ: ರೈತರ ಸಾಲ ಮನ್ನಾ ಮಾಡುವ ಮಾತನ್ನಾಡಿದ್ದೀರಿ. 45 ಸಾವಿರ ಕೋಟಿ ಸಾಲದಲ್ಲಿ ಈ ವರೆಗೂ 4500 ಕೋಟಿ ಸಾಲ ಮನ್ನಾ ಆಗಿದೆ. ರೈತರಿಗೆ ಮೋಸ ಮಾಡಿದ್ದೀರಿ. ಈ ಚುನಾವಣೆ ಮಹತ್ವ ಅರಿತು ಹಣ, ಹೆಂಡ, ಜಾತಿ, ತೋಳ್ಬಲದಿಂದ ಮತದಾರ ದೂರವಿರಬೇಕು. ಮೋದಿ ಹಗಲಿರುಳು ಕೆಲಸ ಮಾಡುತ್ತಿದ್ದು, ಒಂದು ದಿನವೂ ರಜೆ ಪಡೆಯದೇ ಕೆಲಸ ಮಾಡಿದ್ದಾರೆ. ನಾವು ಚುನಾವಣೆ ಮುಗಿಯುವವರೆಗೂ ವಿಶ್ರಾಂತಿ ಪಡೆಯದೇ ಮತ ಪಡೆಯಬೇಕು ಎಂದರು.
ಅಲ್ಲಿ ಮೋದಿ ಸರ್ಕಾರ, ಇಲ್ಲಿ ಬಿಜೆಪಿ ಸರ್ಕಾರ: ನದಿ ಜೋಡಣೆ ಕುರಿತು ಮೋದಿ ಭರವಸೆ ಕೊಟ್ಟಿದ್ದಾರೆ. ನೀರಾವರಿ ಯೋಜನೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. 10 ವರ್ಷದ ಹಿಂದೆ ನಮ್ಮ ದೇಶದ ಸ್ಥಿತಿ ಹೇಗಿತ್ತು? ಈ 5 ವರ್ಷದಲ್ಲಿ ನಮ್ಮ ದೇಶದ ಸ್ಥಿತಿ ಹೇಗಿದೆ ಎಂದು ಜನತೆಗೆ ಗೊತ್ತಿದೆ. ಒಬ್ಬ ದಲಿತ ನಾಯಕನನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದಾರೆ. ಇನ್ನೂ ಕೆಲವೇ ದಿನದಲ್ಲಿ ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿ ಕಾರಕ್ಕೆ ಬರಲಿದೆ. ಇಲ್ಲಿ ಬಿಜೆಪಿ ಸರ್ಕಾರ ಅ ಧಿಕಾರ ಹಿಡಿಯಲಿದೆ ಎನ್ನುವ ಮಾತನ್ನಾಡಿದರು.
ಮಾಜಿ ಸಿಎಂ ಜಗದೀಶ್ ಶೆಟ್ಟರ ಮಾತನಾಡಿ, ಈ ದೇಶದ ಮುಂದಿನ ಪ್ರಧಾನಿ ಮೋದಿ ಆಗಬೇಕಿದೆ. ಬಿರು ಬಿಸಿಲಿನಲ್ಲೂ ಜನಸ್ತೋಮ ನೋಡಿದರೆ ಎರಡು
ಕಣ್ಣು ಸಾಲದು. ಮೂರು ಜಿಲ್ಲೆ ಸಂಸದರನ್ನು ಗೆಲ್ಲಿಸಿ ಲೋಕಸಭೆಗೆ ಕಳಿಸಿದರೆ ಮೋದಿ ಪ್ರಧಾನಿಯಾಗಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.