ಮಳೆಗೆ ಬೆಳೆ ನೀರು ಪಾಲು: ಪರಿಹಾರಕ್ಕೆ ರೈತರ ಒತ್ತಾಯ
Team Udayavani, Oct 30, 2019, 4:45 PM IST
ಕೂಡ್ಲಿಗಿ: ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರೈತರ ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದೆ. ಹಾಗಾಗಿ ಉಪಮುಖ್ಯಮಂತ್ರಿಗಳು ಹಾಗೂ ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಅವರು ಈ ಕೂಡಲೇ ತ್ವರಿತವಾಗಿ ರೈತರ ನಷ್ಟದ ಅಂದಾಜು ಮಾಡಿ ಪರಿಹಾರ ನೀಡಬೇಕು
ಹಾಗೂ ಮನೆಯನ್ನು ಕಳೆದುಕೊಂಡವರಿಗೆ ಮನೆಯನ್ನು ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಹುಚ್ಚವ್ವನಹಳ್ಳಿ ಮಂಜುನಾಥ ಬಣದ ಬಳ್ಳಾರಿ ಜಿಲ್ಲಾ ಅಧ್ಯಕ್ಷ ದೇವರಮನಿ ಮಹೇಶ ಅವರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ರೈತರು ಸಾಲ ಮಾಡಿ ಜೋಳ, ಮೆಕ್ಕೆಜೋಳ, ಸಜ್ಜೆ, ಮಿಡಿಸೌತೆ, ಮೆಣಸಿನಕಾಯಿ, ಪಪ್ಪಾಯಿ, ಈರುಳ್ಳಿ, ಟೊಮಟೋ ಮುಂತಾದ ಬೆಳೆಗಳನ್ನು ಬೆಳೆದಿದ್ದರು. ಅಲ್ಪಸ್ವಲ್ಪ ಮಳೆಗೆ ಫಸಲು ಬಂದಿತ್ತು. ಆದರೆ ಫಸಲು ಬರುವ ಸಮಯದಲ್ಲಿ ಚಂಡಮಾರುತ ಮಳೆಗೆ ಎಲ್ಲ ಬೆಳೆಗಳು ನೆಲಸಮವಾಗಿ ಕೊಳೆತು ಫಸಲು ರೈತರ ಕೈಗೆ ಬರದೇ ರೈತರ ಬದುಕೀಗ ಅತಂತ್ರ ಪರಿಸ್ಥಿತಿಯಾಗಿದೆ.
ಸರ್ಕಾರ ಪ್ರತಿ ಎಕರೆಗೆ 50 ಸಾವಿರ ಪರಿಹಾರವನ್ನು ನೀಡಬೇಕು. ಮಳೆಯಿಂದ ಸಂಪೂರ್ಣ ಮನೆಯನ್ನು ಕಳೆದುಕೊಂಡ ಸಂತ್ರಸ್ತರಿಗೆ ಒಂದು ಮನೆಗೆ 10 ಲಕ್ಷ ರೂ. ಪರಿಹಾರ ನೀಡಬೇಕೆಂದು ದೇವರಮನಿ ಮಹೇಶ್ ಈ ಸಂದರ್ಭದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರೈತಸಂಘಟನೆಯ ಕೂಡ್ಲಿಗಿ ತಾಲೂಕು ಪ್ರಧಾನ ಕಾರ್ಯದರ್ಶಿ ಎನ್. ಪಕ್ಕೀರಪ್ಪ, ಜಿಲ್ಲಾ ಉಪಾಧ್ಯಕ್ಷ ಎಂ. ಪ್ರಕಾಶ, ಎಂ. ಸೋಮಣ್ಣ, ತಾಲೂಕು ರೈತ ಸಂಘದ ಗೌರವಾಧ್ಯಕ್ಷ ವೀರಭದ್ರಪ್ಪ, ಸಂಡೂರು ತಾಲೂಕು ಅಧ್ಯಕ್ಷ ಡಿ. ಹನುಮಂತಪ್ಪ, ಹಸಿರು ಸೇನೆ ಕೂಡ್ಲಿಗಿ ಪಟ್ಟಣ ಅಧ್ಯಕ್ಷ ಮೌಲಾ ಹುಸೇನ್, ಖಜಾಂಚಿ ರಾಜಸಾಬ್, ರೈತ ಮುಖಂಡರಾದ ಬೊಪ್ಪಲಾಪುರ ಪರುಸಪ್ಪ, ಎಸ್. ಬೊಮ್ಮಪ್ಪ, ಎ.ಷಣ್ಮುಖಪ್ಪ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
ಕರಾವಳಿಯಲ್ಲಿ ಕಾಶ್ಮೀರಿ ಕೇಸರಿ ಬೆಳೆದ ಟೆಕ್ಕಿಗಳು; ಹೊಸ ಪ್ರಯೋಗದಲ್ಲಿ ಮೊದಲ ಯಶಸ್ಸು !
Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ
Mangaluru: ಎಂಟು ಹೊಸ ರೂಟ್‌ಗಳಲ್ಲಿ ಪರವಾನಿಗೆಗೆ ಪ್ರಸ್ತಾವ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Olympics; 2036ರ ಒಲಿಂಪಿಕ್ಸ್‌ಗೆ ಬಿಡ್: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.