ಸ್ವಾತಂತ್ರ್ಯ ದೇಶದ ಅಭಿವೃದ್ಧಿಗೆ ಪೂರಕವಾಗಿರಲಿ

ತಾಲೂಕಿನ ಕೆರೆಗಳಿಗೆ ಶಾಶ್ವತ ನೀರುಣಿಸುವ ಯೋಜನೆ ಸಾಕಾರಗೊಳಿಸುವೆ: ಎನ್‌.ವೈ. ಗೋಪಾಲಕೃಷ್ಣ

Team Udayavani, Aug 16, 2019, 5:22 PM IST

16-Agust-41

ಕೂಡ್ಲಿಗಿ: ಸ್ವಾತಂತ್ರ್ಯ ಮತ್ತೂಬ್ಬರ ಸ್ವಾತಂತ್ರ್ಯಕ್ಕೆ ಧಕ್ಕೆ ಬಾರದಂತೆ ಇರಬೇಕು. ಸ್ವೇಚ್ಛಾಚಾರವಾಗಬಾರದು ಅದು ನಿಜವಾದ ಸ್ವಾತಂತ್ರ್ಯ ಎಂದು ಕೂಡ್ಲಿಗಿ ಶಾಸಕ ಎನ್‌.ವೈ. ಗೋಪಾಲಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ತಾಲೂಕು ಆಡಳಿತ ಪಟ್ಟಣದ ಮಹದೇವ ಮೈಲಾರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 73ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಇಂದಿನ ಯುವ ಪೀಳಿಗೆ ಸ್ವಾತಂತ್ರ್ಯದ ಮಹತ್ವ ಅರಿತು ದೇಶಭಕ್ತಿ ಮೂಡಿಸಿಕೊಳ್ಳಬೇಕಿದ್ದು ತ್ಯಾಗ, ಬಲಿದಾನಗಳ ಮೂಲಕ ದೊರೆತ ಸ್ವಾತಂತ್ರ್ಯವನ್ನು ದುರುಪಯೋಗಪಡಿಸದೇ ದೇಶದ ಅಭಿವೃದ್ಧಿಗೆ ಪೂರಕವಾಗಿರಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕೂಡ್ಲಿಗಿ ತಾಲೂಕಿನಲ್ಲಿ ಮಿನಿ ವಿಧಾನಸೌಧ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಅತ್ಯಂತ ಹಿಂದುಳಿದ ತಾಲೂಕಿನ ಜನತೆ ಮೂಲಸೌಕರ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸದಾ ಬರಗಾಲದಿಂದ ತತ್ತರಿಸುತ್ತಿರುವ ಕೂಡ್ಲಿಗಿ ತಾಲೂಕಿನ ರೈತರಿಗೆ ವರವಾಗುವ ಹಾಗೇ ಇಲ್ಲಿಯ ಕೆರೆಗಳಿಗೆ ಶಾಶ್ವತ ನೀರುಣಿಸುವ ಯೋಜನೆ ಸಾಕಾರಗೊಳಿಸುವುದಾಗಿ ಭರವಸೆ ವ್ಯಕ್ತಪಡಿಸಿದರು.

ಧ್ವಜಾರೋಹಣ ನಡೆಸಿದ ಕೂಡ್ಲಿಗಿ ತಹಶೀಲ್ದಾರ್‌ ಮಹಾಬಲೇಶ್ವರ ಮಾತನಾಡಿ, ಕೂಡ್ಲಿಗಿ ತಾಲೂಕಿನಲ್ಲಿ ಗಾಂಧಿಧೀಜಿ ಚಿತಾ ಭಸ್ಮವಿರುವ ಹುತಾತ್ಮರ ಸ್ಮಾರಕ ಇರುವುದು ನಮ್ಮೆಲ್ಲರ ಹೆಮ್ಮೆಯಾಗಿದೆ. ತಾಲೂಕು ಹಿಂದುಳಿದ ಪ್ರದೇಶವಾಗಿದ್ದರೂ ಇಲ್ಲಿಯ ಐತಿಹಾಸಿಕ, ಸಾಂಸ್ಕೃತಿಕ, ಪುರಾತನ ನೆಲೆಗಳು, ವೈವಿಧ್ಯತೆ, ಪ್ರಾಕೃತಿಕ ಸಂಪನ್ಮೂಲಗಳಿಂದ ಕೂಡಿದ್ದು ಈ ತಾಲೂಕಿನ ಹೆಮ್ಮೆಯಾಗಿದೆ ಎಂದರು.

