ಅಭಿವೃದ್ಧಿಶೀಲ ದೇಶಕ್ಕೆ ವೈಜ್ಞಾನಿಕ ನಿಲುವು ಪೂರಕ
ಪ್ರಸ್ತುತ ಹೊಸ ಅವಿಷ್ಕಾರದ ಅಗತ್ಯವಿದೆ: ಪ್ರೊ| ನೀಲ್ ಕಮಲ್
Team Udayavani, Sep 1, 2019, 4:34 PM IST
ಕೂಡ್ಲಿಗಿ: ತಾಲೂಕು ಚಿಕ್ಕಜೋಗಿಹಳ್ಳಿಯ ಕೇಂದ್ರೀಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಶನಿವಾರ ಕ್ಲಸ್ಟರ್ ವಲಯದ ವಿಜ್ಞಾನವಸ್ತು ಪ್ರದರ್ಶನದಲ್ಲಿ ಐಐಟಿ ಕೇಂದ್ರದ ಪ್ರಾಧ್ಯಾಪಕ ಪ್ರೊ. ನೀಲ್ಕಮಲ್ ಮತ್ತು ಮಾಜಿ ಶಾಸಕ ಕೆ.ವಿ. ರವೀಂದ್ರನಾಥ ಬಾಬು ವಿದ್ಯಾರ್ಥಿಗಳಿಂದ ವಿಜ್ಞಾನಕ್ಕೆ ಸಂಬಂಧಿಸಿದ ಮಾಹಿತಿ ಪಡೆದರು.
ಕೂಡ್ಲಿಗಿ: ದೇಶವು ಅಭಿವೃದ್ದಿ ಪಥದಲ್ಲಿ ಸಾಗುತ್ತಿರುವ ಪ್ರಸುತ್ತ ಸಂದರ್ಭದಲ್ಲಿ ಸಾಮಾಜಿಕ, ಶೈಕ್ಷಣಿಕ, ಅರ್ಥಿಕವಾಗಿ ಪ್ರಗತಿ ಕಾಣಬೇಕಿದೆ. ಹಾಗಾಗಿ ವಿದ್ಯಾರ್ಥಿಗಳು ವೈಜ್ಞಾನಿಕ ಸಂಶೋಧನೆ ವಿಚಾರಗಳ ಜೊತೆಯಲ್ಲಿ ಹೊಸ ಅವಿಷ್ಕಾರದತ್ತ ದಾಪುಗಾಲು ಇಡಬೇಕಿದೆ ಎಂದು ಧಾರವಾಡ ಪ್ರತಿಷ್ಠಿತ ಐಐಟಿ ಕೇಂದ್ರದ ಪ್ರಾಧ್ಯಾಪಕ ಪ್ರೊ.ನೀಲ್ ಕಮಲ್ ತಿಳಿಸಿದರು.
ಅವರು ಶನಿವಾರ ತಾಲೂಕಿನ ಚಿಕ್ಕಜೋಗಿಹಳ್ಳಿ ಕೇಂದ್ರೀಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಶನಿವಾರ ಕ್ಲಸ್ಟರ್ ವಲಯದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ಭಾಗವಹಿಸಿ ಮಾತನಾಡಿದರು.
ದೇಶದ ಪ್ರಗತಿಗೆ ಸಾಮಾಜಿಕ ವಿಜ್ಞಾನ ಎಷ್ಟು ಮುಖ್ಯವೊ, ವೈಜ್ಞಾನಿಕ ನಿಲವು ಅಷ್ಟೆ ಮುಖ್ಯವಾಗಿರುತ್ತದೆ ಎಂಬುದನ್ನು ಮೊದಲು ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು. ಅಲ್ಲದೆ ಅಭಿವೃದ್ಧಿಶೀಲ ದೇಶವಾಗಿರುವ ಭಾರತದ ಮುಂದೆ ಭವಿಷ್ಯದಲ್ಲಿ ವಿದ್ಯಾರ್ಥಿಗಳ ಕೊಡುಗೆ ಅನನ್ಯವಾಗಿರುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಶೈಕ್ಷಣಿಕ ಸಮಯದಲ್ಲಿ ವ್ಯರ್ಥವಾಗಿ ಕಾಲಹರಣ ಮಾಡಬಾರದು ಎಂದು ಕಿವಿಮಾತು ಹೇಳಿದರು.
ಕೊಟ್ಟೂರು ಕ್ಷೇತ್ರದ ಮಾಜಿ ಶಾಸಕ ಕೆ.ವಿ.ರವೀಂದ್ರನಾಥ ಬಾಬು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಡೀ ಜಗತ್ತು ಪರಿಸರ ಅಸಮತೋನದಿಂದ ನರಳುತ್ತಿದೆ. ಭಾರತವು ಸೇರಿದಂತೆ ಜಗತ್ತಿನ ಅನೇಕ ದೇಶಗಳು ಪ್ರಕೃತಿ ವಿಕೋಪದಿಂದ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಹಾಗಾಗಿ ಪ್ರಕೃತಿಯಲ್ಲಿ ಪರಿಸರ ಸಮತೋಲನ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆಂಬುದನ್ನು ಅರಿತು ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ವೈಜ್ಞಾನಿಕ ವಿಚಾರಗಳು, ಅಧ್ಯಯನ, ಸಂಶೋಧನೆ ಬಗ್ಗೆ ಕಾಳಜಿವಹಿಸಬೇಕು ಎಂದರು.
ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೆಳಗಾವಿ, ಗದಗ, ಬಾಗಲಕೋಟೆ ಸೇರಿದಂತೆ 10ಕ್ಕೂ ಹೆಚ್ಚು ನವೋದಯ ವಿದ್ಯಾಲಯಗಳ 65 ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಸ್ತು ಪ್ರದರ್ಶನದ ತೀರ್ಪುಗಾರರಾಗಿ ಡಾ| ಕಮಾನಿ, ಡಾ| ಪಾಲಾಕ್ಷಮೂರ್ತಿ, ಡಾ| ರತಗೇರಿ, ಚಿತ್ರದುರ್ಗ ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರೊ. ಗುಡದೇಶಪ್ಪ ಕಾರ್ಯನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಕೂಡ್ಲಿಗಿ ಬಿಇಒ ಜಿ.ಉಮಾದೇವಿ, ಪ್ರಾಚಾರ್ಯ ಸುಂದರ್, ಎಸ್ ಬಿಐ ಬ್ಯಾಂಕ್ ವ್ಯವಸ್ಥಾಪಕ ರಸನಾನಂದ ಬೇಹರ, ಉಪಪ್ರಾಚಾರ್ಯ ಮಣಿಬೆನ್, ಉಪನ್ಯಾಸಕರಾದ ಮಲ್ಲಪ್ಪ, ಮನೋಹರ ಪಿಳ್ಳೆ, ಪದ್ಮಸಾಹು, ಗಬ್ಬೂರು ಬಸವರಾಜ್, ಚಿಕ್ಕಜೋಗಿಹಳ್ಳಿ ಸಿಆರ್‌ಪಿ ಮೋಹನ್ ಭಾಗಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.