ನಿಯಮ ಮೀರಿ ನಿವೇಶನ ಹಂಚಿಕೆ

ಹ್ಯಾಳ್ಯಾದಲ್ಲಿ ಜೆಸಿಬಿಯಿಂದ ಜಮೀನು ಬದು ನಿರ್ಮಾಣ: ಆರೋಪ

Team Udayavani, Dec 16, 2019, 3:50 PM IST

16-December-18

ಕೂಡ್ಲಿಗಿ: ಹ್ಯಾಳ್ಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಜಮೀನು ಬದು ನಿರ್ಮಾಣ ಕಾಮಗಾರಿ ಜೆಸಿಬಿಯಿಂದ ನಡೆದಿದೆ ಹಾಗೂ ಖಾಸಗಿ ಬಡಾವಣೆಗಳಿಗೆ ಶೇ. 78 ನಿವೇಶನಗಳನ್ನು ಬಡಾವಣೆ ಅಭಿವೃದ್ಧಿಯಾಗುವುದಕ್ಕೆ ಮುಂಚೆಯೇ ಹಂಚಿಕೆ ಮಾಡಿದ್ದಾರೆ ಎಂದು ತಾಲೂಕು ಪಂಚಾಯ್ತಿ ಅಧ್ಯಕ್ಷ ವೆಂಕಟೇಶ ನಾಯ್ಕ ಆರೋಪಿಸಿದರು.

ಕೂಡ್ಲಿಗಿ ಪಟ್ಟಣದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು. ಇದಕ್ಕೆ ತಾಲೂಕು ಕೃಷಿ ಅಧಿಕಾರಿ ಪ್ರಕಾಶ್‌ ಪ್ರತಿಕ್ರಿಯಿಸಿ, ನಮ್ಮ ತಾಲೂಕಿನಲ್ಲಿ ಜೆಸಿಬಿಯಿಂದ ಕಾಮಗಾರಿ ನಡೆದಿರುವುದು ನನ್ನ ಗಮನಕ್ಕೆ ಬಂದಿಲ್ಲ ಎರಡು ಮೂರು ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಿ ಸಭೆಗೆ ಉತ್ತರ ನೀಡುವುದಾಗಿ ತಿಳಿಸಿದರು. ಹ್ಯಾಳ್ಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಖಾಸಗಿ ಬಡಾವಣೆಗಳಲ್ಲಿ ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ನಿವೇಶನಗಳನ್ನು ಮುಂಜೂರು ಮಾಡಿದ್ದರೂ ಇದುವರೆಗು ಕ್ರಮಕೈಗೊಳ್ಳದೇ ಇರುವುದು ಯಾವ ನ್ಯಾಯ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿ ಕಾರಿಗಳು ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಸಭೆಯಲ್ಲಿ ಒತ್ತಾಯಿಸಿದರು. ಈ ಬಗ್ಗೆ ಈಗಾಗಲೇ ತಾಲೂಕು ಪಂಚಾಯ್ತಿ ಅಧಿಕಾರಿಗಳಿಗೆ ದೂರು ಸಲ್ಲಿಸಿರುವುದಾಗಿ ತಾಪಂ ಇಒ ಬಸಣ್ಣ ತಿಳಿಸಿದರು.

ಕುರಿ ಹಾಗೂ ಜಾನುವಾರುಗಳಿಗೆ ಚುಚ್ಚುಮದ್ದು ಲಸಿಕೆ ಹಾಕುವಾಗ ರೈತರು ಹಾಗೂ ಕುರಿಗಾರರಿಂದ ಹಣ ವಸೂಲಿ ಮಾಡುತ್ತಾರೆ ಎಂದು ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಅಮಲಾಪುರ ಬಸವರಾಜ ಅವರು ಸಭೆಯಲ್ಲಿ ತಾಲೂಕು ಪಶುವೈದ್ಯಾಧಿಕಾರಿ ವಿನೋದ್‌ ಕುಮಾರ್‌ ಗಮನಕ್ಕೆ ತಂದರು.

ಇದಕ್ಕೆ ಪ್ರತಿಕ್ರಿಯಿಸಿ ಕ್ರಮಕೈಗೊಳ್ಳುವುದಾಗಿ ತಿಳಿಸಿದರು. ಕೊಟ್ಟೂರು ಮತ್ತು ದೂಪದಹಳ್ಳಿ ಭಾಗದಲ್ಲಿ ಪಶುವೈದ್ಯರ ಕೊರತೆ ಇದ್ದು ಪಶು ಆಸ್ಪತ್ರೆಗೆ ಬಂದರೆ ಜಾನುವಾರುಗಳಿಗೆ ಸೂಕ್ತ ಚಿಕಿತ್ಸೆ ಮಾಡಲಾಗುವುದು ಎಂದು ತಿಳಿಸಿದರು.ನಂತರ ವಿವಿಧ ಇಲಾಖೆಗಳ ಅಭಿವೃದ್ಧಿ ಬಗ್ಗೆ ಚರ್ಚಿಸಲಾಯಿತು.

ಇದೇ ಸಂದರ್ಭದಲ್ಲಿ ಕೂಡ್ಲಿಗಿ ನೂತನ ಪಟ್ಟಣ ಪಂಚಾಯ್ತಿ ಸದಸ್ಯರಾದ ಕಾವಲ್ಲಿ ಶಿವಪ್ಪನಾಯಕ ಹಾಗೂ ತ್ರಿಮೂರ್ತಿ ಅವರನ್ನು ಸನ್ಮಾನಿಸಲಾಯಿತು. ತಾಪಂ ಅಧ್ಯಕ್ಷ ವೆಂಕಟೇಶ ನಾಯ್ಕ ಅಧ್ಯಕ್ಷತೆವಹಿಸಿದ್ದರು. ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಅಮಲಾಪುರ ಬಸವರಾಜ, ಇಓ ಬಸಣ್ಣ, ಉದ್ಯೋಗ ಖಾತ್ರಿ ಯೋಜನಾಧಿಕಾರಿ ಪ್ರಕಾಶ ನಾಯ್ಕ ಉಪಸ್ಥಿತರಿದ್ದರು. ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Bar-Associatin

Wine Merchants: ನಾಳೆಯ ಮದ್ಯ ಮಾರಾಟ ಬಂದ್‌ ನಿರ್ಧಾರ ವಾಪಸ್‌ ಪಡೆದ ಅಸೋಸಿಯೇಷನ್‌

vital

Vitla: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

vital

Vitla: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

Mahaveera Hanuma: ಆಲ್ಬಂನಲ್ಲಿ ಹನುಮ ಗಾನ

Mahaveera Hanuma: ಆಲ್ಬಂನಲ್ಲಿ ಹನುಮ ಗಾನ

Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ

Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ

vikr

Naxal: ಸರ್ಕಾರಿ ಬಸ್‌ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!

Bar-Associatin

Wine Merchants: ನಾಳೆಯ ಮದ್ಯ ಮಾರಾಟ ಬಂದ್‌ ನಿರ್ಧಾರ ವಾಪಸ್‌ ಪಡೆದ ಅಸೋಸಿಯೇಷನ್‌

vital

Vitla: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.