ಗಮನಸೆಳೆದ ದೇಶಭಕ್ತಿಗೀತೆ:ಮಾಳ್ಗಿ ರಾಘವೇಂದ್ರ, ಸಚಿನ್‌, ಗುರು ನಿರ್ದೇಶನದಲ್ಲಿ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮಕ್ಕಳು ಪ್ರದರ್ಶಿಸಿದ ನೃತ್ಯ ನೆರೆದಿದ್ದವರಲ್ಲಿ ದೇಶಭಕ್ತಿಯ ಕಿಚ್ಚು ಹಚ್ಚಿತು. ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ. ರಜನೀಕಾಂತ್‌, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸಣ್ಣ, ಪಟ್ಟಣ ಪಂಚಾಯಿತಿ ಅಧಿಕಾರಿ ಪಕೃದ್ದೀನ್‌, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಾಲ್ತೂರು ಶಿವರಾಜ್‌, ಕೂಡ್ಲಿಗಿ ಡಿವೈಎಸ್‌ಪಿ ಶಿವಕುಮಾರ್‌, ತಾಪಂ ಸದಸ್ಯರಾದ ಕೆ. ಚಿನ್ನಾಪ್ರಪ್ಪ, ಕೂಡ್ಲಿಗಿ ತಾಲೂಕು ಬಿಜೆಪಿ ಅಧ್ಯಕ್ಷ ಕೆ.ಎಚ್. ವೀರನಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ, ಪಪಂ ಸದಸ್ಯರಾದ ಎನ್‌.ಎಂ. ನೂರ್‌ ಅಹಮದ್‌, ಚೌಡಪ್ಪ, ಎಸ್‌.ದುರುಗೇಶ್‌, ಕೆ. ಶಿವಪ್ಪನಾಯಕ, ನಿವೃತ್ತ ಶಿಕ್ಷಕರಾದ ಎ.ಎಂ. ವೀರಯ್ಯ, ಡಿ. ನಾಗರಾಜಪ್ಪ ಮುಂತಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕ್ರೀಡೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕೆ.ಎಂ. ಶರಣೇಶ್‌, ಸಾವಯವ ಕೃಷಿ ಸಾಧಕರಾದ ಹೆಚ್.ವಿ. ಸಜ್ಜನ್‌, ರಾಮನಾಯ್ಕ ಹಾಗೂ ಎಸ್‌ಎಸ್‌ಎಲ್ಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

10-mambadi

ಮಾಂಬಾಡಿ ಸುಬ್ರಹ್ಮಣ್ಯ ಭಟ್ ಗೆ ಕರ್ನಾಟಕ ಯಕ್ಷಗಾನ ಅಕಾಡಮಿಯ ಪಾರ್ತಿಸುಬ್ಬ ಪ್ರಶಸ್ತಿ ಘೋಷಣೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mambadi

ಮಾಂಬಾಡಿ ಸುಬ್ರಹ್ಮಣ್ಯ ಭಟ್ ಗೆ ಕರ್ನಾಟಕ ಯಕ್ಷಗಾನ ಅಕಾಡಮಿಯ ಪಾರ್ತಿಸುಬ್ಬ ಪ್ರಶಸ್ತಿ ಘೋಷಣೆ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

10-mambadi

ಮಾಂಬಾಡಿ ಸುಬ್ರಹ್ಮಣ್ಯ ಭಟ್ ಗೆ ಕರ್ನಾಟಕ ಯಕ್ಷಗಾನ ಅಕಾಡಮಿಯ ಪಾರ್ತಿಸುಬ್ಬ ಪ್ರಶಸ್ತಿ ಘೋಷಣೆ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.