ಸ್ವಾತಂತ್ರ್ಯೋತ್ಸವ ಅದ್ಧೂರಿ ಆಚರಣೆಗೆ ಸಕಲ ಸಿದ್ಧತೆ

ತಹಶೀಲ್ದಾರ್‌ ಜಿ.ಅನಿಲ್‌ ಕುಮಾರ ಮಾಹಿತಿ

Team Udayavani, Jul 26, 2019, 3:45 PM IST

26-July-34

ಕೊಟ್ಟೂರು: ಸ್ವಾತಂತ್ರ್ಯೋತ್ಸವ ಪೂರ್ವ ಸಿದ್ಧತಾ ಸಭೆಯಲ್ಲಿ ತಹಶೀಲ್ದಾರ್‌ ಮಾತನಾಡಿದರು

ಕೊಟ್ಟೂರು: ತಾಲೂಕು ಆಡಳಿತದಿಂದ ಆ. 15 ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿ ಮತ್ತು ವೈಭವದಿಂದ ಆಚರಿಸಲು ಸಿದ್ಧತೆ ನಡೆದಿದೆ ಎಂದು ತಹಶೀಲ್ದಾರ ಜಿ.ಅನಿಲ್ ಕುಮಾರ ತಿಳಿಸಿದರು.

ಕೊಟ್ಟೂರಿನ ಪ್ರವಾಸಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕು ಆಡಳಿತದಿಂದ ಇಲ್ಲಿನ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಆ. 15ರ ಬೆಳಗ್ಗೆ 8:30ಕ್ಕೆ ಧ್ವಜಾರೋಹಣ ನಡೆಯಲಿದೆ. ಶಾಸಕ ಎಸ್‌. ಭೀಮಾನಾಯ್ಕ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಪ್ರತಿಯೊಂದು ಶಾಲಾ ಮಕ್ಕಳಿಗೆ ಶಾಸಕ ಎಸ್‌. ಭೀಮಾನಾಯ್ಕರು ಸಿಹಿಯನ್ನು ಕಳುಹಿಸಲಿದ್ದು ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಎಲ್ಲಾ ಮಕ್ಕಳಿಗೂ ಮತ್ತು ಶಿಕ್ಷಕರಿಗೆ ಬೆಳಗಿನ ಉಪಾಹಾರ ವ್ಯವಸ್ಥೆ ಆಯೋಜಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಕಾರ್ಯಕ್ರಮ ಯಶಸ್ವಿಗೊಳಿಸಲು ವಿವಿಧ ಬಗೆ ಉಪಸಮಿತಿಗಳನ್ನು ರಚಿಸಲಾಗುವುದು. ಫೆರೆಡ್‌ ಮತ್ತು ಕವಾಯಿತು ಪ್ರದರ್ಶನವನ್ನು ಪೊಲೀಸ್‌ ಮತ್ತು ಶಿಕ್ಷಣ ಇಲಾಖೆಯವರು ಸಹಯೋಗದೊಂದಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಿಕ್ಷಣ ಇಲಾಖೆಯವರು ನಿರ್ವಹಿಸುತ್ತಾರೆ.

ಸ್ವಾತಂತ್ರ ಹೋರಾಟಗಾರರ ಕುಟುಂಬದವರು ಮತ್ತು ಇತರ ಸಾಧಕರನ್ನು ಸನ್ಮಾನಿಸಿ ಅಭಿನಂದಿಸಲು ಉಪಸಮಿತಿ ಶಿಫಾರಸ್ಸು ಪಡೆಯಲಾಗುವುದು. ರಸಪ್ರಶ್ನೆ, ಪರಿಸರ ಮತ್ತು ಭಾಷಣ ಸ್ಪರ್ಧೆಗಳನ್ನು ಪ್ರಾಥಮಿಕ ಪ್ರೌಢಶಾಲಾ ಮತ್ತು ಕಾಲೇಜು ಹಂತಗಳಲ್ಲಿ ನಡೆಸಿ ಅದರಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ನೀಡಲಾಗುವುದು. ಸಮಾರಂಭದ ವೇದಿಕೆ ನಿರ್ಮಾಣ ಮತ್ತು ಸ್ವಚ್ಛತಾ ಕಾರ್ಯವನ್ನು ಪಟ್ಟಣ ಪಂಚಾಯಿತಿ ಆಡಳಿತ ನಿರ್ವಹಿಸಲಿದೆ ಎಂದು ಹೇಳಿದರು.

ಜಿಪಂ ಸದಸ್ಯ ಎಂ.ಎಂ. ಜೆ ಹರ್ಷವರ್ಧನ ಮಾತನಾಡಿ, ಕಾರ್ಯಕ್ರಮದ ಯಶಸ್ವಿಗೆ ಹಣಕಾಸಿನ ನೆರವು ಅಗತ್ಯವಿದ್ದು ಅದಕ್ಕಾಗಿ ಸ್ವಂತವಾಗಿ 10 ಸಾವಿರರೂಗಳನ್ನು ತಾಲೂಕು ಆಡಳಿತಕ್ಕೆ ನೀಡಲಾಗುವುದು ಎಂದರು. ಹಗರಿಬೊಮ್ಮನಹಳ್ಳಿ ತಾಪಂ ಉಪಾಧ್ಯಕ್ಷ ಕೊಚಾಲಿ ಸುಶೀಲಮ್ಮ ಮಂಜುನಾಥ ಮಾತನಾಡಿ, ಸಮಾರಂಭದಲ್ಲಿ ಮಾಜಿ ಯೋಧರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರನ್ನು ಮತ್ತು ಇತರ ಗಣ್ಯರನ್ನು ಸನ್ಮಾನಿಸುವ ವೆಚ್ಚವನ್ನು ತಾವು ಭರಿಸುವುದಾಗಿ ಹೇಳಿದರು.

ತಾಪಂ ಸದಸ್ಯರಾದ ಬೋರವೆಲ್ ತಿಪ್ಪೇಸ್ವಾಮಿ, ಭರಮಣ್ಣ, ಸಿದ್ದಯ್ಯ, ವಿನಯ್‌, ವೀಣಾ ವಿವೇಕಾನಂದಗೌಡ, ತೋಟದ ರಾಮಣ್ಣ, ಕೆಂಗರಾಜ್‌, ರಾಜೇಶ ಮಾತನಾಡಿ, ಸಮಾರಂಭದಲ್ಲಿ ಪೌರ ಕಾರ್ಮಿಕರನ್ನು ಸನ್ಮಾನಿಸುವ ವೆಚ್ಚವನ್ನು ಭರಿಸುವುದಾಗಿ ಪ್ರಕಟಿಸಿದರು.

ಪಪಂ ಮುಖ್ಯಾಧಿಕಾರಿ ಎಚ್.ಎಫ್‌. ಬಿದರಿ, ಖಜಾನೆ ಅಧಿಕಾರಿ ಶಕುಂತಲಮ್ಮ, ಎಸ್‌ಎಸ್‌ಐ ಗುರುಸ್ವಾಮಿ ಶಿಕ್ಷಣ ಇಲಾಖೆ ಅಧಿಕಾರಿಗಳಾದ ಸಿ.ಅಜ್ಜಪ್ಪ, ಕೊಟ್ರೇಶ, ತಾಪಂ ಸದಸ್ಯ ಗುರುಮೂರ್ತಿ ಶ್ಯಾನುಬೋಗರ್‌, ಎಪಿಎಂಸಿ ಅಧ್ಯಕ್ಷ ಬೂದಿ ಶಿವಕುಮಾರ, ಪಿ. ಸುಧಾಕರಗೌಡ ಇದ್ದರು. ಕಂದಾಯ ಇಲಾಖೆಯ ಎಸ್‌.ವಿ. ಬಸವರಾಜ ವಂದಿಸಿದರು.

ಟಾಪ್ ನ್ಯೂಸ್

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

9-bng

Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ

8-bng

Bengaluru: ಕದ್ದ ಮೊಬೈಲ್‌ ಕೊರಿಯರ್‌ ಮೂಲಕ ಕೇರಳಕ್ಕೆ ರವಾನೆ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

Kiran Raj will be a superhero in next film

Kiran Raj: ಸೂಪರ್‌ ಹೀರೋ ಆಗಲಿದ್ದಾರೆ ಕಿರಣ್‌ ರಾಜ್‌

5-agri

Bengaluru: ಸಾವಯವ, ಸಿರಿಧಾನ್ಯ ಉತ್ಪನ್ನಕ್ಕೆ ಮುಗಿಬಿದ್ದ ಜನ

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

9-bng

Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.